ಬೆಂಗಳೂರು: ವಿದೇಶದಿಂದ ಹೈಡ್ರೋ ಗಾಂಜಾ (Hydro Cannabis) ತರಿಸಿ ನಗರದಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಕೇರಳ ಮೂಲದ ಇಬ್ಬರು ಅಂತರರಾಜ್ಯ ಡ್ರಗ್ ಪೆಡ್ಲರ್‌ಗಳನ್ನು ನಂದಿನಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ.
ಬಂಧಿತರು ಮತ್ತು ಜಪ್ತಿ ವಿವರ
ಬಂಧಿತರನ್ನು ಸೌಗೇಶ್ ಮತ್ತು ಅಲ್ತಾಫ್ ಎಂದು ಗುರುತಿಸಲಾಗಿದೆ. ಈ ಇಬ್ಬರು ಆರೋಪಿಗಳು ಕೇರಳದಲ್ಲಿ ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದರು. ಇವರಿಂದ ಪೊಲೀಸರು ಸುಮಾರು 5.75 ಕೋಟಿ ರೂಪಾಯಿ ಮೌಲ್ಯದ 5 ಕೆಜಿ 700 ಗ್ರಾಂ ಹೈಡ್ರೋ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಕ್ರಿಮಿನಲ್ ಹಿನ್ನೆಲೆ
ಬಂಧಿತ ಆರೋಪಿಗಳ ಮೇಲೆ ಈಗಾಗಲೇ ಕೇರಳದಲ್ಲಿ ಎನ್‌ಡಿಪಿಎಸ್ (NDPS) ಕಾಯ್ದೆಯಡಿ ಪ್ರಕರಣಗಳು ದಾಖಲಾಗಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ವಿದೇಶದಿಂದ ಈ ಮಾದಕ ವಸ್ತುವನ್ನು ತರಿಸಿಕೊಂಡು, ಸ್ಥಳೀಯವಾಗಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಜಾಲವನ್ನು ಇವರು ಹೊಂದಿದ್ದರು ಎನ್ನಲಾಗಿದೆ.
ಪ್ರಸ್ತುತ ನಂದಿನಿ ಲೇಔಟ್ ಪೊಲೀಸರು ಆರೋಪಿಗಳನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದು, ಈ ಜಾಲದ ಹಿಂದೆ ಇರುವ ಇತರ ವ್ಯಕ್ತಿಗಳ ಪತ್ತೆಗೆ ತನಿಖೆ ಮುಂದುವರಿಸಿದ್ದಾರೆ.
ರಾಜ್ಯದಲ್ಲಿ ಶಿಥಿಲಗೊಂಡ ಆಸ್ಪತ್ರೆ ಕಟ್ಟಡಗಳ ತೆರವಿಗೆ ಸರ್ಕಾರ ಸೂಚನೆ: 15 ದಿನದೊಳಗೆ ವರದಿ ಸಲ್ಲಿಕೆಗೆ ಆದೇಶ
ಕರ್ತವ್ಯದ ಅವಧಿಯಲ್ಲೇ ಮಧ್ಯಪಾನ ಮಾಡಿದ ‘ಡಾಕ್ಟರ್’ಗೆ ಶಾಕ್: ಬಸವನ ಬಾಗೇವಾಡಿಯ ವಂದಲಾ PHC ವೈದ್ಯ ಸಸ್ಪೆಂಡ್








