ಬೆಂಗಳೂರು: ನಿನ್ನೆ ಬೆಂಗಳೂರಿನ ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣದ ಹಿಂದೆ ಬಿಜೆಪಿಯವರ ಕೈವಾಡವಿದೆ ಎಂಬುದಾಗಿ ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.
ಈ ಕುರಿತಂತೆ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು ಈ ಹಿಂದೆಯೂ ಹಲವು ಬಾರಿ ನಡೆದಂತ ಪ್ರಕರಣಗಳಲ್ಲಿ ಬಿಜೆಪಿಯವರ ಕೈವಾಡವಿತ್ತು. ನಿನ್ನೆ ರಾಮೇಶ್ವರಂ ಕೆಫೆಯಲ್ಲಿ ನಡೆದಂತ ಬಾಂಬ್ ಬ್ಲಾಸ್ಟ್ ಪ್ರಕರಣದ ಹಿಂದೆ ಬಿಜೆಪಿಯವರ ಕೈವಾಡ ಇರೋದಾಗಿ ಶಂಕೆ ವ್ಯಕ್ತವಾಗಿದೆ ಎಂದರು.
ರಾಮೇಶ್ವರಂ ಕೆಫೆ ಬ್ಲಾಸ್ಟ್ ಬ್ಯುಸಿನೆಸ್ ವೈಷಮ್ಯದಿಂದಲೂ ನಡೆದಿರೋದು ಮೇಲ್ ನೋಟಕ್ಕೆ ಕಂಡು ಬರುತ್ತಿದೆ. ಅವರ ಹೋಟೆಲ್ ಬ್ಯುಸಿನೆಸ್ ಚೆನ್ನಾಗಿ ನಡೆಯುತ್ತಿದೆ. ಬೆಂಗಳೂರಿನ ಹಲವೆಡೆ ಅವರ ಕೆಫೆಗಳಿದ್ದಾವೆ ಎಂದು ಹೇಳಿದರು.
ರಾಮೇಶ್ವರಂ ಕೆಫೆ ಸ್ಪೋಟಕದಂತೆ ಇಂತಹ ಹಲವು ಘಟನೆಗಳಲ್ಲಿ ಬಿಜೆಪಿಯವರ ಕೈವಾಡವಿದೆ. ಆದರೇ ನಾನು ಅವರೇ ಮಾಡಿದ್ದಾರೆ ಎಂದು ಹೇಳುತ್ತಿಲ್ಲ. ಇರಬಹುದು ಎಂಬ ಶಂಕೆಯನ್ನು ವ್ಯಕ್ತಪಡಿಸುತ್ತಿದ್ದೇನೆ. ಅವರೇ ಮಾಡಿದ್ದಾರೇ, ಇವರು ಮಾಡಿದ್ದಾರೆ ಎಂಬುದು ತನಿಖೆಯಿಂದ ತಿಳಿದು ಬರಬೇಕು ಎಂದರು.
ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣದ ತನಿಖೆಯನ್ನು ಪೊಲೀಸರು ಶರವೇಗದಲ್ಲಿ ನಡೆಸುತ್ತಿದ್ದಾರೆ. ಈ ಘಟನೆಯ ಹಿಂದಿನ ಕಾರಣ ಸೇರಿದಂತೆ ಎಲ್ಲವೂ ತನಿಖೆಯಿಂದ ಬಯಲಾಗಲಿದೆ ಎಂದು ಹೇಳಿದರು.
ಮಹಾ ಶಿವರಾತ್ರಿ 2024: ದಿನಾಂಕ, ಇತಿಹಾಸ, ಮಹತ್ವ, ಪೂಜಾ ಸಮಯ, ಇತರ ಮಹತ್ವದ ಮಾಹಿತಿ ಇಲ್ಲಿದೆ!