ಬೆಂಗಳೂರು: ನಗರದಲ್ಲಿ ಕೊಳೆತ ಸ್ಥಿತಿಯಲ್ಲಿ ಎಂಬಿಎ ವಿದ್ಯಾರ್ಥಿನಿಯೊಬ್ಬಳ ಶವ ಪತ್ತೆಯಾಗಿದೆ. ಆ ಮೂಲಕ ಹಲವು ಅನುಮಾನಗಳಿಗೆ ಕಾರಣವಾಗಿದೆ.
ಬೆಂಗಳೂರಿನ ಗಾಯತ್ರಿನಗರದ ರೈಲ್ವೆ ಪ್ಯಾರಲರ್ ರಸ್ತೆಯ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಎಂಬಿಎ ವಿದ್ಯಾರ್ಥಿನಿಯ ಶವ ಪತ್ತೆಯಾಗಿದೆ. ದಾವಣಗೆರೆ ಮೂಲದ ಸುಪ್ರಿಯಾ(25) ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದಂತ ಎಂಬಿಎ ವಿದ್ಯಾರ್ಥಿನಿಯಾಗಿದ್ದಾಳೆ.
ಬೈಕ್ ರೈಡಿಂಗ್ ತರಬೇತಿ ಪಡೆಯುತ್ತಿದ್ದಂತ ಸುಪ್ರಿಯಾ ಈಗ ಶವವಾಗಿ ಪತ್ತೆಯಾಗಿದ್ದಾಳೆ. ಸುಪ್ರಿಯಾ ವಾಸವಾಗಿದ್ದ ಕೊಠಡಿ 2 ದಿನದಿಂದ ಲಾಕ್ ಆಗಿತ್ತು. ಪೋಷಕರು ಕರೆ ಮಾಡಿದರೂ ಸ್ವೀಕರಿಸುತ್ತಿರಲಿಲ್ಲ. ಈ ಹಿನ್ನಲೆಯಲ್ಲಿ ಮನೆ ಮಾಲೀಕರಿಗೆ ಕರೆ ಮಾಡಿ ಪೋಷಕರು ವಿಷಯ ತಿಳಿಸಿದ್ದಾರೆ.
ಕೊಠಡಿಗೆ ಭೇಟಿ ನೀಡಿ, ಭಾಗಿಲು ಹೊಡೆದು ನೋಡಿದಾಗ ಸುಪ್ರಿಯಾ ಶವ ಪತ್ತೆಯಾಗಿದೆ. ಸ್ಥಳಕ್ಕೆ ಸುಬ್ರಹ್ಮಣ್ಯನಗರ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕನ್ನಡ ನಾಡಿನ ಒಂದಿಂಚು ಭೂಮಿ ಅನ್ಯರಾಜ್ಯಗಳಿಗೆ ಬಿಟ್ಟುಕೊಡುವ ಪ್ರಶ್ನೆಯೆ ಇಲ್ಲ: ಶಾಸಕ ಗೋಪಾಲಕೃಷ್ಣ ಬೇಳೂರು
BIG BREAKING: ಕನ್ನಡ ಹೋರಾಟಗಾರರ ಮೇಲಿನ ಕೇಸುಗಳನ್ನು ವಾಪಾಸ್: ಸಿ.ಎಂ.ಸಿದ್ದರಾಮಯ್ಯ ಘೋಷಣೆ








