ನವದೆಹಲಿ: ದೇಶದ ಆಂತರಿಕ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಭಾರತ ಮತ್ತು ಮ್ಯಾನ್ಮಾರ್ ನಡುವಿನ ಮುಕ್ತ ಚಲನೆ ಆಡಳಿತವನ್ನು (ಎಫ್ಎಂಆರ್) ರದ್ದುಗೊಳಿಸಲು ಗೃಹ ಸಚಿವಾಲಯ (ಎಂಎಚ್ಎ) ನಿರ್ಧರಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ಪ್ರಕಟಿಸಿದ್ದಾರೆ.
ಮ್ಯಾನ್ಮಾರ್ ಗಡಿಯಲ್ಲಿರುವ ಭಾರತದ ಈಶಾನ್ಯ ರಾಜ್ಯಗಳ ಜನಸಂಖ್ಯಾ ರಚನೆಯನ್ನು ಕಾಪಾಡಿಕೊಳ್ಳಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅಮಿತ್ ಶಾ ಹೇಳಿದರು.
ಈ ಕುರಿತಂತೆ ಎಕ್ಸ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ವಿದೇಶಾಂಗ ಸಚಿವಾಲಯವು ಪ್ರಸ್ತುತ ಅದನ್ನು ರದ್ದುಗೊಳಿಸುವ ಪ್ರಕ್ರಿಯೆಯಲ್ಲಿರುವುದರಿಂದ, ಎಫ್ಎಂಆರ್ ಅನ್ನು ತಕ್ಷಣವೇ ಅಮಾನತುಗೊಳಿಸಲು ಎಂಎಚ್ಎ ಶಿಫಾರಸು ಮಾಡಿದೆ ಎಂದು ತಿಳಿಸಿದ್ದಾರೆ.
It is Prime Minister Shri @narendramodi Ji's resolve to secure our borders.
The Ministry of Home Affairs (MHA) has decided that the Free Movement Regime (FMR) between India and Myanmar be scrapped to ensure the internal security of the country and to maintain the demographic…
— Amit Shah (@AmitShah) February 8, 2024