Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದಲ್ಲಿ ‘ಸತ್ತವರ ಹೆಸರ’ಲ್ಲಿ ಆಸ್ತಿ ಮಾರಾಟ, ಬೃಹತ್ ಭೂ ಹಗರಣ: ‘ಲೋಕಾಯುಕ್ತ’ದಿಂದ ತನಿಖೆಗೆ ಆದೇಶ

ದಂಪತಿಗಳ ಲೈಂಗಿಕ ಜೀವನ ಸುಧಾರಿಸಲು ಈ ಒಂದು ಸರಳ ಅಭ್ಯಾಸ ಸಾಕು: ಸಂಶೋಧನೆಯಿಂದ ದೃಢ!

ದಂಪತಿಗಳ ನಡುವಿನ ಅನ್ಯೋನ್ಯತೆ ಹೆಚ್ಚಿಸಲು ಹೊಸ ಪ್ರಯೋಗ: ವೈವಾಹಿಕ ಜೀವನಕ್ಕೆ ಮರುಜೀವ ನೀಡಿದ ‘ನಗ್ನ ಛಾಯಾಚಿತ್ರ’

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಣಿಪಾಲ್ ಸಮೂಹ ಸಂಸ್ಥೆಗಳು ಗೌರವ ಸಂಸ್ಥಾಪಕ ಡಾ.ಟಿಎಂಎ ಪೈ 127ನೇ ಜನ್ಮದಿನ ಆಚರಣೆ
KARNATAKA

ಮಣಿಪಾಲ್ ಸಮೂಹ ಸಂಸ್ಥೆಗಳು ಗೌರವ ಸಂಸ್ಥಾಪಕ ಡಾ.ಟಿಎಂಎ ಪೈ 127ನೇ ಜನ್ಮದಿನ ಆಚರಣೆ

By ವಸಂತ ಬಿ ಈಶ್ವರಗೆರೆ

ಮಣಿಪಾಲ: ಮಣಿಪಾಲ್ ಸಮೂಹ ಸಂಸ್ಥೆಗಳು ತಮ್ಮ ಸಂಸ್ಥಾಪಕರಾದ ಡಾ ಟಿಎಂಎ ಪೈ ಅವರ 127ನೇ ಜನ್ಮದಿನವನ್ನು ಕಳೆದ ಬುಧವಾರದಂದು( ಏಪ್ರಿಲ್ 30, 2025) ಶ್ರದ್ಧಾ ಪೂರ್ವಕವಾಗಿ ಆಚರಿಸಿತು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಆಂಧ್ರಪ್ರದೇಶದ ಘನತೆವೆತ್ತ ರಾಜ್ಯಪಾಲರು, ನಿವೃತ್ತ ನ್ಯಾಯಮೂರ್ತಿ ಶ್ರೀ ಎಸ್ ಅಬ್ದುಲ್ ನಜೀರ್ ಅವರು ಡಾ ಟಿಎಂಎ ಪೈ ಅವರಿಗೆ ಗೌರಪರ್ಪಣೆ ಸಲ್ಲಿಸಿ ಮಾತನಾಡಿ, ‘ಡಾ. ಪೈ ಅವರದ್ದು ಬಹುಮುಖ ವ್ಯಕ್ತಿತ್ವ , ಶಿಕ್ಷಣ ತಜ್ಞ, ಬ್ಯಾಂಕರ್, ಲೋಕೋಪಕಾರಿ ಮತ್ತು ನಿಜವಾದ ರಾಷ್ಟ್ರ ನಿರ್ಮಾತೃ ಆಗಿದ್ದರು. “ಅನಕ್ಷರತೆ ಮತ್ತು ಅನಾರೋಗ್ಯವನ್ನು ನಿರ್ಮೂಲನೆ ಮಾಡುವ ಮೂಲಕ ಬಡತನವನ್ನು ನಿರ್ಮೂಲನೆ ಮಾಡಬಹುದು ಎಂಬುದು ಅವರ ಬಲವಾದ ನಂಬಿಕೆಯಾಗಿತ್ತು.

ಡಾ. ಪೈ ಅವರು ನಿಜವಾದ ಕರ್ಮಾ ಯೋಗಿಯಾಗಿದ್ದರು. ವಿದ್ಯಾವಂತ ಮಕ್ಕಳು ಕೇವಲ ಕುಟುಂಬದ ಆಸ್ತಿ ಅಷ್ಟೇ ಅಲ್ಲದೆ ಅವರು ಪ್ರಗತಿಶೀಲ ರಾಷ್ಟ್ರದ ನಿರ್ಮಾತೃರೂ ಹೌದು’ ಎಂದರು.

“ಡಾ. ಟಿ.ಎಂ.ಎ. ಪೈ ಅವರು ಸ್ಥಾಪಿಸಿದ ಮೂಡುಬಿದಿರೆಯ ಮಹಾವೀರ ಕಾಲೇಜಿನ ಹೆಮ್ಮೆಯ ಹಳೆಯ ವಿದ್ಯಾರ್ಥಿ ನಾನು. ಅವರ ದೃಷ್ಟಿಕೋನ ನನ್ನ ಶೈಕ್ಷಣಿಕ ಪ್ರಯಾಣ ಮತ್ತು ವೃತ್ತಿಜೀವನವನ್ನು ರೂಪಿಸಿತು” ಎಂದು ಅವರು ನೆನಪಿಸಿಕೊಂಡರು.

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE) ಟ್ರಸ್ಟ್‌ನ ಟ್ರಸ್ಟಿ ಶ್ರೀಮತಿ ವಸಂತಿ ಆರ್ ಪೈ, ಡಾ ರಂಜನ್ ಪೈ, ಮಾಹೆ ಟ್ರಸ್ಟ್ ಅಧ್ಯಕ್ಷರು ಮತ್ತು ಮಣಿಪಾಲ್ ಶಿಕ್ಷಣ ಮತ್ತು ವೈದ್ಯಕೀಯ ಸಮೂಹದ (ಎಂಇಎಂಜಿ) ಮುಖ್ಯಸ್ಥರು ಬೆಂಗಳೂರು, ಟಿ ಅಶೋಕ್ ಪೈ, ಅಧ್ಯಕ್ಷರು, ಡಾ ಟಿಎಂಎ ಪೈ ಫೌಂಡೇಶನ್, ಮಣಿಪಾಲ್, ಶ್ರೀ ಟಿ ಸತೀಶ್ ಯು ಪೈ, ಕಾರ್ಯಾಧ್ಯಕ್ಷರು, ಮಣಿಪಾಲ್ ಮೀಡಿಯಾ ನೆಟ್‌ವರ್ಕ್ ಲಿಮಿಟೆಡ್, ಮತ್ತು ಉಪಾಧ್ಯಕ್ಷರು, AGE, ಡಾ ಎಚ್.ಎಸ್. ಬಲ್ಲಾಳ್, ಪ್ರೊ ಚಾನ್ಸಲರ್ ಮಾಹೆ, ಲೆಫ್ಟಿನೆಂಟ್ ಜನರಲ್ (ಡಾ) ಎಂಡಿ ವೆಂಕಟೇಶ್, ವೈಸ್ ಚಾನ್ಸಲರ್ ಅವರು ಸೇರಿದಂತೆ ಮಣಿಪಾಲ್ ಗ್ರೂಪ್‌ನ ವಿವಿಧ ಹಿರಿಯ ಅಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಟಿಎಂಎ ಪೈ ಅವರಿಗೆ ಗೌರವ ಸೂಚಿಸುವ ಹಾಗು ಅವರ ಪರಂಪರೆಯನ್ನು ಸ್ಮರಿಸುವ ಸಲುವಾಗಿ ಪ್ರತಿ ವರ್ಷ ಏಪ್ರಿಲ್ 30ರ ಅವರ ಜನ್ಮದಿನದಂದು ಮಣಿಪಾಲ್ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್ ಸಂಸ್ಥಾಪನಾ ದಿನವನ್ನಾಗಿ ಆಚರಿಸಲಾಗುತ್ತದೆ. ದೂರದೃಷ್ಟಿಯುಳ್ಳ ಮಣಿಪಾಲ್ ಸಂಸ್ಥಾಪಕರು, ಬಂಜರು ಬೆಟ್ಟ ಪ್ರದೇಶವಾಗಿದ್ದ ಮಣಿಪಾಲ್ ಅನ್ನು ಜಾಗತಿಕವಾಗಿ ಶೈಕ್ಷಣಿಕ ಕೇಂದ್ರವನ್ನಾಗಿ ಪರಿವರ್ತಿಸಿದರು. ಗಣ್ಯರ ಪುಷ್ಪ ನಮನದೊಂದಿಗೆ ಈ ವರ್ಷದ ವಿವಿಧ ಕಾರ್ಯಕ್ರಮಗಳು ನಡೆದವು.

ಮಾಹೆ ಪ್ರೊ ಚಾನ್ಸಲರ್ ಡಾ ಎಚ್.ಎಸ್. ಬಲ್ಲಾಳ್ ಅವರು ಮಾತನಾಡಿ, ‘ನಮ್ಮ ಸಂಸ್ಥಾಪಕ ಡಾ ಟಿಎಂಎ ಪೈ ಅವರದ್ದು ಅಸಾಧಾರಣ ದೂರದೃಷ್ಟಿತ್ವವುಳ್ಳ ವ್ಯಕ್ತಿತ್ವ. ಅವರು ಕೇವಲ ಒಂದು ಶಿಕ್ಷಣ ಸಂಸ್ಥೆಯನ್ನು ರೂಪಿಸಿಲ್ಲ, ಬದಲಿಗೆ ಶೈಕ್ಷಣಿಕ ಪರಿಸರವನ್ನು ನಿರ್ಮಿಸಿದ್ದಾರೆ. 1950ರ ದಶಕದಲ್ಲಿ ಸ್ವಂತ ಹಣದಲ್ಲಿ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸುವುದು ಒಂದು ಕ್ರಾಂತಿಕಾರಿಕ ನಡೆ. ಇಂದು, ನಾವು ಅವರನ್ನು ಗೌರವಯುತವಾಗಿ ಸ್ಮರಿಸುತ್ತ, ಅವರ ತತ್ವಗಳಾದ ಗುಣಮಟ್ಟದ ಶಿಕ್ಷಣ, ನಾವೀನ್ಯತೆ ಮತ್ತು ಸಮಾಜ ಸೇವೆಗೆ ಬದ್ಧರಾಗಿರುತ್ತವೆ ಎನ್ನುವುದನ್ನು ನಮಗೆ ನಾವೇ ಜವಾಬ್ದಾರಿವಹಿಸಿಕೊಳ್ಳಬೇಕು’ ಎಂದರು.

ಮಾಹೆಯ ಉಪಕುಲಪತಿ ಲೆಫ್ಟಿನೆಂಟ್ ಜನರಲ್ (ಡಾ) ಎಂ.ಡಿ. ವೆಂಕಟೇಶ್, “ನಮ್ಮ ಸಂಸ್ಥಾಪಕರಾದ ಡಾ ಟಿಎಂಎ ಪೈ ಅವರ 127ನೇ ಜನ್ಮದಿನವನ್ನು ಆಚರಿಸುತ್ತಿರುವ ಈ ಸಮಯದಲ್ಲಿ, ನಮ್ಮ ಸಂಸ್ಥೆಯ ನಿರಂತರ ಮಾರ್ಗ ಸೂಚಿಯಾಗಿರುವ ಧ್ಯೇಯ ಮತ್ತು ದೂರದೃಷ್ಟಿತ್ವ ನಾವು ಪಾಲಿಸಬೇಕು. ಒಂದು ಶಿಕ್ಷಣ ಸಂಸ್ಥೆಯಿಂದ ಶುರುವಾಗಿ ಒಂದು ಸಮಗ್ರ ಶೈಕ್ಷಣಿಕ ಪರಿಸರವನ್ನು ಸೃಷ್ಟಿಸಿದ ಡಾ. ಪೈ ಅವರದ್ದು ಗಮನಾರ್ಹ ಪಯಣ. ಶಿಕ್ಷಣ ಎಲ್ಲರಿಗೂ ದೊರೆಯಬೇಕು ಎನ್ನುವುದು ಅವರ ಮೂಲ ನಂಬಿಕೆ. ವಿವಿಧ ಶೈಕ್ಷಣಿಕ ಕಾರ್ಯಕ್ರಮಗಳ ಮೂಲಕ ಅದನ್ನು ಸಾಕಾರಗೊಳಿಸಲು ನಾವೆಲ್ಲ ನಿರಂತರ ಶ್ರಮಿಸಬೇಕು’ ಎಂದರು.

ಕೃಷ್ಣಾ ನ್ಯಾಯಾಧೀಕರಣ: ಗೆಜೆಟ್ ಅಧಿಸೂಚನೆ ಹೊರಡಿಸಲು ಸಭೆಯಲ್ಲಿ ಒತ್ತಾಯ- ಸಿಎಂ ಸಿದ್ದರಾಮಯ್ಯ

BREAKING : ಬೆಂಗಳೂರಲ್ಲಿ ಮತ್ತೊಂದು ಸೂಸೈಡ್ : ಸಾಲ ತೀರಿಸಲಾಗದೆ ಕಾರು ಚಾಲಕ ಆತ್ಮಹತ್ಯೆ!

Share. Facebook Twitter LinkedIn WhatsApp Email

Related Posts

ಸಾಗರದಲ್ಲಿ ‘ಸತ್ತವರ ಹೆಸರ’ಲ್ಲಿ ಆಸ್ತಿ ಮಾರಾಟ, ಬೃಹತ್ ಭೂ ಹಗರಣ: ‘ಲೋಕಾಯುಕ್ತ’ದಿಂದ ತನಿಖೆಗೆ ಆದೇಶ

2 Mins Read

ಜನಿವಾರಕ್ಕೆ ಇವರೇನು ಅನುಮತಿ ನೀಡೋದು? ಕೇಸರಿ ಶಾಲು ನಿಷೇಧಿಸಲು ಇವರ್ಯಾರು?: ಪ್ರಹ್ಲಾದ್ ಜೋಶಿ ಪ್ರಶ್ನೆ

1 Min Read

ಮಂಗಳೂರಲ್ಲಿ ಹವಾಮಾನ ವೈಫರಿತ್ಯದಿಂದ ಆಕಾಶದಲ್ಲೇ ಅರ್ಧ ಗಂಟೆ ಗಿರಕಿ ಹೊಡೆದ ವಿಮಾನಗಳು

1 Min Read
Recent News

ಸಾಗರದಲ್ಲಿ ‘ಸತ್ತವರ ಹೆಸರ’ಲ್ಲಿ ಆಸ್ತಿ ಮಾರಾಟ, ಬೃಹತ್ ಭೂ ಹಗರಣ: ‘ಲೋಕಾಯುಕ್ತ’ದಿಂದ ತನಿಖೆಗೆ ಆದೇಶ

ದಂಪತಿಗಳ ಲೈಂಗಿಕ ಜೀವನ ಸುಧಾರಿಸಲು ಈ ಒಂದು ಸರಳ ಅಭ್ಯಾಸ ಸಾಕು: ಸಂಶೋಧನೆಯಿಂದ ದೃಢ!

ದಂಪತಿಗಳ ನಡುವಿನ ಅನ್ಯೋನ್ಯತೆ ಹೆಚ್ಚಿಸಲು ಹೊಸ ಪ್ರಯೋಗ: ವೈವಾಹಿಕ ಜೀವನಕ್ಕೆ ಮರುಜೀವ ನೀಡಿದ ‘ನಗ್ನ ಛಾಯಾಚಿತ್ರ’

ನೈಸರ್ಗಿಕ ಪೋಷಕಾಂಶಗಳ ಗಣಿ: ಪ್ರತಿದಿನ ಮೊಳಕೆ ಕಾಳುಗಳನ್ನು ತಿನ್ನುವುದರಿಂದಾಗುವ 7 ಲಾಭಗಳು

State News
KARNATAKA

ಸಾಗರದಲ್ಲಿ ‘ಸತ್ತವರ ಹೆಸರ’ಲ್ಲಿ ಆಸ್ತಿ ಮಾರಾಟ, ಬೃಹತ್ ಭೂ ಹಗರಣ: ‘ಲೋಕಾಯುಕ್ತ’ದಿಂದ ತನಿಖೆಗೆ ಆದೇಶ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆಯುತ್ತಿರುವ ಭೂ ಮಾಫಿಯಾದ ಭೀಕರ ದಂಧೆಯೊಂದು ಬಯಲಿಗೆ ಬಂದಿದೆ. ಸತ್ತವರ ಹೆಸರಿನಲ್ಲಿ ನಕಲಿ…

ಜನಿವಾರಕ್ಕೆ ಇವರೇನು ಅನುಮತಿ ನೀಡೋದು? ಕೇಸರಿ ಶಾಲು ನಿಷೇಧಿಸಲು ಇವರ್ಯಾರು?: ಪ್ರಹ್ಲಾದ್ ಜೋಶಿ ಪ್ರಶ್ನೆ

ಮಂಗಳೂರಲ್ಲಿ ಹವಾಮಾನ ವೈಫರಿತ್ಯದಿಂದ ಆಕಾಶದಲ್ಲೇ ಅರ್ಧ ಗಂಟೆ ಗಿರಕಿ ಹೊಡೆದ ವಿಮಾನಗಳು

BIG NEWS: ಸಾಗರದ ನಾಡಕಲಸೆಯಲ್ಲಿ ‘ಕಂದಾಯ ಭೂಮಿ’ ಒತ್ತುವರಿ: ಲೋಕಾಯುಕ್ತರಿಂದ ಸ್ವಯಂ ಪ್ರೇರಿತ ಮೊಕದ್ದಮೆ ದಾಖಲು

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.