ಮಂಗಳೂರು : ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಯುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿ ಯುವಕನೋರ್ವ ಮೃತಪಟ್ಟ ದಾರುಣ ಘಟನೆ ಮಂಗಳೂರು ನಗರದಲ್ಲಿ ಶನಿವಾರ ನಡೆದಿದೆ.
ತೀವ್ರ ಅನಾರೋಗ್ಯದ ಹಿನ್ನೆಲೆ ದಕ್ಷಿಣ ಕನ್ನಡದ ಕಡಬ ತಾಲೂಕಿನ ಕರ್ಮಾಯಿ ನಿವಾಸಿ ಜಾರ್ಜ್ ಎಂಬವರ ಪುತ್ರ ಜೈಸನ್ ಜಾರ್ಜ್ ಮೃತ ಯುವಕನಾಗಿದ್ದಾನೆ. 29 ವರ್ಷದ ಯುವಕ ಜೈಸನ್ ಜಾರ್ಜ್ನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಅನಾರೋಗ್ಯದಿಂದ ಬಳಲುತ್ತಿದ್ದ ಈತನನ್ನು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಶನಿವಾರದಂದು ಶಸ್ತ್ರಚಿಕಿತ್ಸೆ ನಡೆಯುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿ ಜೈಸನ್ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಶಸ್ತ್ರಚಿಕಿತ್ಸೆಗೆ ತೆರಳುವ ಮುನ್ನ ಜಾರ್ಸ್, ಸಾಕಷ್ಟು ಗಾಬರಿಗೊಂಡಿದ್ದರು. ಆಪರೇಷನ್ ಥಿಯೇಟರ್ ಗೆ ತೆರಳುವ ಮುನ್ನ ಬಿಪಿ ಕೊಂಚ ಏರಿಕೆಯಾಗಿತ್ತು. ಡಾಕ್ಟರ್ ಗಳು ಅಗತ್ಯ ಮುನ್ನೆಚ್ಚರಿಕೆ ಕೈಗೊಂಡಿದ್ದರೂ ಕೂಡಾ ಸಾವು ಸಂಭವಿಸಿದೆ ಎಂದು ವೈದ್ಯರು ತಿಳಿಸಿದ್ದಾರೆ.