ಶಿವಮೊಗ್ಗ : ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಕೆ.ಎಸ್. ಈಶ್ವರಪ್ಪ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಚುನಾವಣಾಧಿಕಾರಿಗಳ ಕಚೇರಿಯಿಂದ ಅನುಮತಿ ಪಡೆಯದೇ ರಾಜಕೀಯ ಸಭೆ ನಡೆಸಿ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಕೆ.ಎಸ್. ಈಶ್ವರಪ್ಪ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಏಪ್ರಿಲ್ 5 ರಂದು ತೀರ್ಥಹಳ್ಳಿ ತಾಲೂಕಿನ ನೊಣಬೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಬುತೀರ್ಥದ ದೇವಸ್ಥಾನವೊಂದರಲ್ಲಿ ಪೂಜಾ ಕಾರ್ಯಕ್ರಮ ನೆರವೇರಿಸಿ, ಬಳಿಕ ಅಲ್ಲೇ ಹತ್ತಿರದಲ್ಲೇ ಅರ್ಚಕರ ಮನೆಗೆ ಹೋಗಿ, ಅವರ ಮನೆಯಂಗದಲ್ಲಿ ಸಭೆ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.