ಹಾವೇರಿ : ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮದಿಂದ ಮರಾಠ ಸಮುದಾಯದ ಆರ್ಥಿಕ ಅಭಿವೃದ್ದಿಗಾಗಿ ಪ್ರಸಕ್ತ ಸಾಲಿಗೆ ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಲು ಅಕ್ಟೋಬರ್ 21ರವರೆಗೆ ಅವಧಿ ವಿಸ್ತರಿಸಲಾಗಿದೆ.
ಮರಾಠ ಸಮುದಾಯದವರು ಜೀಜಾವು-ಜಲಭಾಗ್ಯ ಯೋಜನೆ, ಅರಿವು ಶೈಕ್ಷಣಿಕ ಸಾಲ, ರಾಜಶ್ರೀ ಶಾಹುಮಹಾರಾಜ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಬಡ್ಡಿರಹಿತ ಸಾಲ ಯೋಜನೆಯಡಿ ಸಾಲ ಸೌಲಭ್ಯಕ್ಕೆ ದಿನಾಂಕ 21-10-2022ರೊಳಗಾಗಿ ಸೇವಾಸಿಂಧು ಪೋರ್ಟ್ಲ್, ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ಹೆಂಡತಿಯ ಖಾತೆಗೆ 2.70 ಕೋಟಿ ರೂ. ಹಣ ವರ್ಗಾವಣೆ ಮಾಡಿ ಪರಾರಿಯಾದ ಬ್ಯಾಂಕ್ ನೌಕರ
ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ http://kvcdc.karnataka.gov.in ಅಥವಾ ಜಿಲ್ಲಾ ಕಚೇರಿ ದೂ.08375-20038, ಸಹಾಯವಾಣಿ 8867537799 ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.