Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಬೇಸಿಗೆಯಲ್ಲಿ ಹೆಚ್ಚುತ್ತಿರುವ ‘ಎಸಿ ಶೀತ’ : ಹವಾನಿಯಂತ್ರಿತ ಗಾಳಿ ನಿಮ್ಮನ್ನು ಅನಾರೋಗ್ಯಕ್ಕೀಡು ಮಾಡಬಲ್ಲದೇ?

11/04/2026 9:12 PM

ಪ್ರಧಾನಿ ಮೋದಿ ಈಗ ‘ವ್ಲಾಗರ್’: ಪಶ್ಚಿಮ ಬಂಗಾಳದ ರ್‍ಯಾಲಿಗೂ ಮುನ್ನ ವೀಡಿಯೋ ಹಂಚಿಕೊಂಡ ಪ್ರಧಾನಿ; ಸೋಶಿಯಲ್ ಮೀಡಿಯಾದಲ್ಲಿ ವೈರಲ್!

11/04/2026 8:54 PM

ಮತದಾನ ಮತ್ತು ಚುನಾವಣೆಗೆ ಸ್ಪರ್ಧಿಸುವುದು ‘ಮೂಲಭೂತ ಹಕ್ಕು’ ಅಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು!

11/04/2026 8:46 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » JOB FAIR: ‘ಉದ್ಯೋಗಾಕಾಂಕ್ಷಿ’ಗಳ ಗಮನಕ್ಕೆ: ಇಂದು, ನಾಳೆ 2 ದಿನ ಮಂಡ್ಯದಲ್ಲಿ ‘ಬೃಹತ್ ಉದ್ಯೋಗ ಮೇಳ’ ಆಯೋಜನೆ | Job Fair In Mandya
KARNATAKA

JOB FAIR: ‘ಉದ್ಯೋಗಾಕಾಂಕ್ಷಿ’ಗಳ ಗಮನಕ್ಕೆ: ಇಂದು, ನಾಳೆ 2 ದಿನ ಮಂಡ್ಯದಲ್ಲಿ ‘ಬೃಹತ್ ಉದ್ಯೋಗ ಮೇಳ’ ಆಯೋಜನೆ | Job Fair In Mandya

By kannadanewsnow0918/10/2024 10:45 AM

ಮಂಡ್ಯ: ಇಂದು, ನಾಳೆ ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರು ಹಾಗೂ ಕ್ಷೇತ್ರದ ಸಂಸದರೂ ಆಗಿರುವ ಹೆಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಗರದಲ್ಲಿ ಬೃಹತ್ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದ್ದು, ಸುಮಾರು 150ಕ್ಕೂ ಹೆಚ್ಚು ಉದ್ಯೋಗದಾತ ಕಂಪನಿಗಳು ಭಾಗಿಯಾಗಲಿವೆ.

ಈ ಬಗ್ಗೆ ಸ್ವತಃ ಕೇಂದ್ರ ಸಚಿವರೇ ಮಾಹಿತಿ ನೀಡಿದ್ದು, ದೇಶದ ಉದ್ದಗಲಕ್ಕೂ ಇರುವ 150ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಉದ್ಯೋಗ ಮೇಳಕ್ಕೆ ಬರಲಿದ್ದು, ಈ ಭಾಗದ ಮೂರು ಸಾವಿರಕ್ಕೂ ಹೆಚ್ಚು ನಿರುದ್ಯೋಗಿ ಯುವ ಜನರಿಗೆ ಉದ್ಯೋಗ ಕೊಡಿಸುವ ಗುರಿ ಹೊಂದಿದ್ದೇವೆ ಎಂದು ತಿಳಿಸಿದ್ದಾರೆ.

ಮಂಡ್ಯ ಟೂ ಇಂಡಿಯಾ ಎನ್ನುವ ಘೋಷವಾಕ್ಯದೊಂದಿಗೆ ಉದ್ಯೋಗ ಮೇಳ ನಡೆಯುತ್ತಿದ್ದು, ಮಂಡ್ಯದ ಇತಿಹಾಸದಲ್ಲಿಯೇ ಇದೊಂದು ಮೈಲುಗಲ್ಲು ಆಗಲಿದೆ. ರೈತಾಪಿ ಜನರ ಮಕ್ಕಳಿಗೆ ಉದ್ಯೋಗ ಕಲ್ಪಿಸಬೇಕು ಎನ್ನುವುದು ನನ್ನ ಮಹದಾಸೆ ಆಗಿದ್ದು, ಈ ಮೂಲಕ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಇಂದು ಹಾಗೂ ನಾಳೆ (ಅಕ್ಟೋಬರ್ 18-19) ಮಂಡ್ಯ ನಗರದ ಸರ್ ಎಂ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಬೆಳಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ. ಆಸಕ್ತ ಯುವಜನರು ಉದ್ಯೋಗ ಮೇಳದಲ್ಲಿ ಪಾಲ್ಗೊಂಡು ಈ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕೇಂದ್ರ ಸಚಿವರು ಮನವಿ ಮಾಡಿದ್ದಾರೆ.

ಪ್ರತಿದಿನವೂ ನನ್ನ ಮನೆಗೆ ಬರುವ ಅಸಂಖ್ಯಾತ ನಿರುದ್ಯೋಗಿ ಯುವ ಜನರು ಉದ್ಯೋಗ ಕೊಡಿಸಿ ಎಂದು ಕೇಳುತ್ತಾರೆ. ಅವರ ತಂದೆತಾಯಿ ಮಕ್ಕಳ ಭವಿಷ್ಯಕ್ಕಾಗಿ ಕನಸು ಕಟ್ಟಿಕೊಂಡಿದ್ದಾರೆ. ನಿತ್ಯವೂ ನೂರಾರು ಜನರು ನನ್ನ ಮನೆಯ ಬಳಿಗೆ ಬಂದಾಗ ನನ್ನ ಕೈಲಾದ ಸಹಾಯ ಮಾಡಿದ್ದೇನೆ. ಆದರೆ, ದೊಡ್ಡ ಪ್ರಮಾಣದಲ್ಲಿ ಉದ್ಯೋಗಾವಕಾಶ ಕಲ್ಪಿಸಲು ಸಾಧ್ಯವಾಗಿರಲಿಲ್ಲ. ಉದ್ಯೋಗ ಮೇಳದ ಮೂಲಕ ಸಾವಿರಾರು ಸಂಖ್ಯೆಯಷ್ಟು ಯುವ ಜನರಿಗೆ ಕೆಲಸ ಸಿಗಲಿದೆ ಎಂದು ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

ಮಂಡ್ಯ ಜಿಲ್ಲೆಯಲ್ಲಿ ಪ್ರತಿಭಾನ್ವಿತ ಯುವ ಜನರಿಗೆ ಕೊರತೆ ಇಲ್ಲ. ಉತ್ತಮ ವಿದ್ಯಾ ಸಂಸ್ಥೆಗಳು ಇದ್ದು, ಪ್ರತಿವರ್ಷ ಸಾಕಷ್ಟು ಯುವಜನರು ಉತ್ತೀರ್ಣರಾಗಿ ಕಾಲೇಜುಗಳಿಂದ ಹೊರಗೆ ಬರುತ್ತಿದ್ದಾರೆ. ಇವರಿಗೆ ಆದಷ್ಟು ಉದ್ಯೋಗಾವಕಾಶ ಕಲ್ಪಿಸಬೇಕು ಎನ್ನುವುದು ನನ್ನ ಸಂಕಲ್ಪವಾಗಿದೆ ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಮೇಕಾನ್, ಭಾರತೀಯ ಉಕ್ಕು ಪ್ರಾಧಿಕಾರ (SAIL), ರಾಷ್ಟ್ರೀಯ ಖನಿಜಾಭಿವೃದ್ಧಿ ನಿಗಮ (NMDC), ಲೈಲೋಡ್ಸ್ ಮೆಟಲ್ಸ್, ಭಾರತ್ ಹೆವಿ ಎಲೆಕ್ಟ್ರಿಕಲ್ (BHEL), ಜಿಂದಾಲ್ ಸ್ಟೀಲ್ ಸೇರಿದಂತೆ 150ಕ್ಕೂ ಪ್ರತಿಷ್ಠಿತ ಕಂಪನಿಗಳು ಉದ್ಯೋಗ ಮೇಳದಲ್ಲಿ ನೇರ ನೇಮಕಾತಿ ಮಾಡಿಕೊಳ್ಳುತ್ತಿವೆ. ದೇಶಾದ್ಯಂತ ಉದ್ಯೋಗ ಅವಕಾಶಗಳು ಲಭ್ಯ ಇದ್ದು, ಈ ಅವಕಾಶವನ್ನು ಯುವ ಜನರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಚಿವರು ಕೋರಿದ್ದಾರೆ.

ನನ್ನ ಸಚಿವಾಲಯದ ಉನ್ನತ ಅಧಿಕಾರಿಗಳು, ಮಂಡ್ಯ ಜಿಲ್ಲೆಯ ಉನ್ನತ ಹಾಗೂ ಎಲ್ಲಾ ಶ್ರೇಣಿಯ ಅಧಿಕಾರಿಗಳು ಉದ್ಯೋಗ ಮೇಳ ಯಶಸ್ಸಿಗೆ ಕೆಲಸ ಮಾಡುತ್ತಿದ್ದು, ಉದ್ಯೋಗ ಅರಸಿ ಬರುವ ಅಭ್ಯರ್ಥಿಗಳಿಗೆ ನಮ್ಮ ಸ್ವಯಂ ಸೇವಕರು, ಅಧಿಕಾರಿಗಳು ಸೂಕ್ತ ಮಾರ್ಗದರ್ಶನ ನೀಡಲಿದ್ದಾರೆ. ಕಂಪನಿಗಳ ಅಧಿಕಾರಿಗಳು ಅಭ್ಯರ್ಥಿಗಳ ವಿವರಗಳನ್ನು ಗಮನಿಸಿದ ನಂತರ ಅವರಿಗೆ ಸೂಕ್ತವಾದ, ಅರ್ಹವಾದ ಹುದ್ದೆಯನ್ನು ನೀಡುವ ವ್ಯವಸ್ಥೆ ಮಾಡಲಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಮಂಡ್ಯ ಜಿಲ್ಲೆಯಲ್ಲಿ ಪ್ರತಿಭೆಗೆ ಬರವಿಲ್ಲ. ಉತ್ತಮ ವಿದ್ಯಾಸಂಸ್ಥೆಗಳು ಜಿಲ್ಲೆಯಲ್ಲಿ ಇದ್ದು, ಪ್ರತಿವರ್ಷ ಸಾಕಷ್ಟು ಯುವಜನರು ಉತ್ತೀರ್ಣರಾಗಿ ಕಾಲೇಜುಗಳಿಂದ ಹೊರಗೆ ಬರುತ್ತಿದ್ದಾರೆ. ಇವರಿಗೆ ಆದಷ್ಟು ಉದ್ಯೋಗಾವಕಾಶ ಕಲ್ಪಿಸಬೇಕು ಎನ್ನುವುದು ನನ್ನ ದೃಢ ಸಂಕಲ್ಪವಾಗಿದೆ ಎಂದು ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ರಾಜ್ಯದ ‘ಸರ್ಕಾರಿ ಆಸ್ಪತ್ರೆ’ಯೊಂದರಲ್ಲೇ ಲಕ್ಷಾಂತರ ರೂ ಮೌಲ್ಯದ ‘ಯಂತ್ರೋಪಕರಣ’ ಕಳ್ಳತನ

ಆನ್ ಲೈನ್ ಸ್ಕ್ಯಾಮ್ ವಿರುದ್ಧ ಜಾಗೃತಿ: ಕೇಂದ್ರ ಸರ್ಕಾರದೊಂದಿಗೆ ಜಂಟಿ ಉಪಕ್ರಮವನ್ನು ಪ್ರಾರಂಭಿಸಿದ ‘ಮೆಟಾ’

Share. Facebook Twitter LinkedIn WhatsApp Email

Related Posts

​ವಾಹನ ಸವಾರರ ಗಮನಕ್ಕೆ: ಹುಲಿಕಲ್ ಘಾಟ್ ರಸ್ತೆ ಸಂಚಾರ ಬಂದ್ – ಪರ್ಯಾಯ ಮಾರ್ಗಗಳ ವಿವರ ಇಲ್ಲಿದೆ

11/04/2026 8:25 PM2 Mins Read

ರಾಷ್ಟ್ರ ಮಟ್ಟದಲ್ಲಿ ಕೆಎಸ್‌ಆರ್‌ಟಿಸಿ ಮಿಂಚು: ಪ್ರತಿಷ್ಠಿತ ‘AdWorld Showdown’ನ 3 ಪ್ರಶಸ್ತಿಗಳು ನಿಗಮದ ಪಾಲು

11/04/2026 8:14 PM2 Mins Read

ಅನ್ಯ ಧರ್ಮೀಯರು ಕೂಡ ದೇವರ ದರ್ಶನ ಪಡೆಯಲು ಮುಚ್ಚಳಿಕೆ ನೀಡುವ ವಾಡಿಕೆ ಇದೆ: ಟಿಟಿಡಿ ಸದಸ್ಯ ನರೇಶ್ ಕುಮಾರ್

11/04/2026 7:48 PM2 Mins Read
Recent News

​ಬೇಸಿಗೆಯಲ್ಲಿ ಹೆಚ್ಚುತ್ತಿರುವ ‘ಎಸಿ ಶೀತ’ : ಹವಾನಿಯಂತ್ರಿತ ಗಾಳಿ ನಿಮ್ಮನ್ನು ಅನಾರೋಗ್ಯಕ್ಕೀಡು ಮಾಡಬಲ್ಲದೇ?

11/04/2026 9:12 PM

ಪ್ರಧಾನಿ ಮೋದಿ ಈಗ ‘ವ್ಲಾಗರ್’: ಪಶ್ಚಿಮ ಬಂಗಾಳದ ರ್‍ಯಾಲಿಗೂ ಮುನ್ನ ವೀಡಿಯೋ ಹಂಚಿಕೊಂಡ ಪ್ರಧಾನಿ; ಸೋಶಿಯಲ್ ಮೀಡಿಯಾದಲ್ಲಿ ವೈರಲ್!

11/04/2026 8:54 PM

ಮತದಾನ ಮತ್ತು ಚುನಾವಣೆಗೆ ಸ್ಪರ್ಧಿಸುವುದು ‘ಮೂಲಭೂತ ಹಕ್ಕು’ ಅಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು!

11/04/2026 8:46 PM
nitish kumar

ಬಿಹಾರದಲ್ಲಿ ನಿತೀಶ್ ಯುಗಾಂತ್ಯ: ಏಪ್ರಿಲ್ 13ಕ್ಕೆ ಸಿಎಂ ಸ್ಥಾನಕ್ಕೆ ರಾಜೀನಾಮೆ; ಹೊಸ ನಾಯಕನ ಆಯ್ಕೆಗೆ ಕ್ಷಣಗಣನೆ!

11/04/2026 8:29 PM
State News
KARNATAKA

​ವಾಹನ ಸವಾರರ ಗಮನಕ್ಕೆ: ಹುಲಿಕಲ್ ಘಾಟ್ ರಸ್ತೆ ಸಂಚಾರ ಬಂದ್ – ಪರ್ಯಾಯ ಮಾರ್ಗಗಳ ವಿವರ ಇಲ್ಲಿದೆ

By kannadanewsnow0911/04/2026 8:25 PM KARNATAKA 2 Mins Read

ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ಮತ್ತು ಕುಂದಾಪುರವನ್ನು ಸಂಪರ್ಕಿಸುವ ರಾಜ್ಯ ಹೆದ್ದಾರಿ-52 ರ ಬಾಳೆಬರೆ ಘಾಟ್ (ಹುಲಿಕಲ್ ಘಾಟ್) ವ್ಯಾಪ್ತಿಯಲ್ಲಿ ರಸ್ತೆ…

ರಾಷ್ಟ್ರ ಮಟ್ಟದಲ್ಲಿ ಕೆಎಸ್‌ಆರ್‌ಟಿಸಿ ಮಿಂಚು: ಪ್ರತಿಷ್ಠಿತ ‘AdWorld Showdown’ನ 3 ಪ್ರಶಸ್ತಿಗಳು ನಿಗಮದ ಪಾಲು

11/04/2026 8:14 PM

ಅನ್ಯ ಧರ್ಮೀಯರು ಕೂಡ ದೇವರ ದರ್ಶನ ಪಡೆಯಲು ಮುಚ್ಚಳಿಕೆ ನೀಡುವ ವಾಡಿಕೆ ಇದೆ: ಟಿಟಿಡಿ ಸದಸ್ಯ ನರೇಶ್ ಕುಮಾರ್

11/04/2026 7:48 PM

ಪೋಷಕರೇ ಗಮನಿಸಿ: ನಿಮ್ಮ ಮಕ್ಕಳ `SSLC-PUC’ ಬಳಿಕ ಯಾವ ಕೋರ್ಸ್ ಬೆಸ್ಟ್? ಇಲ್ಲಿದೆ ವಿವರ !

11/04/2026 4:37 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.