ಮಂಗಳವಾರ: ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಂಗಸಂಸ್ಥೆ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ ಉದ್ಘಾಟನೆಯನ್ನು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಮಾಡಿದ್ರು.
ಈ ವೇಳೆ ಮಾತನಾಡಿದ ಅವರು, ನವ ಭಾರತ ನಿರ್ಮಾಣದಲ್ಲಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯು ಪಾತ್ರ ಬಹಳ ಮುಖ್ಯವಾಗಿದೆ. ಈ ನೀತಿ ನಮ್ಮ ಪ್ರಸ್ತುತ ಮತ್ತು ಭವಿಷ್ಯದ ಪೀಳಿಗೆಯ ಭವಿಷ್ಯವನ್ನು ಉಜ್ವಲ ಮತ್ತು ಸುರಕ್ಷಿತವಾಗಿಸುತ್ತದೆ. ಈ ಶಿಕ್ಷಣ ನೀತಿಯನ್ನು ಜಾರಿಗೊಳಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಹೇಳಿದ್ದಾರೆ.
ಮಾತೃಭಾಷೆಯಲ್ಲಿ ಅಧ್ಯಯನದ ಜೊತೆಗೆ ಆದ್ಯತೆಯ ವಿಷಯವನ್ನು ಆಯ್ಕೆ ಮಾಡುವ ಸ್ವಾತಂತ್ರ್ಯವನ್ನು ನೀಡುವ ಈ ಶಿಕ್ಷಣ ನೀತಿಯ ಗುರಿಯು ಎಲ್ಲರಿಗೂ ಉನ್ನತ ಶಿಕ್ಷಣವನ್ನು ಒದಗಿಸುವುದು. ಭಾರತದ ಸಾಂಸ್ಕೃತಿಕ ವೈಭವವನ್ನು ಮರುಸ್ಥಾಪಿಸುವಲ್ಲಿ ಮತ್ತು ಈ ಶಿಕ್ಷಣ ನೀತಿಯನ್ನು ಯಶಸ್ವಿಗೊಳಿಸುವಲ್ಲಿ ನೀವು ನಿಮ್ಮ ಪಾತ್ರವನ್ನು ಮಾಡಬೇಕು. ಜೊತೆಗೆ ಭಾರತವನ್ನು ಜಾಗತಿಕ ಜ್ಞಾನ-ಶಕ್ತಿಯನ್ನಾಗಿ ಮಾಡಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.