ಬೆಂಗಳೂರು: ರಾಜ್ಯಸರ್ಕಾರದ ಮಹಿಳಾ ನೌಕರರಿಗೆ ತಿಂಗಳಿಗೆ ಒಂದು ಋತುಚಕ್ರ ರಜೆಯನ್ನು ಮಂಜೂರು ಮಾಡಿ ಆರ್ಥಿಕ ಇಲಾಖೆ ಆದೇಶ ಹೊರಡಿಸಿದೆ. ಈ ಸೌಲಭ್ಯ ತಕ್ಷಣದಿಂದಲೇ ಜಾರಿ ಮಾಡಲಾಗಿದೆ.
ಋತುಚಕ್ರ ಹೊಂದಿರುವ 18 ವರ್ಷದಿಂದ 52 ವರ್ಷ ವಯಸ್ಸಿನ ಮಹಿಳಾ ಸರ್ಕಾರಿ ನೌಕರರಿಗೆ ಈ ರಜೆ ಅನ್ವಯವಾಗಲಿದೆ. ತಿಂಗಳಿಗೆ ಒಂದರಂತೆ ವರ್ಷಕ್ಕೆ ಒಟ್ಟು 12 ಋತುಚಕ್ರ ರಜೆಯನ್ನು ಪಡೆಯಬಹುದು.
ಸಾಂದರ್ಭಿಕ ರಜೆಯನ್ನು ಮಂಜೂರು ಮಾಡುವ ಸಕ್ಷಮ ಪ್ರಾಧಿಕಾರವೇ ಈ ರಜೆಯನ್ನೂ ಮಂಜೂರು ಮಾಡಬಹುದಾಗಿದೆ. ಈ ರಜೆ ಪಡೆಯಲು ಯಾವುದೇ ವೈದ್ಯಕೀಯ ಪ್ರಮಾಣ ಪತ್ರ ನೀಡಬೇಕಿಲ್ಲ. ಈ ರಜೆಯನ್ನು ಹಾಜರಾತಿ ಪುಸ್ತಕದಲ್ಲಿ ಪ್ರತ್ಯೇಕವಾಗಿ ನಮೂದಿಸಬೇಕು ಎಂದು ಆದೇಶದಲ್ಲಿ ವಿವರಿಸಲಾಗಿದೆ.
ಕಾರ್ಮಿಕ ಇಲಾಖೆಯ ಮತ್ತೊಂದು ಮಹತ್ವದ ಕ್ರಮ ಜಾರಿ
ರಾಜ್ಯದ ಸರ್ಕಾರಿ ಮಹಿಳಾ ಉದ್ಯೋಗಿಗಳ ಮನೋಸ್ಥೈರ್ಯ ಹೆಚ್ಚಿಸುವ ಉದ್ದೇಶದಿಂದ ಜಾರಿ ಮಾಡಲಾದ ಋತುಚಕ್ರ ರಜೆಯು ಕಾರ್ಮಿಕ ಇಲಾಖೆಯ ಮಹತ್ವದ ಕ್ರಮಗಳಲ್ಲಿ ಒಂದಾಗಿದೆ. ಕಾರ್ಮಿಕ ಸಚಿವರಾದ ಸಂತೋಷ್ ಎಸ್ ಲಾಡ್ ಅವರು ಈ ಸೌಲಭ್ಯ ಜಾರಿಯಾಗುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.
ಸರ್ಕಾರಿ ಕಾಯಂ, ಗುತ್ತಿಗೆ, ವಿವಿಧ ಕಾರ್ಮಿಕ ಕಾಯ್ದೆಗಳ ಅಡಿ ನೋಂದಣಿಯಾಗಿರುವ ಎಲ್ಲಾ ಕೈಗಾರಿಕೆಗಳು ಮತ್ತು ಸಂಸ್ಥೆಗಳಲ್ಲಿ ದುಡಿಯುವ ಮಹಿಳಾ ನೌಕರರು, ಹೊರಗುತ್ತಿಗೆ ವಲಯಗಳಲ್ಲಿ ದುಡಿಯುವ ಮಹಿಳಾ ಉದ್ಯೋಗಿಗಳಿಗೂ ಈ ರಜೆ ಸೌಲಭ್ಯ ಅನ್ವಯವಾಗಲಿದೆ. ಮಹಿಳಾ ನೌಕರರ ಮಾನಸಿಕ ಮತ್ತು ದೈಹಿಕ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಈ ರಜೆಯನ್ನು ನೀಡಬೇಕು ಎಂದು ಇತ್ತೀಚೆಗೆ ಸಚಿವ ಸಂಪುಟ ಅನುಮೋದನೆ ನೀಡಿತ್ತು.
Indian Railway | ಇನ್ಮುಂದೆ ತತ್ಕಾಲ್ ರೈಲಿನ ಟಿಕೆಟ್ ಬುಕ್ಕಿಗ್‌ಗೆ ‘OTP’ ಕಡ್ಡಾಯ: ಭಾರತೀಯ ರೈಲ್ವೆ
SHOCKING : ಕಳ್ಳತನದ ಆರೋಪ ಸಹಿಸಲಾಗದೇ `SSLC’ ವಿದ್ಯಾರ್ಥಿ ಆತ್ಮಹತ್ಯೆ.!








