ಬೆಂಗಳೂರು: ಸಾರಿಗೆ ಬಸ್ ಟಿಕೆಟ್ ದರವನ್ನು ಶೇ.15ರಷ್ಟು ಹೆಚ್ಚಳಕ್ಕೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಗಿದೆ. ಈ ಬೆನ್ನಲ್ಲೇ ಬೆಂಗಳೂರಿಗರಿಗೆ ಮತ್ತೊಂದು ಶಾಕ್ ಎನ್ನುವಂತೆ ಮೆಟ್ರೋ ಟಿಕೆಟ್ ದರ, ನೀರಿನ ದರ ಏರಿಕೆಯ ಸುಳುವು ಹೊರ ಬಿದ್ದಿದೆ.
ಬೆಂಗಳೂರಿನ ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆಗೆ ಬಿಎಂಆರ್ ಸಿಎಲ್ ಮುಂದಾಗಿದೆ. ಈ ಸಂಬಂಧ ಜನವರಿ 2ನೇ ವಾರ ಅಥವಾ 3ನೇ ವಾರದಲ್ಲಿ ಬೋರ್ಡ್ ಮೀಟಿಂಗ್ ನಡೆಯಲಿದೆ. ಈ ಸಭೆಯಲ್ಲಿ ಮೆಟ್ರೋ ಟಿಕೆಟ್ ದರ ಏರಿಕೆ ಸಂಬಂಧ ಚರ್ಚೆ ನಡೆಸಲಾಗುತ್ತದೆ.
ಈಗಾಗಲೇ ಮೆಟ್ರೋ ಟಿಕೆಟ್ ದರ ಹೆಚ್ಚಳಕ್ಕೆ ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಬಿಎಂಆರ್ ಸಿಎಲ್ ಆಹ್ವಾನಿಸಿತ್ತು ಎನ್ನಲಾಗಿದೆ. ಈ ಆಕ್ಷೇಪಣೆಗಳ ನಡುವೆಯೂ ಶೀಘ್ರವೇ ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆ ಮಾಡಲಾಗುವಂತ ಸುಳಿವನ್ನು ಬಿಎಂಆರ್ ಸಿಎಲ್ ಉನ್ನತ ಮೂಲಗಳಿಂದ ತಿಳಿದು ಬಂದಿದೆ.
ಕಾವೇರಿ ನೀರಿನ ದರವೂ ಪರಿಷ್ಕರಣೆ
ಇನ್ನೂ ನಮ್ಮ ಮೆಟ್ರೋ ಟಿಕೆಟ್ ದರ ಅಷ್ಟೇ ಅಲ್ಲದೇ ಬೆಂಗಳೂರು ಜನತೆಗೆ ಬಿಗ್ ಶಾಕ್ ಎನ್ನುವಂತೆ ಕಾವೇರಿ ನೀರಿನ ದರವನ್ನು ಪರಿಷ್ಕರಣೆಗೆ ಸರ್ಕಾರ ಮುಂದಾಗಿದೆ ಎಂಬುದಾಗಿ ಹೇಳಲಾಗುತ್ತಿದೆ.
ನೀರಿನ ಸರಬರಾಜು ವೆಚ್ಚ, ವಿದ್ಯುತ್ ದರದ ಹೆಚ್ಚುವರಿ ಹೊರೆಯನ್ನು ತಗ್ಗಿಸಲು ನೀರಿನ ದರ ಪರಿಷ್ಕರಣೆಯ ಸುಳಿವನ್ನು ಜಲಮಂಡಳಿ ನೀಡಿದೆ. ಶೀಘ್ರವೇ ಬೆಂಗಳೂರಿನ ಜನತೆಗೆ ಡಬ್ಬಲ್ ಶಾಕ್ ಸಿಗೋದು ಗ್ಯಾರಂಟಿ ಎನ್ನಲಾಗುತ್ತಿದೆ. ಆ ಬಗ್ಗೆ ಕಾದು ನೋಡಬೇಕಿದೆ.
BREAKING : ರಾಮನಗರದಲ್ಲಿ ಭೀಕರ ಕೊಲೆ : ‘ನ್ಯೂ ಇಯರ್’ ಪಾರ್ಟಿ ವೇಳೆ ವ್ಯಕ್ತಿಯನ್ನು ಕೊಂದು ಬಾವಿಗೆ ಎಸೆದ ದುರುಳರು!
“ನಿಮ್ಮ ಆಟವೇ ಆಸರೆ” : ಸಿಡ್ನಿಯಲ್ಲಿ ‘ಟೀಂ ಇಂಡಿಯಾ’ಗೆ ಆಘಾತ ; ಬುಮ್ರಾ ‘ಮಹಾಬಲಿ’ ಅವತಾರ ವೈರಲ್