ಮೈಸೂರು : ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ತಾಯಿ ಹೀರಾಬೆನ್ ಮೋದಿ (Heeraben Modi) ಆರೋಗ್ಯದಲ್ಲಿ ಏರುಪೇರಾಗಿದ್ದು, ಅಹಮದಾಬಾದ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಈಗಾಗಲೇ ಪ್ರಧಾನಿ ಮೋದಿ ಅಹಮದಾಬಾದ್ನ ಯುಎನ್ ಮೆಹ್ತಾ ಆಸ್ಪತ್ರೆಗೆ ತೆರಳಿ ಆರೋಗ್ಯ ವಿಚಾರಿಸಿದ್ದಾರೆ
ಈ ನಿಟ್ಟಿನಲ್ಲಿ ನಿನ್ನ ಅಪಘಾತಗೊಂಡ ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ಮೋದಿ, ಮೈಸೂರಿನ ಜೆಎಸ್ಎಸ್ ಆಸ್ಪತ್ರೆಯಿಂದ ತೆರಳಿದ ಹೀರಾ ಬೆನ್ ಶ್ರೀಘ್ರ ಚೇತರಿಕೆಗಾಗಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಮತ್ತು ಕುಟುಂಬದವರ ಕಾರು ಮೈಸೂರಿನ ಕಡಕೊಳ ಬಳಿ ಮಂಗಳವಾರ ಅಪಘಾತಕ್ಕೀಡಾಗಿತ್ತು. ಅವರು ಸದ್ಯ ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ಬೆನ್ನಲ್ಲೇ ಮೋದಿಯವರ ತಾಯಿಯ ಆರೋಗ್ಯವೂ ಹದಗೆಟ್ಟಿದೆ.