ಬೆಂಗಳೂರು: ರಾಜ್ಯ ಸರ್ಕಾರ ನಡೆಸುತ್ತಿರುವ ʻಮಧ್ಯಾಹ್ನದ ಬಿಸಿಯೂಟ ಯೋಜನೆʼಯಡಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಮುಖ್ಯ ಅಡುಗೆ ತಯಾಕರು ಮತ್ತು ಅಡುಗೆ ತಯಾರಕರು ಕನಿಷ್ಠ ವೇತನ ಕಾಯ್ದೆಯಡಿ ವೇತನ ಪಡೆಯಲು ಅರ್ಹರಲ್ಲ ಎಂದು ಹೈಕೋರ್ಟ್ ಆದೇಶಿಸಿದೆ.

ಬಿಸಿಯೂಟ ತಯಾರಿಸುವ ಮುಖ್ಯ ಅಡುಗೆ ತಯಾಕರು ಮತ್ತು ಅಡುಗೆ ಸಹಾಯಕರಿಗೆ ಕನಿಷ್ಠ ವೇತನ ಕಾಯ್ದೆ-1948ರ ಅಡಿ ಸೂಕ್ತ ವೇತನ ನಿಗದಿಪಡಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಸಾಮಾಜಿಕ ಕಾರ್ಯಕರ್ತ ಎಂ.ಎಸ್. ನೌಹೇರಾ ಶೇಖ್ ಸಲ್ಲಿಸಿದ್ದ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿ ಈ ಆದೇಶ ನೀಡಿದೆ.

ಕನಿಷ್ಠ ವೇತನ ಕಾಯ್ದೆಯಲ್ಲಿ ಉಲ್ಲೇಖಿಸಲಾಗಿರುವ ಅಧಿಸೂಚಿತ ಉದ್ಯೋಗಗಳಿಗೆ ಮಾತ್ರ ಕಾಯ್ದೆಯ ನಿಯಮಗಳು ಅನ್ವಯಿಸುತ್ತವೆ ಎನ್ನಲಾಗಿದ್ದು, ಬಿಸಿಯೂಟ ಯೋಜನೆಯಡಿ ದಿನಕ್ಕೆ 4 ಗಂಟೆಯಷ್ಟು ಸೀಮಿತ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಉದ್ಯೋಗ ಮಾಡುತ್ತಿರುವ ಮುಖ್ಯ ಅಡುಗೆ ತಯಾರಕರು ಮತ್ತು ಅಡುಗೆ ತಯಾರಕರಿಗೆ ಕನಿಷ್ಠ ವೇತನ ಕಾಯ್ದೆಯ ನಿಯಮಗಳು ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಕರ್ನಾಟಕ ಕನಿಷ್ಠ ವೇತನ ನಿಯಮಗಳು-1958ರ ಪ್ರಕಾರ, ದಿನದ ಕೆಲಸದ ಅವಧಿ 9 ಗಂಟೆಯಾಗಿರಬೇಕು. ಈ ಮಾನದಂಡ ಮುಖ್ಯ ಅಡುಗೆ ತಯಾರಕರು ಮತ್ತು ಅಡುಗೆ ತಯಾರಕರ ವಿಚಾರದಲ್ಲಿ ಪಾಲನೆಯಾಗಿಲ್ಲ. ಹೀಗಾಗಿ, ಅವರಿಗೆ ಕನಿಷ್ಠ ವೇತನ ನೀಡಬೇಕೆಂಬ ವಿಚಾರವು ಕಾಯ್ದೆಯ ನಿಮಗಳ ವ್ಯಾಪ್ತಿಗೆ ಬರುವುದಿಲ್ಲ ಎಂದು ಆದೇಶದಲ್ಲಿ ತಿಳಿಸಿದೆ.

ಶಿವಮೊಗ್ಗ: ಇಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಕಾರು-ಟ್ರಕ್ ನಡುವೆ ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರ ದುರ್ಮರಣ

Big news:‌ ಅಮೇರಿಕಾದಲ್ಲಿ ನೆಲೆಸಲು ಪ್ಲ್ಯಾನ್:‌ ಗ್ರೀನ್ ಕಾರ್ಡ್‌ಗಾಗಿ ಅರ್ಜಿ ಸಲ್ಲಿಸಿದ ಲಂಕಾ ಮಾಜಿ ಅಧ್ಯಕ್ಷ ʻಗೊಟಬಯ ರಾಜಪಕ್ಸೆʼ; ವರದಿ

Share.
Exit mobile version