ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ( Prime Minister Narendra Modi ) ನಾಡಪ್ರಭು ಕೆಂಪೇಗೌಡ ಕಂಚಿನ ಪ್ರತಿಮೆಯನ್ನು ಇಂದು ಲೋಕಾರ್ಪಣೆಗೊಳಿಸಿದ್ದಾರೆ. ಈ ಸಂದರ್ಭದಲ್ಲಿಯೇ ಪ್ರಧಾನಿಯೊಂದಿಗೆ ಸಿಎಂ ಬೊಮ್ಮಾಯಿ ( CM Bommai ), ಸಚಿವ ಆರ್ ಅಶೋಕ್ ( Minister R Ashok ) ಸೇರಿದಂತೆ ವಿವಿಧ ಗಣ್ಯರು ಪೋಟೋ ತೆಗೆಸಿಕೊಂಡಿದ್ದಾರೆ. ಈ ಪೋಟೋದಲ್ಲಿ ಸಚಿವ ಆರ್ ಅಶೋಕ್, ನಿರ್ಮಲಾನಂದ ಸ್ವಾಮೀಜಿ ಹೆಗಲಮೇಲೆ ಕೈಹಾಕಿ ಪೋಟೋ ತೆಗೆಸಿಕೊಂಡಿರುವುದು ಭಾರೀ ವಿವಾದಕ್ಕೆ ಕಾರಣವಾಗಿದೆ. ಅಲ್ಲದೇ ಬಿಜೆಪಿ ನಾಯಕರಿಗೆ ಕನಿಷ್ಠ ಸಂಸ್ಕಾರವೂ ಇಲ್ಲ ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ( Karnataka Congress ) ಕಿಡಿಕಾರಿದೆ.
ಈ ವಿಷಯದಲ್ಲೂ ಸುಳ್ಳಾಡುವ ‘ಜೆಡಿಎಸ್’ ತನ್ನ ಸಮಯಸಾಧಕ ಬುದ್ಧಿ ಪ್ರದರ್ಶಿಸಿದೆ – ಬಿಜೆಪಿ ಕಿಡಿ
ಈ ಕುರಿತಂತೆ ಟ್ವಿಟ್ ಮಾಡಿರುವಂತ ಕಾಂಗ್ರೆಸ್ ಪಕ್ಷ ( Congress Party ) ಸ್ವಾಮಿಜಿಗಳಿಗೆ ಅವರದ್ದೇ ಆದ ಗೌರವವಿರುತ್ತದೆ. ಘನತೆ ಇರುತ್ತದೆ. ಹೆಗಲ ಮೇಲೆ ಕೈ ಹಾಕುವಷ್ಟು ಆದಿಚುಂಚನಗಿರಿ ಶ್ರೀಗಳು ಸಚಿವ ಆರ್ ಅಶೋಕ್ ( Minister R Ashok ) ಅವರಿಗೆ ಸದರ ಎನಿಸಿದ್ದಾರೆಯೇ? ಇದೇ ರೀತಿ ಮೋದಿ ಹೆಗಲಿಗೆ ಕೈ ಹಾಕುವ ಧೈರ್ಯವಿದೆಯೇ? ಧರ್ಮ, ಸಂಸ್ಕೃತಿಯ ಬಗ್ಗೆ ಮಾತಾಡುವ ಬಿಜೆಪಿ ನಾಯಕರಿಗೆ ( BJP Leader ) ಕನಿಷ್ಠ ಸಂಸ್ಕಾರದ ಜ್ಞಾನವಿಲ್ಲ ಎಂದು ವಾಗ್ಧಾಳಿ ನಡೆಸಿದೆ.
ಸ್ವಾಮಿಜಿಗಳಿಗೆ ಅವರದ್ದೇ ಆದ ಗೌರವವಿರುತ್ತದೆ. ಘನತೆ ಇರುತ್ತದೆ.
ಹೆಗಲ ಮೇಲೆ ಕೈ ಹಾಕುವಷ್ಟು ಆದಿಚುಂಚನಗಿರಿ ಶ್ರೀಗಳು@RAshokaBJP ಅವರಿಗೆ ಸದರ ಎನಿಸಿದ್ದಾರೆಯೇ? ಇದೇ ರೀತಿ ಮೋದಿ ಹೆಗಲಿಗೆ ಕೈ ಹಾಕುವ ಧೈರ್ಯವಿದೆಯೇ?
ಧರ್ಮ, ಸಂಸ್ಕೃತಿಯ ಬಗ್ಗೆ ಮಾತಾಡುವ @BJP4Karnataka ನಾಯಕರಿಗೆ ಕನಿಷ್ಠ ಸಂಸ್ಕಾರದ ಜ್ಞಾನವಿಲ್ಲ. pic.twitter.com/28MHEiVjLF
— Karnataka Congress (@INCKarnataka) November 11, 2022
ರಾಜ್ಯದ ಮುಖ್ಯಮಂತ್ರಿ ಫೋಟೋ ತೆಗೆಸಿಕೊಳ್ಳಲೂ ಹರಸಾಹಸಪಡಬೇಕೇ? ಪ್ರಧಾನಿ ಪಕ್ಕ ಸ್ವತಂತ್ರವಾಗಿ ನಿಲ್ಲಲೂ ಬಸವರಾಜ ಬೊಮ್ಮಾಯಿ ಅವರಿಗೆ ಸಾಧ್ಯವಾಗುತ್ತಿಲ್ಲ ಎಂದರೆ ಸಿಎಂ ಹುದ್ದೆಗೆ ಆಗುತ್ತಿರುವ ಅವಮಾನವಿದು. ಜಗ್ಗೇಶ್ ಅವರ ಹಿಂದೆ ನಿಂತು ಅವರನ್ನು ತಳ್ಳಿಕೊಂಡು ಮುಖ ತೋರಿಸುವ #PuppetCM ಅವರ ಸ್ಥಿತಿ ಶೋಚನೀಯವಾಗಿದೆ ಎಂದು ವ್ಯಂಗ್ಯವಾಡಿದೆ.
ರಾಜ್ಯದ ಮುಖ್ಯಮಂತ್ರಿ ಫೋಟೋ ತೆಗೆಸಿಕೊಳ್ಳಲೂ ಹರಸಾಹಸಪಡಬೇಕೇ?
ಪ್ರಧಾನಿ ಪಕ್ಕ ಸ್ವತಂತ್ರವಾಗಿ ನಿಲ್ಲಲೂ @BSBommai ಅವರಿಗೆ ಸಾಧ್ಯವಾಗುತ್ತಿಲ್ಲ ಎಂದರೆ ಸಿಎಂ ಹುದ್ದೆಗೆ ಆಗುತ್ತಿರುವ ಅವಮಾನವಿದು.
ಜಗ್ಗೇಶ್ ಅವರ ಹಿಂದೆ ನಿಂತು ಅವರನ್ನು ತಳ್ಳಿಕೊಂಡು ಮುಖ ತೋರಿಸುವ #PuppetCM ಅವರ ಸ್ಥಿತಿ ಶೋಚನೀಯವಾಗಿದೆ!#TroubleEngineSarkara pic.twitter.com/t3hfzGP3DA
— Karnataka Congress (@INCKarnataka) November 11, 2022