Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರಲ್ಲಿ ಮಾ.28ರಂದು `RCB Vs SRH’ ಉದ್ಘಾಟನಾ ಪಂದ್ಯ : ಜಸ್ಟ್ ಹೀಗೆ ಟಿಕೆಟ್ ಬುಕ್ ಮಾಡಿಕೊಳ್ಳಿ

24/03/2026 1:22 PM

BREAKING : ಕ್ರಿಕೆಟ್ ಅಭಿಮಾನಿಗಳಿಗೆ ಗುಡ್ ನ್ಯೂಸ್ : ಬೆಂಗಳೂರಲ್ಲಿ `RCB’ ಪಂದ್ಯ ವೀಕ್ಷಿಸಲು ಬರುವವರಿಗೆ ಮೆಟ್ರೋ ಪ್ರಯಾಣ ಉಚಿತ !

24/03/2026 1:18 PM

BREAKING: ತೂಕ ಇಳಿಸುವ ಔಷಧಗಳ ಅಕ್ರಮ ಮಾರಾಟಕ್ಕೆ ಬ್ರೇಕ್: ದೇಶಾದ್ಯಂತ 49 ಕೇಂದ್ರಗಳ ಮೇಲೆ ಅನಿರೀಕ್ಷಿತ ದಾಳಿ!

24/03/2026 1:13 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಡೆಂಘಿ ಜ್ವರ’ದಿಂದ ಸಾವುಗಳು ಆಗದಂತೆ ಮುನ್ನೆಚ್ವರಿಕೆ ವಹಿಸಿ: ಅಧಿಕಾರಿಗಳಿಗೆ ‘ಸಚಿವ ದಿನೇಶ್ ಗುಂಡೂರಾವ್’ ಖಡಕ್ ಸೂಚನೆ
KARNATAKA

‘ಡೆಂಘಿ ಜ್ವರ’ದಿಂದ ಸಾವುಗಳು ಆಗದಂತೆ ಮುನ್ನೆಚ್ವರಿಕೆ ವಹಿಸಿ: ಅಧಿಕಾರಿಗಳಿಗೆ ‘ಸಚಿವ ದಿನೇಶ್ ಗುಂಡೂರಾವ್’ ಖಡಕ್ ಸೂಚನೆ

By kannadanewsnow0925/06/2024 7:33 PM

ಬೆಂಗಳೂರು: ರಾಜ್ಯದಲ್ಲಿ ಡೆಂಘಿ ನಿಯಂತ್ರಣ ಕುರಿತಂತೆ ಬೆಂಗಳೂರಿನಲ್ಲಿ ಇಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಾಗೂ ಅಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಅವರು ಸಭೆ ನಡೆಸಿದರು. ಡೆಂಘಿ ಜ್ವರ ವಿಚಾರದಲ್ಲಿ ಹೆಚ್ಚು ಮುಂಜಾಗೃತೆ ವಹಿಸುವಂತೆ ಸಿಎಂ ಅಧಿಕಾರಿಗಳಿಗೆ ಸೂಚನೆ ನೀಡಿದರು.‌

ಸಿಎಂ ಸಭೆಗು ಮುನ್ನ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಡೆಂಘಿ ಪ್ರಕರಣಗಳು ಹೆಚ್ಚಾಗುತ್ತಿದ್ದರೂ, ಟೆಸ್ಟಿಂಗ್ ಕಡಿಮೆ ಮಾಡುವುದು ಬೇಡ. ಟೆಸ್ಟಿಂಗ್ ಹೆಚ್ಚು ಮಾಡಿ ಸಾಧ್ಯವಾದಷ್ಟು ಡೆಂಘಿ ಪ್ರಕರಣಗಳನ್ನ ಆರಂಭಿಕ‌ ಹಂತದಲ್ಲಿಯೇ ಪತ್ತೆಹಚ್ಚುವ ಕಾರ್ಯ ನಡೆಯಬೇಕು ಎಂದು ಸೂಚನೆ ನೀಡಿದರು.

ಡೆಂಘಿ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಆತಂಕ ಪಡುವುದು ಬೇಡ.‌ ಡೆಂಘಿ ಜ್ವರದಿಂದ ಸಾವುಗಳಾಗದಂತೆ ಮುನ್ನೆಚ್ವರಿಕೆ ವಹಿಸುವುದು ಮುಖ್ಯ. ಡೆಂಘಿ ಜ್ವರದ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ವಿನ ಜಾಗೃತಿ ಮೂಡಿಸಿ ಎಂದು ಸಚಿವ ದಿನೇಶ್ ಗುಂಡೂರಾವ್ ಅವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪ್ರತಿ ಶುಕ್ರವಾರ source reduction activity (ರೋಗ ಹರಡುವ ಮೂಲ ಪತ್ತೆ ಮತ್ತು ನಾಶ) ವಿಶೇಷ ಅಭಿಯಾನ ಹೆಚ್ಚು ಪರಿಣಾಮಕಾರಿಯಾಗಿ ಮಾಡಲು ಸಭೆಯಲ್ಲಿ ನಿರ್ಧರಿಸಲಾಯಿತು.‌ ಪ್ರತಿ ವಾರ ಬಿಬಿಎಂಪಿ, ನಗರಾಭಿವೃದ್ಧಿ ಮತ್ತು ಆರೋಗ್ಯ ಇಲಾಖೆಯವರು ಜಂಟಿಯಾಗಿ ಡೆಂಘಿ ನಿಯಂತ್ರಣ ಕುರಿತು ಪರಿಶೀಲನೆ ನಡೆಸಬೇಕು ಎಂದು ಸಭೆಯಲ್ಲಿ ಸಿಎಂ ಹಾಗೂ ಆರೋಗ್ಯ ಸಚಿವರು ಸೂಚನೆ ನೀಡಿದರು.

ರಾಜ್ಯದಲ್ಲಿ ನಿನ್ನೆಯ ವರೆಗೆ ಒಟ್ಟು 5374 ಪ್ರಕರಣ ವರದಿಯಾಗಿದ್ದು, 5 ಮರಣಗಳು ಸಂಭವಿಸಿವೆ. ಭಾರತ ಸರ್ಕಾರವು ಡೆಂಗಿ ಪ್ರಕರಣಗಳಲ್ಲಿ ಮರಣ ಪ್ರಮಾಣ ಶೇ. 0.5 ನ್ನು ಮೀರುವಂತಿಲ್ಲ ಎಂದು ನಿಗದಿ ಪಡಿಸಿದೆ. ಆದರೆ ಮರ, ಪ್ರಮಾಣವನ್ನ ಝೀರೋ ಇರುವಂತೆಯೇ ನೋಡಿಕೊಳ್ಳುವತ್ತು ಅಗತ್ಯ ಮುಂಜಾಗೃತೆ ವಹಿಸವೇಕು.‌ ರಾಜ್ಯದಲ್ಲಿ ಮರಣ ಪ್ರಮಾಣ 0.09% ಇದೆ.‌ ಬೆಂಗಳೂರು, ಚಿಕ್ಕಮಗಳೂರು, ಮೈಸೂರು, ಹಾವೇರಿ, ಶಿವಮೊಗ್ಗ, ಚಿತ್ರದುರ್ಗ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳು ಕಾಣಿಸಿಕೊಂಡಿವೆ.‌

ಬಿಬಿಎಂಪಿ ವ್ಯಾಪ್ತಿಯಲ್ಲಿ 1230 ಪ್ರಕರಣಗಳು ವರದಿಯಾಗಿದ್ದು, ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ, ನಿಯಂತ್ರಣಕ್ಕೆ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಬಿಬಿಎಂಪಿ ಆಯುಕ್ತರಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದರು.‌ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಚಿಕಿತ್ಸಾ ಸೌಲಭ್ಯಗಳು, ಔಷಧಿಗಳು ಲಭ್ಯವಿರುವುದನ್ನು ಖಾತರಿಪಡಿಸಿಕೊಳ್ಳಬೇಕು.‌ ಆಶಾ ಕಾರ್ಯಕರ್ತೆಯರು, ನರ್ಸಿಂಗ್‌ ವಿದ್ಯಾರ್ಥಿಗಳು, ಎನ್.ಎಸ್.ಎಸ್. ವಿದ್ಯಾರ್ಥಿಗಳು ಮತ್ತಿತರ ಸ್ವಯಂ ಸೇವಕರ ನೆರವಿನೊಂದಿಗೆ ಮನೆ ಮನೆ ಸಮೀಕ್ಷೆ ನಡೆಸಿ ಡೆಂಘಿ ಬಗ್ಗೆ ಅರಿವು ಮೂಡಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ವಾರ 3 ಲಕ್ಷ ನೀರಿನ ಮಾದರಿ ಸಂಗ್ರಹ: ಸಚಿವ ಪ್ರಿಯಾಂಕ್‌ ಖರ್ಗೆ

‘ತೊನ್ನು ರೋಗ’ಕ್ಕೆ ಅತ್ಯಾಧುನಿಕ ಚಿಕಿತ್ಸಾ ಸೌಲಭ್ಯವಿದೆ: ESI ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಥಾಮಸ್ ಪ್ರಸನ್ನ ರಾಜ್

Share. Facebook Twitter LinkedIn WhatsApp Email

Related Posts

ಬೆಂಗಳೂರಲ್ಲಿ ಮಾ.28ರಂದು `RCB Vs SRH’ ಉದ್ಘಾಟನಾ ಪಂದ್ಯ : ಜಸ್ಟ್ ಹೀಗೆ ಟಿಕೆಟ್ ಬುಕ್ ಮಾಡಿಕೊಳ್ಳಿ

24/03/2026 1:22 PM1 Min Read

BREAKING : ಕ್ರಿಕೆಟ್ ಅಭಿಮಾನಿಗಳಿಗೆ ಗುಡ್ ನ್ಯೂಸ್ : ಬೆಂಗಳೂರಲ್ಲಿ `RCB’ ಪಂದ್ಯ ವೀಕ್ಷಿಸಲು ಬರುವವರಿಗೆ ಮೆಟ್ರೋ ಪ್ರಯಾಣ ಉಚಿತ !

24/03/2026 1:18 PM1 Min Read

ರಾಜ್ಯದ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ : 19 ವಿಶೇಷ ರೈಲುಗಳು ಇನ್ಮುಂದೆ ‘ಖಾಯಂ’ ಸೇವೆಗೆ!

24/03/2026 1:09 PM1 Min Read
Recent News

ಬೆಂಗಳೂರಲ್ಲಿ ಮಾ.28ರಂದು `RCB Vs SRH’ ಉದ್ಘಾಟನಾ ಪಂದ್ಯ : ಜಸ್ಟ್ ಹೀಗೆ ಟಿಕೆಟ್ ಬುಕ್ ಮಾಡಿಕೊಳ್ಳಿ

24/03/2026 1:22 PM

BREAKING : ಕ್ರಿಕೆಟ್ ಅಭಿಮಾನಿಗಳಿಗೆ ಗುಡ್ ನ್ಯೂಸ್ : ಬೆಂಗಳೂರಲ್ಲಿ `RCB’ ಪಂದ್ಯ ವೀಕ್ಷಿಸಲು ಬರುವವರಿಗೆ ಮೆಟ್ರೋ ಪ್ರಯಾಣ ಉಚಿತ !

24/03/2026 1:18 PM

BREAKING: ತೂಕ ಇಳಿಸುವ ಔಷಧಗಳ ಅಕ್ರಮ ಮಾರಾಟಕ್ಕೆ ಬ್ರೇಕ್: ದೇಶಾದ್ಯಂತ 49 ಕೇಂದ್ರಗಳ ಮೇಲೆ ಅನಿರೀಕ್ಷಿತ ದಾಳಿ!

24/03/2026 1:13 PM

ರಾಜ್ಯದ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ : 19 ವಿಶೇಷ ರೈಲುಗಳು ಇನ್ಮುಂದೆ ‘ಖಾಯಂ’ ಸೇವೆಗೆ!

24/03/2026 1:09 PM
State News
KARNATAKA

ಬೆಂಗಳೂರಲ್ಲಿ ಮಾ.28ರಂದು `RCB Vs SRH’ ಉದ್ಘಾಟನಾ ಪಂದ್ಯ : ಜಸ್ಟ್ ಹೀಗೆ ಟಿಕೆಟ್ ಬುಕ್ ಮಾಡಿಕೊಳ್ಳಿ

By kannadanewsnow5724/03/2026 1:22 PM KARNATAKA 1 Min Read

ಬೆಂಗಳೂರು : ನಮ್ಮ ಹೆಮ್ಮೆಯ ಆರ್‌ಸಿಬಿ ತಂಡವು ಮತ್ತೆ ತವರು ಮೈದಾನಕ್ಕೆ ಮರಳಿದ್ದು, ’12ನೇ ಮ್ಯಾನ್ ಆರ್ಮಿ’ಯನ್ನು ಸ್ವಾಗತಿಸಲು ಸಜ್ಜಾಗಿದೆ.…

BREAKING : ಕ್ರಿಕೆಟ್ ಅಭಿಮಾನಿಗಳಿಗೆ ಗುಡ್ ನ್ಯೂಸ್ : ಬೆಂಗಳೂರಲ್ಲಿ `RCB’ ಪಂದ್ಯ ವೀಕ್ಷಿಸಲು ಬರುವವರಿಗೆ ಮೆಟ್ರೋ ಪ್ರಯಾಣ ಉಚಿತ !

24/03/2026 1:18 PM

ರಾಜ್ಯದ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ : 19 ವಿಶೇಷ ರೈಲುಗಳು ಇನ್ಮುಂದೆ ‘ಖಾಯಂ’ ಸೇವೆಗೆ!

24/03/2026 1:09 PM

ವನ್ಯಜೀವಿಗಳ ಅಂಗಾಂಗ,ಟ್ರೋಫಿಗೆ ಪರವಾನಗಿ ಅವಕಾಶವಿಲ್ಲ : ಸಚಿವ ಈಶ್ವರ ಖಂಡ್ರೆ

24/03/2026 12:30 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.