ಮಂಗಳೂರು : ಮಂಗಳೂರಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ರಸ್ತೆ ಗುಂಡಿಗೆ ಬಿದ್ದ ದ್ವಿಚಕ್ರ ವಾಹನ ಸವಾರೆ ಮೇಲೆಯೇ ಕ್ಯಾಂಟರ್ ಲಾರಿ ಹರಿದು, ಮಹಿಳೆ ಮೃತಪಟ್ಟಿರುವ ಘಟನೆ ಮಂಗಳೂರು ನಗರದ ಕೂಳೂರು ರಾಯಲ್ ಓಕ್ ಶೋರೂಂ ಮುಂಭಾಗ ನಡೆದಿದೆ.
ಉಡುಪಿಯ ಪರ್ಕಳ ಮೂಲದ ಮಾಧವಿ ಮೃತ ಮಹಿಳೆ. ಮಂಗಳೂರಿನ ಎ.ಜೆ.ಆಸ್ಪತ್ರೆಯ ಸಿಬ್ಬಂದಿಯಾಗಿರುವ ಮಾಧವಿ, ಕರ್ತವ್ಯಕ್ಕೆ ಹಾಜರಾಗಲು ದ್ವಿಚಕ್ರ ವಾಹನದಲ್ಲಿ ಆಗಮಿಸುತ್ತಿದ್ದರು. ದ್ವಿಚಕ್ರ ವಾಹನವು ರಸ್ತೆ ಹೊಂಡಕ್ಕೆ ಬಿದ್ದ ಪರಿಣಾಮ ಮಾಧವಿ ರಸ್ತೆಗೆ ಬಿದ್ದಿದ್ದರು. ಈ ವೇಳೆ ಹಿಂದಿನಿಂದ ಬಂದ ಕ್ಯಾಂಟರ್ ಲಾರಿ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.