ಸುಭಾಷಿತ :

Saturday, February 29 , 2020 6:23 PM

ಮಂಗಳೂರು ಗಲಭೆ : ಸಮಗ್ರ ತನಿಖೆ ಬಳಿಕ ಸತ್ಯಾಂಶ ಬಯಲು : ಕಮಿಷನರ್ ಹರ್ಷಾ ಸ್ಪಷ್ಟನೆ


Saturday, January 11th, 2020 7:42 pm

ಮಂಗಳೂರು : ಮಂಗಳೂರು ನಗರದಲ್ಲಿ ಪೌರತ್ವ ತಿದ್ದುಪಡಿ ಕಾಯಿದೆ ವಿರೋಧಿಸಿ ನಡೆದ ಪ್ರತಿಭಟನಾ ವೇಳೆ, ಉಂಟಾದ ಹಿಂಸಾಚಾರ ಪ್ರಕರಣದ ಸಂಪೂರ್ಣ ತನಿಖೆ ಬಳಿಕ ಸತ್ಯಾಂಶ ಹೊರಬೀಳಲಿದೆ ಎಂದು  ಮಂಗಳೂರು ನಗರ ಪೊಲೀಸ್‌ ಕಮಿಷನರ್‌ ಡಾ. ಪಿ.ಎಸ್‌. ಹರ್ಷ ತಿಳಿಸಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿಗ ಅವರು,  ಗಲಭೆಕೋರರ ಗುಂಪು ಹಿಂಸಾಚಾರದಲ್ಲಿ ತೊಡಗಿದಾಗ ಕರ್ತವ್ಯ ನಿರತ ಪೊಲೀಸ್‌ ಅಧಿಕಾರಿಗಳು, ಸಿಬ್ಬಂದಿ ಶಾಂತಿ – ಸುವ್ಯವಸ್ಥೆ ಪುನರ್‌ ಸ್ಥಾಪಿಸುವಲ್ಲಿ ಶ್ರಮಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿ ಕೆಲವು ದೃಶ್ಯಾವಳಿಗಳನ್ನು ಈಗಾಗಲೇ ಮಂಗಳೂರು ನಗರ ಪೊಲೀಸ್‌ನ ಅಧಿಕೃತ ಫೇಸ್‌ಬುಕ್‌ನಲ್ಲಿ ಹಾಕಲಾಗಿದೆ. ಹಿಂಸಾಚಾರಕ್ಕೆ ಸಂಬಂಧಿಸಿದ ವಿಡಿಯೋ, ದಾಖಲೆಗಳನ್ನು ಸಾರ್ವಜನಿಕರು ಕಳುಹಿಸಿ ಉತ್ತಮ ರೀತಿಯಲ್ಲಿ ಸ್ಪಂದಿಸಿದ್ದಾರೆ. ಆದರೆ, ಘಟನೆಯ ಬಗ್ಗೆ ಕೆಲವರು ಅನುಕ್ರಮಗಳು ಮತ್ತು ಪರಿಪೂರ್ಣತೆಯಿಲ್ಲದ ಕೆಲವು ಆಯ್ದ ತುಣುಕುಗಳನ್ನು ಮಾಧ್ಯಮಕ್ಕೆ ಬಿಡುಗಡೆ ಮಾಡಿದ್ದಾರೆ. ಸಮರ್ಪಕ ಮಾಹಿತಿ ನೀಡದ ಈ ತುಣುಕುಗಳನ್ನು ಸಂಪೂರ್ಣ ಆಡಿಯೋ ದೃಶ್ಯದೊಂದಿಗೆ ನೋಡುವುದು ಮತ್ತು ಸರಿಯಾಗಿ ಪರಿಶೀಲಿಸುವುದು ಅಗತ್ಯವಾಗಿದೆ ಎಂದರು

ಇನ್ನು ಸ್ವತಂತ್ರ ತನಿಖಾ ಸಂಸ್ಥೆಗಳಾದ ಸಿಐಡಿ ಮತ್ತು ಮ್ಯಾಜಿಸ್ಪ್ರೇಟ್‌ ಪ್ರತ್ಯೇಕವಾಗಿ ತನಿಖೆ ನಡೆಸುತ್ತಿದ್ದು, ಎಲ್ಲಾ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸುತ್ತಿದೆ. ಸಂಪೂರ್ಣ ತನಿಖೆಯಾದ ಬಳಿಕ ಘಟನೆಯ ಸತ್ಯಾಸತ್ಯತೆ ತಿಳಿಯಲಿದೆ ಎಂದು ವಿವರಿಸಿದರು…

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions