ಬೆಂಗಳೂರು : 2024-25ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಮೌಲಾನಾ ಆಜಾದ ಆಂಗ್ಲ ಮಾಧ್ಯಮ ಮಾದರಿ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶ ಪಡೆಯಲು ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು 2024ರ ಮೇ 15 ರವರೆಗೆ ವಿಸ್ತರಿಸಲಾಗಿದೆ.
ಸದರಿ ಮಾದರಿ ಶಾಲೆಗಳಲ್ಲಿ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಜನಾಂಗದವರಿಗೆ ಶೇ. 75 ಮತ್ತು ಇತರೆ ವರ್ಗಗಳ ವಿದ್ಯಾರ್ಥಿಗಳಿಗೆ ಶೇ. 25ರಷ್ಟು ಸ್ಥಾನಗಳನ್ನು ಮೀಸಲಿಡಲಾಗಿದೆ. ಪ್ರವೇಶ ಪಡೆಯಲಿಚ್ಛಿಸುವ ಆಸಕ್ತಿಯುಳ್ಳ ವಿದ್ಯಾರ್ಥಿಗಳು ನಿರ್ದೇಶನಾಲಯದ ಅಧಿಕೃತ https://dom.karnataka.gov.in ವೆಬ್‍ಸೈಟ್‍ದಲ್ಲಿ ಆನ್‍ಲೈನ್ ಮೂಲಕ 2024ರ ಮೇ 15 ರೊಳಗಾಗಿ ಅರ್ಜಿ ಸಲ್ಲಿಸಬೇಕು.
ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಉಚಿತ ಸೇವೆ ಬಳಸಿಕೊಳ್ಳಲು ತಮ್ಮ ಸಮೀಪದ ಮೌಲಾನಾ ಆಜಾದ ಮಾದರಿ ಶಾಲೆ, ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಮತ್ತು ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರವನ್ನು ಸಂಪರ್ಕಿಸಿ ಮೇಲ್ಕಂಡ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಮತ್ತು ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‍ಸೈಟ್ ಗೆ ಭೇಟಿ ನೀಡಬಹುದು.