ಮಂಡ್ಯ : ಶಿಂಷಾ ನದಿ ಪಾತ್ರದಲ್ಲಿ 144 ಸೆಕ್ಷನ್ ಜಾರಿಯಲ್ಲಿದ್ದರು ಸಹ ಅಕ್ರಮವಾಗಿ ಮರಳು ಗಣಿಗಾರಿಕೆ ಮಾಡುತ್ತಿದ್ದ ವೇಳೆ ದಾಳಿ ಮಾಡಿರುವ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು 15 ಟನ್ ಮರಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಮದ್ದೂರು ತಾಲ್ಲೂಕಿನ ಅಜ್ಜಹಳ್ಳಿ ಗ್ರಾಮದ ಶಿಂಷಾ ನದಿ ಪಾತ್ರದಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಬುಧವಾರ ದಾಳಿ ಮಾಡಿದ ಅಧಿಕಾರಿಗಳು ಅಂದಾಜು 15 ಟನ್ ಮರಳು ಹಾಗೂ ಕೊಪ್ಪರಿಕೆಗಳನ್ನು ವಶಪಡಿಸಿಕೊಂಡಿದ್ದಾರೆ.
ಅಧಿಕಾರಿಗಳ ದಾಳಿಗೆ ಬೆಚ್ಚಿದ ಮರಳು ದಂಧೆಕೋರರು ತುಂಬಿ ಹರಿಯುತ್ತಿರುವ ನದಿಯಲ್ಲೆ ಪರಾರಿಯಾಗಿದ್ದಾರೆ. ಈಗಾಗಲೇ ಇದೇ ವ್ಯಾಪ್ತಿಯಲ್ಲಿ ಅಕ್ರಮ ಮರಳುಗಾರಿಕೆ ಸಂಬಂಧ 2 ಪ್ರಕರಣಗಳನ್ನು ದಾಖಲಿಸಿದ್ದರೂ ಸಹ ಅಕ್ರಮ ಮರಳು ಗಣಿಗಾರಿಕೆ ದಂಧೆ ಮುಂದುವರಿಯುತ್ತಿದ್ದು, ಅಕ್ರಮ ಮರಳು ಗಣಿಗಾರಿಕೆ ನಡೆಸುತ್ತಿರುವವರ ವಿರುದ್ಧ ಮದ್ದೂರು ನ್ಯಾಯಾಲಯದಲ್ಲಿ ದೂರು ದಾಖಲಿಸುವುದಾಗಿ ಭೂ ವಿಜ್ಞಾನಿ ಮಹೇಶ್ ರವರು ಎಚ್ಚರಿಕೆ ನೀಡಿದರು.
ಇನ್ನು ಕಳೆದ ತಿಂಗಳು ಅಜ್ಜಹಳ್ಳಿ ಗ್ರಾಮದ ಸ್ಥಳೀಯರು ರಾತ್ರಿ ವೇಳೆ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಟಿಪ್ಪರ್ ವಾಹನವನ್ನು ತಡೆದು ಪೊಲೀಸ್ ಇಲಾಖೆಯ (112) ವಶಕ್ಕೆ ನೀಡಿದ್ದರೂ ಸಹ ಪೊಲೀಸ್ ಅಧಿಕಾರಿಗಳು ವಾಹನದ ವಿರುದ್ಧ ಯಾವುದೇ ಕಾನೂನು ಕ್ರಮ ಕೈಗೊಳ್ಳದೆ ವಾಹನವನ್ನು ಬಿಡುಗಡೆ ಮಾಡಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ ಎಂದು ಭೂ ವಿಜ್ಞಾನಿ ಮಹೇಶ್ ಗಂಭೀರ ಆರೋಪ ಮಾಡಿದರು.
ದಾಳಿ ವೇಳೆ ಗ್ರಾಮ ಆಡಳಿತಾಧಿಕಾರಿಯಾದ ಮಮತಾ ಮತ್ತಿತರರು ಇದ್ದರು.
ವರದಿ : ಗಿರೀಶ್ ರಾಜ್, ಮಂಡ್ಯ
ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್: ಈ ಮಾರ್ಗದಲ್ಲಿ ವಿಶೇಷ ರೈಲುಗಳ ಸಂಚಾರದ ವ್ಯವಸ್ಥೆ
ಹೀಗಿದೆ ಇಂದಿನ ಸಿಎಂ ಸಿದ್ಧರಾಮಯ್ಯ ನೇತೃತ್ವದ ‘ಸಂಪುಟ ಸಭೆ’ಯ ಪ್ರಮುಖ ಹೈಲೈಟ್ಸ್ | Karnataka Cabinet Meeting