ಕಲಬುರಗಿ: ಬಿಸಿಲಿನ ತಾಪಮಾನದಿಂದ ಕಲಬುರಗಿ ಸಂಸದ ಡಾ.ಉಮೇಶ್ ಜಾಧವ್ ಬಿದ್ದ ಘಟನೆ ನಡೆದಿದೆ. ಇಂದು ಲಬುರಗಿಯಲ್ಲಿ ವಿರಶೈವ ಲಿಂಗಾಯತ ಸಮುದಾಯದಿಂದ ಪ್ರತಿಭಟನೆ ನಡೆಯುತ್ತಿತ್ತು, ಈ ವೇಳೆ ಬಿಸಿಲಿನ ತಾಪಕ್ಕೆ ತಲೆಸುತ್ತು ಬಂದು ರಸ್ತೆಯಲ್ಲಿಯೇ ಕುಸಿದು ಬಿದ್ದರು. ಬಳಿಕ ಅವರನ್ನು ಅಂಬುಲೆನ್ಸ್ನಲ್ಲಿ ಆಸ್ಪತ್ರೆಗೆ ದಾಖಲು ಮಾಡಿ ಅವರಿಗೆ ಚಿಕಿತ್ಸೆ ನೀಡಲಾಗಿದೆ ಅಂತ ತಿಳಿದು ಬಂಧಿದೆ.
ಇನ್ನೂ ಇದಕ್ಕೂ ಮುನ್ನ ಕಲಬುರಗಿಯ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ಜಾಧವ್, ಅಂಬೇಡ್ಕರ್ ಪ್ರತಿಮೆಗೆ ಅವಮಾನ ಮಾಡಿದ ಆರೋಪಿಗಳಿಗೆ ನಿನ್ನೆ ಜಾಮೀನು ಮಂಜೂರು ಆಗಿದೆ. ಜಾಮೀನಿನ ಮೇಲೆ ಹೊರ ಬಂದ ಆರೋಪಿಯ ಮನೆ ಮೇಲೆ ಕಲ್ಲು ತೂರಾಟ ನಡೆಸಿ ಹಲ್ಲೆ ಮಾಡಿದ್ದಾರೆ ಅಂಥ ಆರೋಪಿಸಿದರು.