ಬಳ್ಳಾರಿ: ಲೋಕಸಭೆ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ಇವರ ಆಶ್ರಯದಲ್ಲಿ ಮತದಾನ ಜಾಗೃತಿ ಅಭಿಯಾನದ ಅಂಗವಾಗಿ ಮೇ 04 ರಂದು ಸಂಜೆ 06.30 ಗಂಟೆಗೆ ನಗರದ ಹೆಚ್.ಆರ್.ಗವಿಯಪ್ಪ ವೃತ್ತ(ಮೋತಿ ವೃತ್ತ)ದ ಬಳಿ ಸಾಂಸ್ಕøತಿಕ ಕಾರ್ಯಕ್ರಮಗಳು ಏರ್ಪಡಿಸಲಾಗಿದೆ.
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಕಾರ್ಯಕ್ರಮ ಉದ್ಘಾಟಿಸುವರು.
ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ಅಧ್ಯಕ್ಷತೆ ವಹಿಸುವರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜೀತ್ ಕುಮಾರ್ ಬಂಡಾರು, ಬಳ್ಳಾರಿ ಪ್ರಾದೇಶಿಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂದೀಪ್ ಸೂರ್ಯವಂಶಿ, ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರ್, ಸಹಾಯಕ ಆಯುಕ್ತ ಹೇಮಂತ್ ಕುಮಾರ್ ಹಾಗೂ ಮಹಾನಗರ ಪಾಲಿಕೆ ಆಯುಕ್ತ ಜಿ.ಖಲೀಲ್ ಸಾಬ್, ಮತ್ತೀತರರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.ಅ