ಬೆಳಗಾವಿ: ಚಳಿಗಾಲದ ಅಧಿವೇಶನ ಆರಂಭದ ದಿನವೇ ಇಂದು ಎಂಇಎಸ್ ಮಹಾಮೇಳ ನಡೆಸಲು ಮಹಾರಾಷ್ಟ್ರ ಏಕೀಕರಣ ಸಮಿತಿ ಮುಂದಾಗಿದೆ. ಬೆಳಗ್ಗೆ 11 ಗಂಟೆಗೆ ವ್ಯಾಕ್ಸಿನ್ ಡಿಪೋಗೆ ಆಗಮಿಸುವಂತೆ ಎಂಇಎಸ್ ಮುಖಂಡರು ಕರೆ ನೀಡಿದ್ದರು. ಆದರೆ ಇದಕ್ಕೆ ಪೊಲೀಸರು ಎಂಇಎಸ್ ಮಹಾ ಮೇಳಾವ್ ಗೆ ತಡೆ ಹಿಡಿದಿದ್ದಾರೆ.
BIGG NEWS: ಬೆಂಗಳೂರಿನಲ್ಲಿ ಡಬಲ್ ಮರ್ಡರ್ ಪ್ರಕರಣ; ಆರೋಪಿಗಳ ಪತ್ತೆಗಾಗಿ ನಾಲ್ಕು ವಿಶೇಷ ತಂಡ ರಚನೆ
ಗಡಿ ಕ್ಯಾತೆ ತೆಗೆದಿದ್ದ ಎಂಇಎಸ್ ಪುಂಡರಿಗೆ ಪೊಲಿಸರು ಗುನ್ನಾ ಹೊಡೆದಿದ್ದಾರೆ. 2006 ರಿಂದ 2021 ವರೆಗೂ ಮಹಾ ಮೇಳಾವ್ ಮಾಡುತ್ತಿದ್ದರು. ಹೀಗಾಗಿ ಈ ಬಾರಿ ಕೂಡ ಎಂಇಎಸ್ ಅವರು ಮಹಾ ಮೇಳಾವ್ ನಡೆಸಿಕೊಂಡು ಬರುತ್ತಿದ್ದರು. ಇದೀಗ ಪೊಲೀಸ್ ಇಲಾಖೆ ಮಹಾ ಮೇಳಾವ್ ಗೆ ಸಜ್ಜಾಗಿದ್ದವರಿಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಎಲ್ಲೂ ಕೂಡ ಸಭೆ ಸೇರದಂತೆ ಎಂಇಎಸ್ ಪುಂಡಾರಿಗೆ ವಾರ್ನಿಂಗ್ ನೀಡಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ಮೇರೆಗೆ ಮಹಾ ಮೇಳಾವ್ ಗೆ ಬಿಗ್ ಬ್ರೇಕ್ ಹಾಕಲಾಗಿದೆ.
BIGG NEWS: ಬೆಂಗಳೂರಿನಲ್ಲಿ ಡಬಲ್ ಮರ್ಡರ್ ಪ್ರಕರಣ; ಆರೋಪಿಗಳ ಪತ್ತೆಗಾಗಿ ನಾಲ್ಕು ವಿಶೇಷ ತಂಡ ರಚನೆ
ಮುಂಜಾಗ್ರತಾ ಕ್ರಮವಾಗಿ ಸ್ಥಳದಲ್ಲಿ ಓರ್ವ ಎಸಿಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.ಮತ್ತೊಂದೆಡೆ ಮಹಾರಾಷ್ಟ್ರದ ರಾಜಕೀಯ ನಾಯಕರಿಗೆ ಬೆಳಗಾವಿಗೆ ಬರುವಂತೆ ಮಹಾರಾಷ್ಟ್ರ ಏಕೀಕರಣ ಸಮಿತಿ ಆಹ್ವಾನ ನೀಡಿತ್ತು. ಆದ್ರೆ ಮಹಾರಾಷ್ಟ್ರ ಗಡಿ ಸಮಿತಿ ಅಧ್ಯಕ್ಷ, ಸಂಸದ ಧೈರ್ಯಶೀಲ ಮಾನೆ ಬೆಳಗಾವಿ ಪ್ರವೇಶಕ್ಕೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದೆ.