Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಆಶಾವಾದ ಮತ್ತು ನವಚೇತನದ ಸಂಕೇತ ಈ ಪವಿತ್ರ ದಿನ’:ದೇಶದ ಜನತೆಗೆ ‘ಈಸ್ಟರ್’ ಹಬ್ಬದ ಶುಭಾಶಯ ಕೋರಿದ ಪ್ರಧಾನಿ ಮೋದಿ !

05/04/2026 6:05 PM

ನಿರುದ್ಯೋಗಿಗಳಿಗೆ ಬಂಪರ್ ಅವಕಾಶ: ‘ಇ-ಕಾರ್ಟ್ ಫ್ರಾಂಚೈಸಿ’ ತೆರೆಯಿರಿ, ತಿಂಗಳಿಗೆ ಲಕ್ಷ ಲಕ್ಷ ಗಳಿಸಿ

05/04/2026 6:02 PM

Watch Video: ಪೆಟ್ರೋಲ್ ಬದಲು ನೀರು ಹಾಕಿದ ಬಂಕ್ ಸಿಬ್ಬಂದಿ: ಕೆಟ್ಟುನಿಂತ 25 ವಾಹನಗಳು, ವೀಡಿಯೋ ವೈರಲ್

05/04/2026 5:43 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಂಡ್ಯದ ಮದ್ದೂರಿನ ಗೊರವನಹಳ್ಳಿ ಗ್ರಾಮದಲ್ಲಿ ಲಘು ಲಾಠಿಚಾರ್ಜ್, ಉದ್ವಿಗ್ನ ವಾತಾವರಣ
KARNATAKA

ಮಂಡ್ಯದ ಮದ್ದೂರಿನ ಗೊರವನಹಳ್ಳಿ ಗ್ರಾಮದಲ್ಲಿ ಲಘು ಲಾಠಿಚಾರ್ಜ್, ಉದ್ವಿಗ್ನ ವಾತಾವರಣ

By kannadanewsnow0914/03/2026 8:57 PM

ಮಂಡ್ಯ : ತೀವ್ರ ವಿರೋಧದ ನಡುವೆಯೂ ಗ್ರಾಮ ಪಂಚಾಯಿತಿಯ ಕಡತಗಳ ವಿಲೇವಾರಿ ಖಂಡಿಸಿದ ಪ್ರತಿಭಟನಾಕಾರರ ಮೇಲೆ ಪೋಲೀಸರು ಲಘು ಲಾಠಿ ಚಾರ್ಜ್ ನಡೆಸಿರುವ ಘಟನೆ ಮದ್ದೂರು ತಾಲೂಕಿನ ಗೊರವನಹಳ್ಳಿ ಗ್ರಾಮದಲ್ಲಿ ಶನಿವಾರ ಸಂಜೆ ನಡೆದಿದೆ.

ಲಾಠಿಚಾರ್ಜ್ ವೇಳೆ ನಾಲ್ಕೈದು ಮಂದಿಗೆ ಗಾಯಗಳಾಗಿದ್ದು, ಮದ್ದೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಘಟನೆಯಿಂದ ರೊಚ್ಚಿಗೆದ್ದ ಪ್ರತಿಭಟನಾಕಾರರು ಮದ್ದೂರು – ತುಮಕೂರು ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ.

ಘಟನೆ ವಿವರ

ಮದ್ದೂರು ನಗರಸಭೆಗೆ ಗೊರವನಹಳ್ಳಿ ಗ್ರಾಮ ಪಂಚಾಯಿತಿಯನ್ನು ಸೇರ್ಪಡೆ ಖಂಡಿಸಿ ಪಂಚಾಯಿತಿ ಕಛೇರಿ ಮುಂದೆ ಕಳೆದ 66 ದಿನಗಳಿಂದ ನಡೆಯುತ್ತಿದ್ದ ಪ್ರತಿಭಟನೆಯ ನಡುವೆಯೂ ಗ್ರಾಮ ಪಂಚಾಯಿತಿಯಿಂದ ತಾಲೂಕು ಪಂಚಾಯತಿ ಕಾರ್ಯ ನಿರ್ವಹಣಾಧಿಕಾರಿ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಶನಿವಾರ ಕಡತಗಳ ರವಾನೆ ಮಾಡುತ್ತಿದ್ದ ಅಧಿಕಾರಿಗಳನ್ನು ಪ್ರತಿಭಟನಾಕಾರರು ತಡೆದಿದ್ದಾರೆ. ಈ ವೇಳೆ ಪ್ರತಿಭಟನಾಕಾರರ ಮೇಲೆ ಪೋಲೀಸರಿಂದ ಲಘು ಲಾಠಿ ಚಾರ್ಜ್ ನಡೆಸಿದ್ದಾರೆ.

ಇನ್ನು ಕೆಲ ಪ್ರತಿಭಟನಾಕಾರರನ್ನ ಪೋಲೀಸರು ವಶಕ್ಕೆ ತೆಗೆದುಕೊಂಡಿದ್ದು, ಗೊರವನಹಳ್ಳಿ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಗ್ರಾಮದಲ್ಲಿ ಬಿಗಿ ಪೋಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಇನ್ನು ಲಾಠಿಚಾರ್ಜ್ ವೇಳೆ ಗಾಯಗೊಂಡವರನ್ನು ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಮದ್ದೂರು ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಅಸ್ವಸ್ಥಗೊಂಡ ಮಹಿಳೆಯರ ಆರೋಗ್ಯ ವಿಚಾರಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ನಗರಸಭೆ ಸೇರ್ಪಡೆ ವಿರೋಧಿಸಿ ಗ್ರಾಮಸ್ಥರು ಶಾಂತಿಯುತ ಪ್ರತಿಭಟನೆ ಮಾಡ್ತಿದ್ದಾರೆ. ಈ ವೇಳೆ ಏಕಾಏಕಿ ಗ್ರಾಮ ಪಂಚಾಯಿತಿ ಕಡತಗಳನ್ನು ರವಾನೆ ಮಾಡಲು ಯತ್ನಿಸಿದ್ದಾರೆ. ಇದಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಷ್ಟೊಂದು ಪೊಲೀಸರು ಕರೆದುಕೊಂಡು ಹೋಗಿ ಈ ರೀತಿ ಮಾಡೋದು ಸರಿಯಲ್ಲ. ಕೋರ್ಟ್ ನಲ್ಲಿ ಈ ಪ್ರಕರಣ ಇದೆ. ಈ ಸಂದರ್ಭದಲ್ಲಿ ಈ ರೀತಿಯ ವರ್ತನೆ ಸರಿಯಲ್ಲ. ಕೋರ್ಟ್ ತೀರ್ಮಾನ ಬರುವವರೆಗೂ ಕಾಯೋದಕ್ಕೇ ಏನಾಗಿತ್ತು. ಅಧಿಕಾರಿಗಳು ಶಾಂತಿ ಕಾಪಾಡುವ ಕೆಲಸ ಮಾಡಿ ಬೆಂಕಿ ಹಚ್ಚುವ ಪ್ರಯತ್ನ ಕೆಲಸ ಮಾಡಬೇಡಿ ಎಂದು ಅಧಿಕಾರಿಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಇನ್ನು ಪ್ರತಿಭಟನಾಕಾರರು ಮದ್ದೂರು – ತುಮಕೂರು ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ಡಿ.ಸಿ.ತಮ್ಮಣ್ಣ ಮತ್ತು ಬಿಜೆಪಿ ಮುಖಂಡ ಎಸ್.ಪಿ.ಸ್ವಾಮಿ ಭೇಟಿ ನೀಡಿ ಬೆಂಬಲ ವ್ಯಕ್ತಪಡಿಸಿದ್ದಾರೆ.

ಇನ್ನು ಸ್ಥಳದಲ್ಲೆ ಅಡಿಷನಲ್ ಎಸ್ಪಿ ತಿಮ್ಮಯ್ಯ, ಗಂಗಾಧರ್ ಸ್ವಾಮಿ, ಡಿವೈಎಸ್ಪಿ ಯಶವಂತ್ ಕುಮಾರ್, ಸಿಪಿಐಗಳಾದ ನವೀನ್, ನಾರಾಯಿಣಿ ಹಾಗೂ 100 ಕ್ಕೂ ಹೆಚ್ಚು ಪೋಲೀಸ್ ಸಿಬ್ಬಂದಿ ಬಂದೋಬಸ್ತ್ ಕೈಗೊಳ್ಳಲಾಗಿದೆ

ಇನ್ನು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ವರದಿ : ಗಿರೀಶ್ ರಾಜ್, ಮಂಡ್ಯ

JOB ALERT: ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ; ರಾಜ್ಯ ಪೊಲೀಸ್ ಇಲಾಖೆಯ 5,764 ಕಾನ್ ಸ್ಟೇಬಲ್ ಹುದ್ದೆ ಭರ್ತಿಗೆ ಚಾಲನೆ

ಮೊಸರು ಬೇಗನೆ ಹಾಳಾಗುತ್ತದೆಯೇ? ಹೀಗೆ ಸಂಗ್ರಹಿಸಿದರೆ, ಒಂದು ವಾರ ತಾಜಾವಾಗಿರುತ್ತದೆ!

Share. Facebook Twitter LinkedIn WhatsApp Email

Related Posts

ನಿರುದ್ಯೋಗಿಗಳಿಗೆ ಬಂಪರ್ ಅವಕಾಶ: ‘ಇ-ಕಾರ್ಟ್ ಫ್ರಾಂಚೈಸಿ’ ತೆರೆಯಿರಿ, ತಿಂಗಳಿಗೆ ಲಕ್ಷ ಲಕ್ಷ ಗಳಿಸಿ

05/04/2026 6:02 PM2 Mins Read

ರಾಜ್ಯ ಸರ್ಕಾರದ ಖಜಾನೆಯಲ್ಲಿ ಏನೂ ಇಲ್ಲ; ಸಾಹುಕಾರನ ಧಿಮಾಕು ಸಾಲಗಾರರು ಬಂದಾಗ ಗೊತ್ತೆ- ಬೊಮ್ಮಾಯಿ

05/04/2026 5:25 PM3 Mins Read

ರಾಜ್ಯದಲ್ಲಿ ಮಹಿಳೆಯರು ಸುರಕ್ಷಿತವಾಗಿಲ್ಲ: ಸಂಸದ ಬಸವರಾಜ ಬೊಮ್ಮಾಯಿ

05/04/2026 5:19 PM3 Mins Read
Recent News

‘ಆಶಾವಾದ ಮತ್ತು ನವಚೇತನದ ಸಂಕೇತ ಈ ಪವಿತ್ರ ದಿನ’:ದೇಶದ ಜನತೆಗೆ ‘ಈಸ್ಟರ್’ ಹಬ್ಬದ ಶುಭಾಶಯ ಕೋರಿದ ಪ್ರಧಾನಿ ಮೋದಿ !

05/04/2026 6:05 PM

ನಿರುದ್ಯೋಗಿಗಳಿಗೆ ಬಂಪರ್ ಅವಕಾಶ: ‘ಇ-ಕಾರ್ಟ್ ಫ್ರಾಂಚೈಸಿ’ ತೆರೆಯಿರಿ, ತಿಂಗಳಿಗೆ ಲಕ್ಷ ಲಕ್ಷ ಗಳಿಸಿ

05/04/2026 6:02 PM

Watch Video: ಪೆಟ್ರೋಲ್ ಬದಲು ನೀರು ಹಾಕಿದ ಬಂಕ್ ಸಿಬ್ಬಂದಿ: ಕೆಟ್ಟುನಿಂತ 25 ವಾಹನಗಳು, ವೀಡಿಯೋ ವೈರಲ್

05/04/2026 5:43 PM

ರೈತರಿಗೆ ಪಿಎಂ ಕಿಸಾನ್‌ 23ನೇ ಕಂತಿನ ಹಣ ಬಿಡುಗಡೆ ಕುರಿತು ಬಿಗ್‌ ಅಪ್‌ಡೇಟ್‌ | PM-Kisan Scheme

05/04/2026 5:34 PM
State News
BUSINESS

ನಿರುದ್ಯೋಗಿಗಳಿಗೆ ಬಂಪರ್ ಅವಕಾಶ: ‘ಇ-ಕಾರ್ಟ್ ಫ್ರಾಂಚೈಸಿ’ ತೆರೆಯಿರಿ, ತಿಂಗಳಿಗೆ ಲಕ್ಷ ಲಕ್ಷ ಗಳಿಸಿ

By kannadanewsnow0905/04/2026 6:02 PM BUSINESS 2 Mins Read

ಇಂದಿನ ಡಿಜಿಟಲ್ ಯುಗದಲ್ಲಿ ಆನ್‌ಲೈನ್ ಶಾಪಿಂಗ್ ಕ್ರೇಜ್ ಎಷ್ಟಿದೆ ಎಂಬುದು ನಮಗೆಲ್ಲರಿಗೂ ತಿಳಿದಿದೆ. ಫ್ಲಿಪ್‌ಕಾರ್ಟ್ (Flipkart) ಮತ್ತು ಮಿಂತ್ರಾ (Myntra)…

ರಾಜ್ಯ ಸರ್ಕಾರದ ಖಜಾನೆಯಲ್ಲಿ ಏನೂ ಇಲ್ಲ; ಸಾಹುಕಾರನ ಧಿಮಾಕು ಸಾಲಗಾರರು ಬಂದಾಗ ಗೊತ್ತೆ- ಬೊಮ್ಮಾಯಿ

05/04/2026 5:25 PM

ರಾಜ್ಯದಲ್ಲಿ ಮಹಿಳೆಯರು ಸುರಕ್ಷಿತವಾಗಿಲ್ಲ: ಸಂಸದ ಬಸವರಾಜ ಬೊಮ್ಮಾಯಿ

05/04/2026 5:19 PM

SHOCKING : ರಾಜ್ಯದಲ್ಲಿ ಘೋರ ಕೃತ್ಯ : ತಂಗಿಯನ್ನು ಮದುವೆಯಾದ 40 ವರ್ಷದ ವರನ ತಾಯಿಗೆ, ಬೆಂಕಿ ಹಚ್ಚಿ ಕೊಂದ ಅಣ್ಣ!

05/04/2026 5:02 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.