ಬೆಂಗಳೂರು : SSLC, PU ಪರೀಕ್ಷಾ ಮಂಡಳಿ ವಿಲೀನಕ್ಕೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ಇಂದು ವಿಧಾನಸೌಧದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ SSLC, PU ಪರೀಕ್ಷಾ ಮಂಡಳಿ ವಿಲೀನಕ್ಕೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷಾ ಮಂಡಳಿಗಳನ್ನ ವಿಲೀನಗೊಳಿಸಿ ಏಕರೂಪ ಪರೀಕ್ಷಾ ಮಂಡಳಿಯನ್ನ ಜಾರಿಗೆ ತರಲು ನಿರ್ಧರಿಸಲಾಗಿದೆ. ಅನಗತ್ಯ ಖರ್ಚು, ಹೆಚ್ಚುವರಿ ಸಿಬ್ಬಂದಿ ನೇಮಕ ಸೇರಿದಂತೆ ಹಲವು ಅನಗತ್ಯ ಖರ್ಚಿಗೆ ಬ್ರೇಕ್ ಹಾಕಲು SSLC, PU ಪರೀಕ್ಷಾ ಮಂಡಳಿ ವಿಲೀನಕ್ಕೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ತಿಳಿದು ಬಂದಿದೆ.