ಮಂಗಳೂರು: ಶಾಲಾ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಿಢೀರ್ ದಾಳಿ ಮಾಡಿದ ಪರಿಣಾಮ, 10ಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿದ್ದಾರೆ. ಇವರಲ್ಲಿ ಮೂವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯವಾಗಿರುವಂತ ಘಟನೆ ನಡೆದಿದೆ.
ಮಂಗಳೂರಿನ ಬೆಳ್ತಂಗಡಿ ತಾಲ್ಲೂಕಿನ ಕಕ್ಕಿಂಜೆ ಗ್ರಾಮದಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳು ಪ್ರಾರ್ಥನೆ ಮುಗಿಸಿ ಶಾಲೆ ಒಳಗೆ ಹೋಗುವಾಗ ಹೆಜ್ಜೇನು ದಾಳಿ ನಡೆಸಿವೆ. ಈ ದಾಳಿಯಲ್ಲಿ 15 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಇವರಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯವಾಗಿರೋದಾಗಿ ತಿಳಇದು ಬಂದಿದೆ.
ಹೆಜ್ಜೇನು ದಾಳಿಗೆ ಒಳಗಾದಂತ ವಿದ್ಯಾರ್ಥಿಗಳನ್ನು ಕಕ್ಕಿಂಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಶಾಲೆಗೆ ರಜೆಯನ್ನು ಇಂದು ಘೋಷಣೆ ಮಾಡಲಾಗಿದೆ.
ಕರ್ನಾಟಕದ ನೀರಾವರಿ ಯೋಜನೆಗಳಿಗೆ ಬಾಕಿ ಇರುವ ಅನುಮತಿ, ಅನುದಾನ ನೀಡಿ: ಕೇಂದ್ರಕ್ಕೆ DKS ಆಗ್ರಹ
BREAKING : ಬೆಂಗಳೂರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಭೀಕರ ಅಗ್ನಿ ದುರಂತ : 6 ಜನರಿಗೆ ಗಂಭೀರ ಗಾಯ!