ಬೆಂಗಳೂರು : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಸರಣಿ ಆತ್ಮಹತ್ಯೆ ನಡೆಯುತ್ತಿದೆ.ಈ ಕುರಿತು ಸಿಎಂ ಸಿದ್ದರಾಮಯ್ಯ ಮುಂದಿನ ಸಂಪುಟ ಸಭೆಯಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಸುಗ್ರೀವಾಜ್ಞೆ ಜಾರಿ ಮಾಡಲಾಗುತ್ತೆ ಎಂದು ಹೇಳಿಕೆ ನೀಡಿದ್ದಾರೆ. ಇದರ ಬೆನ್ನಲ್ಲೇ ಇಂದು ಸಂಜೆ ಸಿಎಂ ಸಿದ್ದರಾಮಯ್ಯ ಜೊತೆ ಚರ್ಚಿಸಿ ಫೈನಾನ್ಸ್ ಕಿರುಕುಳ ತಡೆಗೆ ಸುಗ್ರೀವಾಜ್ಞೆ ಕಾನೂನು ತರಲು ಸಿದ್ಧತೆ ಮಾಡಿಕೊಳ್ಳಲಾಗುತ್ತೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಅವರು ತಿಳಿಸಿದರು.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಗೃಹ ಸಚಿವ ಜಿ ಪರಮೇಶ್ವರ್ ಹಾಗೂ ಕಾನೂನು ಸಚಿವ ಎಚ್ ಕೆ ಪಾಟೀಲ್ ಅವರು ಮಾತನಾಡಿ, ನಾಳೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಯುವ ಕುರಿತು ಚರ್ಚಿಸಲಾಗುತ್ತದೆ. ಸಂಜೆ ಸಿಎಂ ಜೊತೆಗೆ ಚರ್ಚಿಸಿ ಅಂತಿಮಗೊಳಿಸಿ, ಸುಗ್ರೀವಾಜ್ಞೆ ಮೂಲಕ ಕಾನೂನು ತರುತ್ತೇವೆ. ಮೈಕ್ರೋ ಫೈನಾನ್ಸ್ ಕಿರುಕುಳ ತಡೆಯಲು ಸುದೀರ್ಘವಾಗಿ ಚರ್ಚೆ ಆಗಿದೆ. ಕರ್ನಾಟಕ ಮೈಕ್ರೋ ಫೈನಾನ್ಸ್ ನಿಯಂತ್ರಣ ಮಸೂದೆ ಜಾರಿ ಬಗ್ಗೆ ಚರ್ಚಿಸಲಾಗಿದೆ. ಜನವರಿ 25ರಂದು ಸಿಎಂ ತುರ್ತು ಸಭೆ ನಡೆಸಿದ್ದರು ಅಂದು ಈ ಕುರಿತು ಚರ್ಚೆಯಾಗಿತ್ತು. ಸಣ್ಣ ಕಿರುಸಾಲ ಪಡೆಯುವವರಿಗೆ ರಕ್ಷಣೆ ಕಿರುಕುಳ ನಿಯಂತ್ರಣದ ಬಗ್ಗೆ ಕಾನೂನು ಜಾರಿಯಾಗುತ್ತೆ.
ಮಾರ್ಚ್ ನಲ್ಲಿ ಅಧಿವೇಶನ ನಡೆಯಲಿದೆ ಅಲ್ಲಿಯವರೆಗೂ ಕಾಯುವುದು ಬೇಡವೆಂದು ಸುಗ್ರೀವಾಜ್ಞೆಯ ಮೂಲಕ ಕಾನೂನು ಜಾರಿಗೆ ಕ್ರಮ ಕೈಗೊಂಡಿದ್ದೇವೆ. ಕಾನೂನು ಇಲಾಖೆಯ ಸಚಿವರು ಮಸೂದೆಯ ಕರಡು ತಯಾರಿಸಿದ್ದಾರೆ. ದೂರು ಕೊಡದಿದ್ದರೂ ಕೆ ಎಸ್ ದಾಖಲಿಸಲು ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ. ನಾಳೆ ನಡೆಲಿರುವ ಸಚಿವ ಸಂಪುಟ ಸಭೆಯಲ್ಲಿ ಮಂಡಿಸುತ್ತೇವೆ. ಸುಗ್ರೀವಾಜ್ಞೆ ಮೂಲಕ ಕಾನೂನು ತರುತ್ತೇವೆ ಎಂದು ಗೃಹಸ್ವಾಜಿ ಪರಮೇಶ್ವರ್ ಹಾಗೂ ಕಾನೂನು ಸಚಿವ ಹೆಚ್ ಕೆ ಪಾಟೀಲ್ ತಿಳಿಸಿದರು.ಕೆಲವು ವಿಷಯಗಳು ಸಿಎಂ ಜೊತೆಗೆ ಚರ್ಚಿಸಬೇಕಿದೆ ಎಂದು ಸಂಜೆ ಮಾತನಾಡುತ್ತೇವೆ ಸುಗ್ರೀವಾಜ್ಞೆ ಜಾರಿ ಸಂಬಂಧ ಅಂತಿಮ ನಿರ್ಣಯಕ್ಕೆ ನಾವು ಬಂದಿದ್ದೇವೆ ಎಂದು ತಿಳಿಸಿದರು.