ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ ಭಿನ್ನಮತ ಉಲ್ಬಣಿಸಿದೆ. ಸದ್ಯಕ್ಕೆ ಶಮನವಾಗೋದು ಡೌಟ್ ಎನ್ನಲಾಗುತ್ತಿದೆ. ಅಲ್ಲದೇ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಒಂದು ಗುಂಪಿನ ಸದಸ್ಯರು ಇಂದು ಮಧ್ಯಾಹ್ನ 12.30ಕ್ಕೆ ಸಭೆ ನಡೆಸಲು ನಿರ್ಧರಿಸಿರುವುದಾಗಿ ಬಿಜೆಪಿಯ ಉನ್ನತ ಮೂಲಗಳಿಂದ ತಿಳಿದು ಬಂದಿದೆ.
ಇಂದು ಮಧ್ಯಾಹ್ನ 12.30ಕ್ಕೆ ಬೆಂಗಳೂರಿನಲ್ಲಿ ಇರುವಂತ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರ ನಿವಾಸದಲ್ಲಿ ಯತ್ನಾಳ್, ಜಾರಕಿಹೊಳಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬಿಜೆಪಿಯ ಭಿನ್ನಮತೀಯ ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು ಸಭೆಯನ್ನು ನಡೆಸಲಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.
ಇಂದಿನ ಸಭೆಯಲ್ಲಿ ಎಂ.ಪಿ ರೇಣುಕಾಚಾರ್ಯ, ಬಿ.ಸಿ ಪಾಟೀಲ್, ಹರತಾಳು ಹಾಲಪ್ಪ ಕಳಕಪ್ಪ ಬಂಡಿ ಸೇರಿದಂತೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಬೆಂಬಲಿಗರರ ದಂಡೇ ನೆರೆಯಲಿದೆ ಎನ್ನಲಾಗುತ್ತಿದೆ.
ಬಿಜೆಪಿ ಭಿನ್ಮತೀಯರು ಇಂದಿನ ಸಭೆಯಲ್ಲಿ ಚರ್ಚಿಸಿದ ವಿಷಯಗಳನ್ನು, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಅವರೊಂದಿಗೆ ಚರ್ಚಿಸಿ, ಬಿಜೆಪಿ ಹೈಕಮಾಂಡ್ ಮೇಲೆ ಒತ್ತಡ ಹಾಕೋದಕ್ಕೆ ಮುಂದಾಗಿದ್ದಾರೆ ಎಂದೇ ಹೇಳಲಾಗುತ್ತಿದೆ. ಆ ಬಗ್ಗೆ ಖಚಿತ ಮಾಹಿತಿ ತಿಳಿದು ಬರಬೇಕಿದೆ.
ಖಾಯಂ ನಿರೀಕ್ಷೆಯಲ್ಲಿದ್ದ ‘NHM ನೌಕರ’ರಿಗೆ ಬಿಗ್ ಶಾಕ್: ಸ್ಕೀಂ ಮುಗಿದ ಮೇಲೆ ನೋಡೋಣವೆಂದ ‘ಆರೋಗ್ಯ ಸಚಿವ’ರು
ಬೆಂಗಳೂರು ಜನತೆ ಗಮನಕ್ಕೆ: ನಾಳೆ ಈ ಏರಿಯಾಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut