ನವದೆಹಲಿ : ವಿಶ್ವದಲ್ಲಿ ಮತ್ತೆ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದೆ. ಈ ಸಂಬಂಧ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಆರೋಗ್ಯ ಇಲಾಖೆ ಮುಂದಾಗಿದೆ. ಇದರ ಜೊತೆಗ ದೇಶದ ಉನ್ನತ ವೈದ್ಯರ ಸಂಸ್ಥೆ, ಭಾರತೀಯ ವೈದ್ಯಕೀಯ ಸಂಘ ಹೆಚ್ಚಿನ ಸಂಖ್ಯೆಯ ಜನರು ಇರುವ ಸ್ಥಳಗಳಲ್ಲಿ ಮಾಸ್ಕ್ ಧರಿಸುವಂತೆ, ವಿದೇಶಿ ಪ್ರಯಾಣವನ್ನು ಮಾಡದಂತೆ ಜನರಲ್ಲಿ ಮನವಿ ಮಾಡಿದೆ.
ಮದುವೆ, ರಾಜಕೀಯ ಅಥವಾ ಸಾಮಾಜಿಕ ಸಭೆಗಳು ಮತ್ತು ಅತಾರಾಷ್ಟ್ರೀಯ ಪ್ರಯಾಣ, ಸಾರ್ವಜನಿಕ ಸಭೆಗಳನ್ನು ತಪ್ಪಿಸುವಂತೆ ಭಾರತೀಯ ವೈದ್ಯಕೀಯ ಸಂಘ (IMA) ಸಲಹೆ ನೀಡಿದೆ. ಜ್ವರ, ಗಂಟಲು ನೊವು, ಕೆಮ್ಮು ಯಾವುದೇ ರೋಗಲಕ್ಷಣಗಳ ಕಂಡ ಕೂಡಲೇ ವೈದ್ಯರನ್ನು ಸಂಪರ್ಕಿಸಲು ಮತ್ತು ಮುಂಜಾಗ್ರತಾ ಡೋಸ್ ಸೇರಿದಂತೆ ಕೋವಿಡ್ ಲಸಿಕೆಯನ್ನು ತ್ವರಿತವಾಗಿ ತೆಗೆದುಕೊಳ್ಳುವಂತೆ ಜನರಿಗೆ ಮನವಿ ಮಾಡಿದೆ.
ಕೋವಿಡ್ ಪ್ರಕರಣಗಳ ಮೇಲೆ ಸರ್ಕಾರ ಕಣ್ಣಿಟ್ಟಿದೆ ಮತ್ತು ವೈರಸ್ ಹರಡುವುದನ್ನು ತಡೆಗಟ್ಟುವ ಕ್ರಮಗಳನ್ನು ಪಟ್ಟಿ ಮಾಡಿದೆ. ಜಿನೋಮ್ ಸೀಕ್ವೆನ್ಸಿಂಗ್ ಮಾಡಲು ಎಲ್ಲಾ ರಾಜ್ಯಗಳನ್ನು ಸೂಚಿಸಿದ್ದು, ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಯಾದೃಚ್ಛಿಕ ಪರೀಕ್ಷೆ ಇಂದಿನಿಂದ ಪ್ರಾರಂಭಿಸಲಾಗಿದೆ ಎಂದು ಎಂದು ತಿಳಿಸಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಅಮೆರಿಕ, ಜಪಾನ್, ದಕ್ಷಿಣ ಕೊರಿಯಾ, ಫ್ರಾನ್ಸ್ ಮತ್ತು ಬ್ರೆಜಿಲ್ನಂತಹ ಪ್ರಮುಖ ದೇಶಗಳಲ್ಲಿ ಸುಮಾರು 5.37 ಲಕ್ಷ ಹೊಸ ಪ್ರಕರಣಗಳು ವರದಿಯಾಗಿವೆ. ಭಾರತದಲ್ಲಿ 145 ಹೊಸ ಪ್ರಕರಣಗಳನ್ನು ವರದಿಯಾಗಿದ್ದು, ಅದರಲ್ಲಿ ನಾಲ್ಕು ಪ್ರಕರಣಗಳು ಹೊಸ ಚೀನಾ ರೂಪಾಂತರ BF.7 ಆಗಿವೆ ಎಂದು ತಿಳಿದು ಬಂದಿದೆ.
ಪ್ರಧಾನ ಮೋದಿಯವರ ಅಧ್ಯಕ್ಷತೆಯಲ್ಲಿ ಇಂದು ಉನ್ನತ ಮಟ್ಟದ ಕೋವಿಡ್ ಪರಿಶೀಲನಾ ಸಭೆ ನಡೆಯಲಿದೆ. ಇದಾದ ನಂತರ ಕೇಂದ್ರವು ಎಲ್ಲಾ ರಾಜ್ಯಗಳಿಗೆ ಸಲಹೆಯನ್ನು ನೀಡಬಹುದು ಎಂದು ಮೂಲಗಳು ಹೇಳುತ್ತವೆ.
‘ಆಪರೇಷನ್ ಚೀತಾ’ ಸಕ್ಸಸ್ : ಒಂದೇ ದಿನ ಬೋನಿಗೆ ಬಿದ್ದ ಎರಡು ಚಿರತೆ |Leopard Operation
BIGG NEWS : ಪಂಚಮಸಾಲಿ 2ಎ ಮೀಸಲಾತಿಗೆ ಆಗ್ರಹ : ಸುವರ್ಣಸೌಧದ ಬಳಿ ವಿರಾಟ್ ಸಮಾವೇಶ ಆರಂಭ
BIGG NEWS: ಕರ್ನಾಟಕದಲ್ಲಿ ಕೊರೊನಾ ಆತಂಕ; ಏರ್ ಪೋರ್ಟ್ ನಲ್ಲಿ ಮತ್ತೆ ಸ್ಕ್ರೀನಿಂಗ್ ಆರಂಭ