Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮತ್ತೊಮ್ಮೆ ಬಯಲಾಯ್ತು ಪಾಕ್ ದುಷ್ಟ ಬುದ್ಧಿ ; ಉಗ್ರರಿಗೆ ಆಶ್ರಯ ಕೊಟ್ಟು ಭಾರತದ ವಿರುದ್ಧ ದಾಳಿಗೆ ಸಂಚು ; ಅಮೆರಿಕ ವರದಿ

28/03/2026 9:13 PM

‘ಸಾಗರ ಮಾರಿಕಾಂಬಾ ದೇವಿ ನ್ಯಾಸ’ಕ್ಕೆ ನೂತನ ಸಾರಥ್ಯ: ನಾಗರಾಜ್, ಆನಂದ್ ನೇತೃತ್ವದಲ್ಲಿ ಅಭಿವೃದ್ಧಿಯ ಹೊಸ ಸಂಕಲ್ಪ!

28/03/2026 9:10 PM

ಬೇಸಿಗೆಯಲ್ಲಿ ನಿಮ್ಮ ‘ಕಿಡ್ನಿ’ಗಳ ಆರೋಗ್ಯದ ಕುರಿತು ಜಾಗರೂಕರಾಗಿರಿ ; ಈ ಸಲಹೆ ಅನುಸರಿಸಿ!

28/03/2026 8:52 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕಲಬುರಗಿ ಬಳಿ ಸಾವಿರ ಎಕರೆ ಪ್ರದೇಶದಲ್ಲಿ ಮೆಗಾ ಜವಳಿ ಪಾರ್ಕ್ ನಿರ್ಮಾಣ: 1 ಲಕ್ಷ ಜನರಿಗೆ ನೇರ ಉದ್ಯೋಗ
KARNATAKA

ಕಲಬುರಗಿ ಬಳಿ ಸಾವಿರ ಎಕರೆ ಪ್ರದೇಶದಲ್ಲಿ ಮೆಗಾ ಜವಳಿ ಪಾರ್ಕ್ ನಿರ್ಮಾಣ: 1 ಲಕ್ಷ ಜನರಿಗೆ ನೇರ ಉದ್ಯೋಗ

By kannadanewsnow0903/09/2024 6:06 PM

ಕಲಬುರಗಿ: ಜಿಲ್ಲೆಯ 1,000 ಎಕರೆ ಪ್ರದೇಶದಲ್ಲಿ ಪಿ.ಪಿ.ಪಿ ಮಾದರಿಯಲ್ಲಿ ಮೆಗಾ ಜವಳಿ ಪಾರ್ಕ್‌ನ್ನು ಸ್ಥಾಪಿಸಲಾಗುತ್ತಿದ್ದು ಇದರಿಂದ 1 ಲಕ್ಷ ಜನರಿಗೆ ನೇರ ಉದ್ಯೋಗ ಹಾಗೂ 2 ಲಕ್ಷ ಜನರಿಗೆ ಪರೋಕ್ಷ ಉದ್ಯೋಗ ಸೃಜನೆಯಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಈ ಯೋಜನೆಗೆ ಪೂರಕವಾದ ಮೂಲ ಸೌಕರ್ಯಕ್ಕಾಗಿ 50 ಕೋಟಿ ರೂ. ಅನುದಾನವನ್ನು ಈ ಬಾರಿಯ ಆಯವ್ಯಯದಲ್ಲಿ ಘೋಷಿಸಲಾಗಿದೆ ಎಂದೂ ಸಚಿವರು ಹೇಳಿದ್ದಾರೆ.

ಕಲಬುರಗಿ ಜಿಲ್ಲಾಧಿಕಾರಿ ಕನೀಜ್ ಫಾತೀಮಾ ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಬೆಂಗಳೂರಿನ ವಿಕಾಸೌಧದ ಕಚೇರಿಯಲ್ಲಿ ಸಚಿವರು ನಡೆಸಿದ ಸಭೆಯಲ್ಲಿ ಜವಳಿ ಪಾರ್ಕ್‌ ಸಜ್ಜುಗೊಳಿಸಲು ಮೂಲಭೂತ ಸೌಲಭ್ಯಗಳನ್ನು ವಿಸ್ತರಿಸುವ ಸಂಬಂಧದಲ್ಲಿ ಚರ್ಚಿಸಲಾಯಿತು.

ಪಾರ್ಕ್‌ ಅವಶ್ಯಕತೆಗಳಿಗನುಗುಣವಾಗಿ ಸುಮಾರು 16 ಎಂ.ಎಲ್.ಡಿ ನೀರಿನ ಅವಶ್ಯಕತೆಯಿದ್ದು, ಮದಿ ಗ್ರಾಮದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಲಾಗಿರುವ ಬ್ಯಾರೇಜ್‌ನಿಂದ ನೀರು ಪೂರೈಕೆ ಮಾಡುವ ಬಗ್ಗೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿದ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಪಾರ್ಕ್‌ ಆವರಣದಲ್ಲಿನ ಕೆರೆಯನ್ನು ಪುನರ್ಜೀವಗೊಳಿಸುವುದು, ಮಳೆನೀರು ಕೊಯಲು ಪದ್ಧತಿ ಅಳವಡಿಕೆ ಮೂಲಕ ನೀರನ್ನು ಬಳಸಿಕೊಳ್ಳುವ ಪರ್ಯಾಯ ವ್ಯವಸ್ಥೆಗಳನ್ನೂ ಮಾಡಲು ಸೂಚಿಸಿದರು.

ಜವಳಿ ಪಾರ್ಕ್‌ ಸಂಪರ್ಕಿಸುವ ರಸ್ತೆ ನಿರ್ಮಾಣಕ್ಕೆ ಲೋಕೋಪಯೋಗಿ ಇಲಾಖೆ ಸಲ್ಲಿಸಿರುವ ಪ್ರಸ್ತಾವನೆಯನ್ನು ಪರಿಶೀಲಿಸಿದ ಸಚಿವರು ದೀರ್ಘಕಾಲ ಬಾಳಿಕೆ ಬರುವ ರಸ್ತೆಗಳನ್ನು ನಿರ್ಮಿಸಲು ಸಚಿವರು ಸೂಚಿಸಿದರು.

ಜವಳಿ ಪಾರ್ಕ್‌ ಆವರಣದಲ್ಲಿ ಸೋಲಾರ್‌ ದೀಪಗಳನ್ನು ಅಳವಡಿಸುವ ಮೂಲಕ ವಿದ್ಯುತ್‌ ಮಿತವ್ಯಯ ಮಾಡಲು ಸಲಹೆ ಮಾಡಿದ ಸಚಿವರು ಉಳಿದಂತೆ ಜವಳಿ ಪಾರ್ಕ್‌ಗೆ 180 ಮೆಗಾ ವ್ಯಾಟ್ ವಿದ್ಯುತ್ ಸಂಪರ್ಕ ಪೂರೈಸುವ ಸಂಬಂಧ 220 ಕೆ.ವಿ ಪವರ್‌ ಸಬ್‌ಸ್ಟೇಷನ್ ನಿರ್ಮಿಸಲು ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮದ ಮನವಿಯಂತೆ ಪಾರ್ಕ್‌ ಆವರಣದಲ್ಲಿ ಸ್ಥಳ ಗುರುತಿಸಲಾಗಿದೆ ಎಂದು ಅಧಿಕಾರಿಗಳು ಸಸಚಿವರಿಗೆ ತಿಳಿಸಿದರು.

ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಕಾರ್ಯದರ್ಶಿ (ಜವಳಿ) ವಿಪುಲ್ ಬನ್ಸಾಲ್‌, ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮದ‌ ವ್ಯವಸ್ಥಾಪಕ ನಿರ್ದೇಶಕ ಪಂಕಜ್‌ ಕುಮಾರ್‌ ಪಾಂಡೆ, ಜವಳಿ ಅಭಿವೃದ್ಧಿ ಆಯುಕ್ತೆ ಕೆ.ಜ್ಯೋತಿ ಇನ್ನಿತರ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

Good News: ಜಿಲ್ಲೆಗೊಂದು ‘ವೈದ್ಯಕೀಯ ಕಾಲೇಜು’ ತೆರೆಯಲಾಗುವುದು: ಸಿಎಂ ಸಿದ್ಧರಾಮಯ್ಯ

BREAKING: ‘ಶಿವಮೊಗ್ಗ ಜಿಲ್ಲೆ’ಯಾಧ್ಯಂತ ಗಣೇಶ, ಈದ್ ಮಿಲಾದ್ ಹಬ್ಬದ ವೇಳೆ ‘DJ ಬಳಕೆ’ಗೆ ನಿಷೇಧ ಹೇರಿ ‘DC ಆದೇಶ’

Share. Facebook Twitter LinkedIn WhatsApp Email

Related Posts

‘ಸಾಗರ ಮಾರಿಕಾಂಬಾ ದೇವಿ ನ್ಯಾಸ’ಕ್ಕೆ ನೂತನ ಸಾರಥ್ಯ: ನಾಗರಾಜ್, ಆನಂದ್ ನೇತೃತ್ವದಲ್ಲಿ ಅಭಿವೃದ್ಧಿಯ ಹೊಸ ಸಂಕಲ್ಪ!

28/03/2026 9:10 PM2 Mins Read

ದಾವಣಗೆರೆಯಲ್ಲಿ ತೊಡೆ ತಟ್ಟಿದ್ದ ಪ್ರದೀಪ್‌ ಈಶ್ವರ್‌ಗೆ ಚಪ್ಪಲಿ, ಪೊರಕೆ ಪ್ರದರ್ಶಿಸಿದ ಬಿಜೆಪಿಗರು

28/03/2026 8:45 PM2 Mins Read

BREAKING: ಹಾಸನದಲ್ಲಿ ಸಿಡಿಲು ಬಡಿದು ಮೂವರು ಮಹಿಳೆಯರಿಗೆ ಗಂಭೀರ ಗಾಯ

28/03/2026 8:42 PM1 Min Read
Recent News

ಮತ್ತೊಮ್ಮೆ ಬಯಲಾಯ್ತು ಪಾಕ್ ದುಷ್ಟ ಬುದ್ಧಿ ; ಉಗ್ರರಿಗೆ ಆಶ್ರಯ ಕೊಟ್ಟು ಭಾರತದ ವಿರುದ್ಧ ದಾಳಿಗೆ ಸಂಚು ; ಅಮೆರಿಕ ವರದಿ

28/03/2026 9:13 PM

‘ಸಾಗರ ಮಾರಿಕಾಂಬಾ ದೇವಿ ನ್ಯಾಸ’ಕ್ಕೆ ನೂತನ ಸಾರಥ್ಯ: ನಾಗರಾಜ್, ಆನಂದ್ ನೇತೃತ್ವದಲ್ಲಿ ಅಭಿವೃದ್ಧಿಯ ಹೊಸ ಸಂಕಲ್ಪ!

28/03/2026 9:10 PM

ಬೇಸಿಗೆಯಲ್ಲಿ ನಿಮ್ಮ ‘ಕಿಡ್ನಿ’ಗಳ ಆರೋಗ್ಯದ ಕುರಿತು ಜಾಗರೂಕರಾಗಿರಿ ; ಈ ಸಲಹೆ ಅನುಸರಿಸಿ!

28/03/2026 8:52 PM

ದಾವಣಗೆರೆಯಲ್ಲಿ ತೊಡೆ ತಟ್ಟಿದ್ದ ಪ್ರದೀಪ್‌ ಈಶ್ವರ್‌ಗೆ ಚಪ್ಪಲಿ, ಪೊರಕೆ ಪ್ರದರ್ಶಿಸಿದ ಬಿಜೆಪಿಗರು

28/03/2026 8:45 PM
State News
KARNATAKA

‘ಸಾಗರ ಮಾರಿಕಾಂಬಾ ದೇವಿ ನ್ಯಾಸ’ಕ್ಕೆ ನೂತನ ಸಾರಥ್ಯ: ನಾಗರಾಜ್, ಆನಂದ್ ನೇತೃತ್ವದಲ್ಲಿ ಅಭಿವೃದ್ಧಿಯ ಹೊಸ ಸಂಕಲ್ಪ!

By kannadanewsnow0928/03/2026 9:10 PM KARNATAKA 2 Mins Read

ಶಿವಮೊಗ್ಗ: ಮಲೆನಾಡಿನ ಆರಾಧ್ಯ ದೈವ, ಸಾಗರದ ಶ್ರೀ ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಟಾನದ ಪದಾಧಿಕಾರಿಗಳ ಚುನಾವಣೆ ಶನಿವಾರ ಅದ್ಧೂರಿಯಾಗಿ ಸಂಪನ್ನಗೊಂಡಿದೆ.…

ದಾವಣಗೆರೆಯಲ್ಲಿ ತೊಡೆ ತಟ್ಟಿದ್ದ ಪ್ರದೀಪ್‌ ಈಶ್ವರ್‌ಗೆ ಚಪ್ಪಲಿ, ಪೊರಕೆ ಪ್ರದರ್ಶಿಸಿದ ಬಿಜೆಪಿಗರು

28/03/2026 8:45 PM

BREAKING: ಹಾಸನದಲ್ಲಿ ಸಿಡಿಲು ಬಡಿದು ಮೂವರು ಮಹಿಳೆಯರಿಗೆ ಗಂಭೀರ ಗಾಯ

28/03/2026 8:42 PM

ಕಲಬುರಗಿಯಲ್ಲಿ ವರದಕ್ಷಿಣೆಗಾಗಿ ಪತ್ನಿಯ ಭೀಕರ ಕೊಲೆ; ಪತಿ ಸೇರಿ ಮೂವರ ಬಂಧನ!

28/03/2026 8:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.