ನವದೆಹಲಿ: ದಿಲ್ಲಿಯ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಅವರ 23 ವರ್ಷಗಳಷ್ಟು ಹಳೆಯದಾದ ಮಾನನಷ್ಟ ಮೊಕದ್ದಮೆಯಲ್ಲಿ ನರ್ಮದಾ ಬಚಾವೋ ಆಂದೋಲನದ ಸ್ಥಾಪಕಿ ಮೇಧಾ ಪಾಟ್ಕರ್ ಅವರನ್ನು ಶುಕ್ರವಾರ ಬೆಳಗ್ಗೆ ಬಂಧಿಸಲಾಗಿದೆ.
ಮಾನನಷ್ಟ ಮೊಕದ್ದಮೆಯಲ್ಲಿ ಮೇಧಾ ಪಾಟ್ಕರ್ ವಿರುದ್ಧ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಹೊರಡಿಸಿದ ನಂತರ ದೆಹಲಿ ಪೊಲೀಸರು ಮೇಧಾ ಪಾಟ್ಕರ್ ಅವರನ್ನು ಬಂಧಿಸಿದ್ದಾರೆ. ಆಕೆಯನ್ನು ಶುಕ್ರವಾರ ಮಧ್ಯಾಹ್ನ ಸಾಕೇತ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ನವೆಂಬರ್ 24, 2000 ರಂದು ಹೊರಡಿಸಿದ ಮಾನಹಾನಿಕರ ಪತ್ರಿಕಾ ಪ್ರಕಟಣೆಗಾಗಿ ಪಾಟ್ಕರ್ ವಿರುದ್ಧ ರಾಷ್ಟ್ರೀಯ ನಾಗರಿಕ ಹಕ್ಕುಗಳ ಮಂಡಳಿಯ ಅಧ್ಯಕ್ಷರಾಗಿ ವಿ.ಕೆ.ಸಕ್ಸೇನಾ ಪ್ರಕರಣ ದಾಖಲಿಸಿದ್ದರು. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.