ಮಂಗಳೂರು : ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳ ನಡುವೆ ಮಾರಾಮಾರಿ ನಡೆದಿದ್ದು, ಘಟನೆಯಲ್ಲಿ ಇಬ್ಬರು ಕೈದಿಗಳಿಗೆ ಗಾಯಗಳಾಗಿರುವ ಘಟನೆ ಮಂಗಳೂರು ಜಿಲ್ಲೆಯ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ.
ಹೌದು ಮಂಗಳೂರು ಕರಗೃಹದಲ್ಲಿ ಕೈದಿಗಳ ನಡುವೆ ಮಾರಾಮಾರಿ ನಡೆದಿದ್ದು, ವಿಚಾರಣಾಧೀನ ಕೈದಿಗಳ ಎರಡು ಗುಂಪುಗಳ ನಡುವೆ ಬಡಿದಾಟ ನಡೆದಿರುವ ಘಟನೆ ನಡೆದಿದೆ. ಘರ್ಷಣೆಯಲ್ಲಿ ಇಬ್ಬರು ಕೈದಿಗಳಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಂಗಳೂರು ಕಾರಾಗೃಹದ ಎ ಬ್ಯಾರಕ್ನಲ್ಲಿ ನಡೆದ ಘಟನೆಯಾಗಿದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹಲ್ಲೆ ಮಾಡಿದ ತಂಡದ ಸೆಲ್ ಗಳ ಮೇಲೆ ಅಧಿಕಾರಿಗಳು ದಾಳಿ ಮಾಡಿ ಇದೀಗ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ.