ಬೆಂಗಳೂರು: ದಿನಾಂಕ 26-01-2022ರಂದು ಗಣರಾಜ್ಯೋತ್ಸವ ನಿಮಿತ್ತ, ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಕವಾಯತು ಮೈದಾನದಲ್ಲಿ, ಕೊರೋನಾ ಸೋಂಕಿನ ಮುಂಜಾಗ್ರತೆ ನಡುವೆಯೂ ಸರಳವಾಗಿ ಗಣರಾಜ್ಯೋತ್ಸವ ದಿನಾಚರಣೆ ಆಚರಿಸಲಾಗುತ್ತಿದೆ. ಮಾಣಿಕ್ ಷಾ ಮೈದಾನದಲ್ಲಿ ಗಣರಾಜ್ಯೋತ್ಸವ ನಿಮಿತ್ತ, ವಾಹನ ಸಂಚಾರ ನಿಲುಗಡೆ, ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ.
15 ದಿನಗಳೊಳಗೆ ಸಂಪುಟ ವಿಸ್ತರಣೆ ಮಾಡಿದ್ರೆ ಸರಿ, ಆಮೇಲೆ ವೇಸ್ಟ್ – ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್
ಈ ಸಂಬಂಧ ಬೆಂಗಳೂರು ನಗರ ಸಂಚಾರ ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಗಣರಾಜ್ಯೋತ್ಸವ ನಿಮಿತ್ತ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಕವಾಯತು ಮೈದಾನದ ಒಳಗೆ ಮತ್ತು ಸುತ್ತಾಮುತ್ತಲಿನ ರಸ್ತೆಗಳಲ್ಲಿ ಈ ಕೆಳಗಿನಂತೆ ಸಂಚಾರ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
- ಬಿಳಿ ಬಣ್ಣದ ಪಾಸ್ ಹೊದಿರುವ ಆಹ್ವಾನಿತರು ಗೇಟ್ ನಂ.2ರಲ್ಲಿ ಹಾಗೂ ಪಿಂಕ್ ಬಣ್ಣದ ಪಾಸ್ ಹೊಂದಿರುವವರು ಗೇಡ್ ನಂ-3ರಲ್ಲಿ ಕಾಲ್ನಡಿಗೆಯ ಮೂಲಕ ಪ್ರವೇಶ ಮಾಡಬಹುದು. ವಾಹನಗಳನ್ನು ಕಬ್ಬನ್ ರಸ್ತೆ, ಮಣಿಪಾಲ್ ಸೆಂಟರ್ ನಿಂದ ಕೆ ಆರ್ ರಸ್ತೆ, ಕಬ್ಬನ್ ರಸ್ತೆ ಜಂಕ್ಷನ್ ವರೆಗೆ, ಮೈನ್ ಗಾರ್ಡ್ ಕ್ರಾಸ್ ರಸ್ತೆ ಸಫೀನಾ ಪ್ಲಾಜಾ ಮುಂಭಾಗ, ಕಾಮರಾಜ ರಸ್ತೆ ಆರ್ಮಿ ಪಬ್ಲಿಕ್ ಶಾಲೆ ಮುಂಭಾಗದ ಎರಡು ಬದಿಯಲ್ಲಿ ನಿಲುಗಡೆ ಮಾಡುವಂತೆ ತಿಳಿಸಿದ್ದಾರೆ.
- ಇನ್ನು ಸಚಿವರು, ಸರ್ಕಾರದ ಕಾರ್ಯದರ್ಶಿಗಳು ಸೇರಿದಂತೆ ಇತರೆ ಸಿಬ್ಬಂದಿಗಳು ಪ್ರವೇಶ ದ್ವಾರ-2ರ ಮುಖಾಂತರ ಒಳ ಪ್ರವೇಶಿಸಿದ ನಂತ್ರ, ಪೆರೇಡ್ ಮೈದಾನದ ಉತ್ತರ ಭಾಗದಲ್ಲಿ, ಪಶ್ಚಿಮ ಭಾಗದ ಫಿಶ್ ಬೋನ್ ಪಾರ್ಕಿಂಗ್ ನಿಲುಗಡೆ ಪ್ರದೇಶದಲ್ಲಿ ನಿಲುಗಡೆ ಮಾಡುವಂತೆ ಕೋರಿದ್ದಾರೆ.
- ಮಾದ್ಯಮದವರ ವಾಹನ, ಉಪ ಪೊಲೀಸ್ ಆಯುಕ್ತರು ಮತ್ತು ಇತರೆ ಅಧಿಕಾರಿಗಳ ವಾಹನಗಳು ಪ್ರವೇಶ ದ್ವಾರ-3ರ ಮೂಲಕ ಒಳಪ್ರವೇಶಿಸಿ, ಮೈದಾದನ ಪೂರ್ವ ಭಾಗದಲ್ಲಿ ವಾಹನ ನಿಲುಗಡೆ ಮಾಡುವಂತೆ ತಿಳಿಸಿದ್ದಾರೆ.
- ದಿನಾಂಕ 26-01-2022ರಂದು ಬೆಳಿಗ್ಗೆ 8.30 ಗಂಟೆಯಿಂದ ಬೆಳಿಗ್ಗೆ 10.30ರವರೆಗೆ ಕಬ್ಬನ್ ರಸ್ತೆಯಲ್ಲಿ ಬಿ.ಆರ್.ವಿ ಜಂಕ್ಷನ್ ನಿಂದ ಕಾಮರಾಜ ರಸ್ತೆ ಜಂಕ್ಷನ್ ವರೆಗೆ ಎರಡೂ ದಿಕ್ಕುಗಳಲ್ಲಿ ಸಂಚಾರವನ್ನು ನಿರ್ಬಂಧಿಸಲಾಗಿದೆ. ಈ ಕೆಳಕಂಡಂತೆ ಪರ್ಯಾಯ ಮಾರ್ಗಗಳಲ್ಲಿ ಸಂಚರಿಸುವಂತೆ ತಿಳಿಸಲಾಗಿದೆ.