ಬೆಂಗಳೂರು:ಕಲಂ 371(ಜೆ) ಅಡಿಯಲ್ಲಿ ಹೊರಡಿಸಲಾದ ಆದೇಶಗಳ ಅನುಷ್ಠಾನವನ್ನು ಪರಿಶೀಲಿಸಲು ಸಂಪುಟ ಉಪ ಸಮಿತಿಯ ಸಭೆಗೆ ಗೈರುಹಾಜರಾದ ಅಧಿಕಾರಿಗಳಿಗೆ ನೋಟಿಸ್ ನೀಡುವಂತೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಸೂಚಿಸಿದ್ದಾರೆ.
ಪ್ರಿಯಾಂಕ್ ಖರ್ಗೆ ಅವರು ಉಪ ಸಮಿತಿಯ ಅಧ್ಯಕ್ಷರಾಗಿದ್ದಾರೆ.
ಸರ್ಕಾರದ ಆದೇಶದಂತೆ ಇಲಾಖೆ ಮುಖ್ಯಸ್ಥರು ಕಡ್ಡಾಯವಾಗಿ ಸಭೆಗೆ ಹಾಜರಾಗಬೇಕು. ಆದರೆ ಅನೇಕರು ಮಾಹಿತಿ ನೀಡದೆ ಗೈರು ಹಾಜರಾಗಿದ್ದರು.
ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಸುಮಾರು 46 ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 14,771 ಹುದ್ದೆಗಳ ಭರ್ತಿಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಸಭೆಯಲ್ಲಿ ಸಮಿತಿ ಸೂಚನೆ ನೀಡಿದೆ.