ಬೆಂಗಳೂರು: ರಾಜ್ಯ ಸರ್ಕಾರದಿಂದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಸದಸ್ಯರನ್ನಾಗಿ ನಾಲ್ವರನ್ನು ನಾಮನಿರ್ದೇಶನ ಮಾಡಿ ಆದೇಶಿಸಿದೆ. ಕಾಂಗ್ರೆಸ್ ನಿಷ್ಟಾವಂತ ಕಾರ್ಯಕರ್ತೆ ಮಂಜುಳಾ ನಾಯ್ಡು ಸೇರಿದಂತೆ ನಾಲ್ವರನ್ನು ರಾಜ್ಯ ಸರ್ಕಾರ ಬಿಡಿಎ ನಾಮನಿರ್ದೇಶಿತ ಸದಸ್ಯರನ್ನಾಗಿ ನೇಮಿಸಿದೆ.
ಈ ಸಂಬಂಧ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಕಾಯ್ದೆ 1976ರ ಕಲಂ 3(3)(ಇ), 3(3)(ಹೆಚ್) ಮತ್ತು 3(3)(ಜಿಜಿ)ರಡಿಯಲ್ಲಿ ಪ್ರದತ್ತವಾದಂತ ಅಧಿಕಾರವನ್ನು ಚಲಾಯಿಸಿ, ಈ ಕೆಳಕಂಡವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಿರುವುದಾಗಿ ತಿಳಿಸಿದ್ದಾರೆ.
ಅಂದಹಾಗೇ ಬೆಂಗಳೂರು ದಕ್ಷಿಣದ ಕನಕಪುರ ತಾಲ್ಲೂಕಿನ ವಾಸ್ತು ಶಿಲ್ಪಿ ವಿ ಆರ್ ಸುಜಯ್, ಸಾಮಾನ್ಯ ಕೆಟಗರಿ ಅಡಿಯಲ್ಲಿ ಬಿಎನ್ ಅಮರನಾಥ್, ಪರಿಶಿಷ್ಟ ಜಾತಿ ಅಡಿಯಲ್ಲಿ ಪಿ ಗಾಂಧಿ ಹಾಗೂ ಮಹಿಳೆ ಕೋಟಾದಡಿ ಸಂಪಿಗೆ ರಾಮನಗರದ ಮಂಜುಳ ನಾಯ್ಡು ಅವರನ್ನು ನೇಮಕ ಮಾಡಲಾಗಿದೆ.
BREAKING: ಜಾತ್ರೆಯಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ರಾಜ್ಯ ಸರ್ಕಾರ ಮೇಕೆದಾಟು ಯೋಜನೆ ಬಗ್ಗೆ ಸುಮ್ಮನೆ ಮಾತಿನಲ್ಲಿ ಕಾಲಹರಣ: ಹೆಚ್.ಡಿ ಕುಮಾರಸ್ವಾಮಿ ಕಿಡಿ