ಬೆಂಗಳೂರು: ರಾಜ್ಯದಲ್ಲಿರುವ 11 ಮಹಾನಗರ ಪಾಲಿಕೆಗಳಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಮೂಲಸೌಲಭ್ಯಗಳನ್ನು ಸಮಪರ್ಕವಾಗಿ ಕೈಗೊಳ್ಳಲು ಕ್ರಮ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಬಿ.ಎಸ್. ಸುರೇಶ್ ಅವರು ತಿಳಿಸಿದರು.
ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ವಿಧಾನ ಪರಿಷತ್ ಸದಸ್ಯ ಡಿ.ಟಿ. ಶ್ರೀನಿವಾಸ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ, ಮೈಸೂರು, ಮಂಗಳೂರು, ತುಮಕೂರು, ದಾವಣಗೆರೆ, ಬಳ್ಳಾರಿ, ಕಲಬುರಗಿ, ಬೆಳಗಾವಿ, ಶಿವಮೊಗ್ಗ, ವಿಜಯಪುರ, ಹುಬ್ಬಳ್ಳಿ – ಧಾರವಾಡ ಹಾಗೂ ರಾಯಚೂರು ಜಿಲ್ಲೆಗಳ ಮಹಾನಗರ ಪಾಲಿಕೆಗಳಲ್ಲಿ ಅಭಿವೃದ್ಧಿ ಕಾರ್ಯಕ್ರಮ ಹಾಗೂ ಮೂಲಸೌಲಭ್ಯಗಳನ್ನು ಸಮರ್ಪವಾಗಿ ಕೈಗೊಳ್ಳಲಾಗಿದೆ. ಸ್ವಚ್ಚ ಭಾರತ್ ಮಿಷನ್ (ನ)2.0 ಯೋಜನೆಯು 2021 ರಿಂದ 2026ನೇ ಸಾಲಿನ ವರೆಗೆ ಜಾರಿಯಲ್ಲಿರುತ್ತದೆ. ಈ ಯೋಜನೆಯಡಿ ಮಹಾನಗರ ಪಾಲಿಕೆಗಳಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಾಣ, ಘನ ತ್ಯಾಜ್ಯ ನಿರ್ವಹಣೆ, ಪಾರಂಪರಿಕ ತಾಜ್ಯ ನಿರ್ವಹಣೆ, ತ್ಯಾಜ್ಯ ನಿರ್ವಹಣೆ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲು ಐ.ಇ.ಸಿ ಚಟುವಟಿಕೆಗಳು ಮತ್ತು ಸಾಮರ್ಥ್ಯಾಭಿವೃದ್ಧಿ ಅಡಿ ವಿವಿಧ ಹಿತಾಸಕ್ತಿದಾರರಿಗೆ ತರಬೇತಿ, ಕಾರ್ಯಾಗಾರಗಳನ್ನು ಕೈಗೊಳ್ಳಲು ಕ್ರಮ ವಹಿಸಲಾಗಿದೆ.
ಎಸ್.ಎಫ್.ಸಿ ಯೋಜನೆಯಡಿ ರಾಜ್ಯದ ಮಹಾನಗರ ಪಾಲಿಕೆಗಳಲ್ಲಿ 2024-25ನೇ ಸಾಲಿನ ಎಸ್.ಎಫ್.ಸಿ ಮುಕ್ತನಿಧಿ ಹಾಗೂ ಎಸ್.ಎಫ್.ಸಿ ಕುಡಿಯುವ ನೀರು ಯೋಜನೆಗಳಡಿಯಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಳ್ಳಲು ಸರ್ಕಾರವು ಅನುದಾನವನ್ನು ಹಂಚಿಕೆ ಮಾಡಿ ಬಿಡುಗಡೆಗೊಳಿಸಿರುತ್ತದೆ. ಅದೇ ರೀತಿ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆ (ಹಂತ-2)ರಡಿ ರಾಜ್ಯದಲ್ಲಿನ 10 ಮಹಾನಗರ ಪಾಲಿಕೆಗಳಾದ ಮೈಸೂರು, ಮಂಗಳೂರು ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಲಬುರಗಿ, ಬಳ್ಳಾರಿ, ದಾವಣಗೆರ, ಶಿವಮೊಗ್ಗ, ವಿಜಯಪುರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಅಂದಾಜು ಮೊತ್ತ ರೂ. 2000.00 ಕೋಟಿಗಳಲ್ಲಿ 2024-25ನೇ ಸಾಲಿನಂದ 2026-27ನೇ ಸಾಲಿನ ವರೆಗೆ ಮೂರು ವರ್ಷಗಳ ಅವಧಿಯಲ್ಲಿ ಪೌರಾಡಳಿತ ನಿರ್ದೇಶನಾಲಯದಿಂದ ರಾಜ್ಯ ಮಟ್ಟದಲ್ಲಿ ಟೆಂಡರ್ ಕರೆದು ಅನುಷ್ಠಾನಗೊಳಿಸಲು ಮಾರ್ಗಸೂಚಿಗಳನ್ನು ಹೊರಡಿಸಲಾಗಿರುತ್ತದೆ. ವಿವಿಧ ಮೂಲಭೂತ ಸೌಕರ್ಯ ಅಭಿವೃದ್ಧಿ ಕಾಮಗಾರಿಗಳಾದ ರಸ್ತೆ, ಚರಂಡಿ, ಮಳೆ ನೀರು ಚರಂಡಿ, ಪಾದಚಾರಿ ಮಾರ್ಗ ಅಭಿವೃದ್ಧಿ, ಕುಡಿಯುವ ನೀರಿನ ಕಾಮಗಾರಿ, ಜಂಕ್ಷನ್ ಅಭಿವೃದ್ಧಿ ಹಾಗೂ ಇತರ ಕಾಮಗಾರಿಗಳನ್ನು ಕೈಗೊಳ್ಳಬಹುದಾಗಿದೆ. ಪ್ರಸ್ತುತ 5 ಮಹನಗರ ಪಾಲಿಕೆಗಳಾದ ದಾವಣಗೆರೆ, ಶಿವಮೊಗ್ಗ, ಬೆಳಗಾವಿ ಬಳ್ಳಾರಿ ಮತ್ತು ವಿಜಯಪುರ ಜಿಲ್ಲೆಗಳ ಕ್ರಿಯಾ ಯೋಜನೆ ಅನುಮೋದನೆಯಾಗಿದ್ದು, ಆದೇಶ ಹೊರಡಿಸಲಾಗಿರುತ್ತದೆ. ಬಾಕಿ ಉಳಿದಿರುವ ಹುಬ್ಬಳ್ಳಿ-ಧಾರವಾಡ, ದಾವಣಗೆರೆ ಶಿವಮೊಗ್ಗ, ಮೈಸೂರು, ಮಂಗಳೂರು ತುಮಕೂರು ಮತ್ತು ಕಲಬುರಗಿ ಜಿಲ್ಲೆಗಳ ಮಹಾನಗರ ಪಾಲಿಕೆಗಳ ಕ್ರಿಯಾ ಯೋಜನೆಯ ಪ್ರಸ್ತಾವನೆಗಳಿಗೆ ರಾಜ್ಯಮಟ್ಟದ ಸಮಿತಿಯಲ್ಲಿ ಮಂಡಿಸಿ ಅನುಮೋದನೆ ಪಡೆಯಲಾಗಿದ್ದು, ಸರ್ಕಾರದ ಆದೇಶ ಹೊರಡಿಸಲು ಕ್ರಮ ವಹಿಸಲಾಗುವುದು.
ಅಮೃತ್ 2.0 ಕೇಂದ್ರ ಪುರಸ್ಕøತ ಯೋಜನೆಯಡಿ, 2024-25ನೇ ಸಾಲಿನಲ್ಲಿ 11 ಮಹಾನಗರ ಪಾಲಿಕೆಗೆ ಮತ್ತು 78 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಜಲ ಮೂಲಗಳ ಪುನಃಶ್ಚೇತನ ಮತ್ತು ಹಸಿರು ಜಾಗ ಹಾಗೂ ಉದ್ಯಾನವನ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ತನ್ನ ಪಾಲಿನ ಮೊತ್ತ ರೂ 248.29 ಕೋಟಿ ಅನುದಾನದಿಂದ ಮೊದಲನೇಯ ಕಂತಿನ ಅನುದಾನ ರೂ 49.66 ಕೋಟಿಗಳನ್ನು ಬಿಡುಗಡೆಗೊಳಿಸಿದೆ. 15ನೇ ಹಣಕಾಸು ಆಯೋಗದ 2024-25ನೇ ಸಾಲಿನ ಅನುದಾನವು ಕೇಂದ್ರ ಸರ್ಕಾರದಿಂದ ಬಿಡುಗಡೆಯಾಗಿರುವುದಿಲ್ಲ. ಸ್ವಚ್ಚ ಭಾರತ್ ಮಿಷನ್ (ನ)2.0 ಅಡಿ ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಿಗೆ ಇಲ್ಲಿಯ ವರೆಗೆ ಕೇಂದ್ರ ಸರ್ಕಾರದ ಪಾಲು ರೂ. 219.73 ಕೋಟಿಗಳನ್ನು ಬಿಡುಗಡೆ ಮಾಡಿದೆ.
2024-25ನೇ ಸಾಲಿನಲ್ಲಿ ಸ್ವಚ್ಚ ಭಾರತ್ ಮಿಷನ್ 2.0 ಅಡಿ ಕೇಂದ್ರ ಸರ್ಕಾರದಿಂದ ರೂ 219.73 ಕೋಟಿಗಳು ಮತ್ತು ರಾಜ್ಯ ಸರ್ಕಾರದಿಂದ ರೂ 146.48 ಕೋಟಿಗಳು ಸೇರಿ ಒಟ್ಟು ರೂ 366.21 ಕೋಟಿಗಳನ್ನು ಯೋಜನೆಯ ಅನುಷ್ಠಾನಕ್ಕೆ ಎಲ್ಲಾ ನಗರ ಸಂಸ್ಥೆಗಳಿಗೆ ಬಿಡುಗಡೆ ಮಾಡಲಾಗಿರುತ್ತದೆ. ಅಮೃತ್ 2.0 ಯೋಜನೆಯಡಿ ದಾವಣಗೆರೆ ಮಹಾನಗರಪಾಲಿಕೆಗೆ ಜಲ ಮೂಲಗಳ ಪುನಃಶ್ಚೇತನಕ್ಕಾಗಿ ಮತ್ತು ಹಸಿರು ಜಾಗ ಹಾಗೂ ಉದ್ಯಾನವನ ಅಭಿವೃದ್ಧಿಗಾಗಿ ರೂ 13.00 ಕೋಟಿ ಅನುದಾನ ಮಂಜೂರಾಗಿರುತ್ತದೆ. ಕಾಮಗಾರಿಗಳಿಗೆ ಸಂಬಂಧಿಸಿದಂತೆ ಕ್ರಿಯಾ ಯೋಜನೆ ತಯಾರಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅನುಮೋದನೆ ಪಡೆಯಲಾಗಿದ್ದು, ವಿಸ್ತøತ ಯೋಜನಾ ವರದಿ ತಯಾರಿಸುವ ಹಂತದಲ್ಲಿರುತ್ತದೆ.
ದಾವಣಗೆರೆ ಜಿಲ್ಲೆಗೆ 15ನೇ ಹಣಕಾಸು ಆಯೋಗದ ಅನುದಾನದಡಿ 2024-25 ನೇ ಸಾಲಿನಲ್ಲಿ ಎಸ್.ಎಫ್.ಸಿ ಯೋಜನೆಯಡಿ 2024-25ನೇ ಸಾಲಿನಲ್ಲಿ ಮೂಲಭೂತ ಸೌಕರ್ಯಗಳಿಗಾಗಿ ರೂ. 28.77 ಕೋಟಿ ಅನುದಾನ ಹಂಚಿಕೆಯಾಗಿದೆ. ಸ್ವಚ್ಚಭಾರತ್ ಮಿಷನ್ (ನ)2.0 ಅಡಿ ರೂ 701.93 ಲಕ್ಷಗಳು ಬಿಡುಗಡೆಯಾಗಿದ್ದು, ಅನುದಾನ ವೆಚ್ಚವಾಗಿರುವುದಿಲ್ಲ. ಎಸ್.ಎಫ್.ಸಿ ಯೋಜನೆಯ ಎಸ್.ಎಫ್.ಸಿ ಮುಕ್ತನಿಧಿ ಯೋಜನೆಯಡಿ ರೂ 1008.00 ಲಕ್ಷ ಹಂಚಿಕೆಯಾಗಿದ್ದು, 829.20 ಲಕ್ಷ ಬಿಡುಗಡೆಯಾಗಿದೆ ಇದರಲ್ಲಿ ರೂ. 407.70 ಲಕ್ಷ ವೆಚ್ಚವಾಗಿರುತ್ತದೆ, ಎಸ್.ಎಫ್.ಸಿ. ಕುಡಿಯುವ ನೀರು ಯೋಜನೆಯಡಿ ರೂ. 10.00 ಲಕ್ಷ ಹಂಚಿಕೆಯಾಗಿದ್ದು, ರೂ 7.50 ಲಕ್ಷ ಅನುದಾನ ಬಿಡುಗಡೆಯಾಗಿದ್ದು, ಯಾವುದೇ ವೆಚ್ಚವಾಗಿರುವುದಿಲ್ಲ. 2024ನೇ ಅಕ್ಟೋಬರ್ 18ರ ಆದೇಶದಂತೆ ದಾವಣಗೆರೆ ಮಹಾನಗರ ಪಾಲಿಕೆಗೆ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆ ಹಂತ – 2 ರಡಿಯಲ್ಲಿ ರೂ 127.50 ಕೋಟಿಗಳ ಅನುದಾನವನ್ನು ಹಂಚಿಕೆ ಮಾಡಲಾಗಿದೆ ಎಂದು ತಿಳಿಸಿದರು.
BIG NEWS: ನೇಕಾರರ ಆತ್ಮಹತ್ಯೆಗೆ ‘5 ಲಕ್ಷ’ ಪರಿಹಾರ: ಸಚಿವ ಶಿವಾನಂದ ಪಾಟೀಲ ಭರವಸೆ
ರಾಜ್ಯದ ‘ರೈತ’ರಿಗೆ ಸಚಿವ ಕೆ.ಎನ್ ರಾಜಣ್ಣ ಗುಡ್ ನ್ಯೂಸ್: ‘DCC ಬ್ಯಾಂಕ್’ ಮೂಲಕ ‘ಸಾಲ ಸೌಲಭ್ಯ’