ಹುಬ್ಬಳ್ಳಿ: ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಮರಿತಿಬ್ಬೇಗೌಡ ಅವರು ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಜೆಡಿಎಸ್ ಪಕ್ಷಕ್ಕೂ ಗುಡ್ ಬೈ ಹೇಳಿದ್ದಾರೆ.
ಇಂದು ಹುಬ್ಬಳ್ಳಿಯಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಅವರ ನಿವಾಸಕ್ಕೆ ಭೇಟಿ ನೀಡಿ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಆ ಬಳಿಕ ಅವರ ರಾಜೀನಾಮೆಯನ್ನು ಸಭಾಪತಿ ಬಸವರಾಜ ಹೊರಟ್ಟಿ ಅಂಗೀಕರಿಸಿದ್ದಾರೆ.
ಜೆಡಿಎಸ್ ಪಕ್ಷದಿಂದ ಪರಿಷತ್ ಸದಸ್ಯರಾಗಿದ್ದಂತ ಅವರು, ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಹಾಗೂ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಅಸಮಾಧಾನಗೊಂಡಿದ್ದರು. ಈ ಕಾರಣದಿಂದಲೇ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡಿರುವಂತ ಅವರು, ಜೆಡಿಎಸ್ ಪಕ್ಷಕ್ಕೂ ಗುಡ್ ಬೈ ಹೇಳಿದ್ದಾರೆ.
ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಮರಿತಿಬ್ಬೇಗೌಡ ಅವರು, ನಾನು ಸ್ವ ಇಚ್ಛೆಯಿಂದ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಅದನ್ನು ಸಭಾಪತಿ ಬಸವರಾಜ ಹೊರಟ್ಟಿ ಅಂಗೀಕರಿಸಿದ್ದಾರೆ. ಇದಕ್ಕಾಗಿ ಸಭಾಪತಿಗೆ ಧನ್ಯವಾದಗಳು ಎಂದರು.
BREAKING: ಸಂಸದ ತೇಜಸ್ವಿ ಸೂರ್ಯ, ಪಿ.ಸಿ ಮೋಹನ್, ಶೋಭಾ ಕರಂದ್ಲಾಜೆ ಸೇರಿ 44 ಮಂದಿ ವಿರುದ್ಧ ‘FIR’ ದಾಖಲು
ಗಮನಿಸಿ: ಕೊಂಕಣ ರೈಲ್ವೆಯಿಂದ ‘ಮಾನ್ಸೂನ್ ರೈಲು ವೇಳಾಪಟ್ಟಿ’ ಜಾರಿ, ಇಲ್ಲಿದೆ ಡೀಟೆಲ್ಸ್