‘ಶುಚಿ ಯೋಜನೆ’ಗೆ ಮರುಚಾಲನೆ: ಇನ್ಮುಂದೆ ವಿದ್ಯಾರ್ಥಿನಿಯರಿಗೆ ‘ಉಚಿತ ಸ್ಯಾನಿಟರಿ‌ ಪ್ಯಾಡ್’ ವಿತರಣೆ

ಬೆಂಗಳೂರು: ಕಳೆದ ನಾಲ್ಕು ವರ್ಷಗಳಿಂದ ಸ್ಥಗಿತಗೊಂಡಿದ್ದ ಶುಚಿ ಯೋಜನೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮರುಚಾಲನೆ ನೀಡಿದ್ದಾರೆ. 10 ರಿಂದ 18 ವರ್ಷದ ಹೆಣ್ಣುಮಕ್ಕಳಿಗೆ ಸ್ಯಾನಿಟರಿ ನ್ಯಾಪ್‌ಕಿನ್ ಉಚಿತವಾಗಿ ನೀಡುವ ಮಹತ್ವದ ಯೋಜನೆಗೆ ಬೆಂಗಳೂರಿನಲ್ಲಿ ಬುಧವಾರದಂದು ಚಾಲನೆ ನೀಡಲಾಯಿತು. ಜ್ಞಾನಜ್ಯೋತಿ ಸಭಾಂಗಣದಲ್ಲಿ ಹೆಣ್ಣುಮಕ್ಕಳು ಆರೋಗ್ಯ ಸಚಿವರೊಂದಿಗೆ ಜ್ಯೋತಿ ಬೆಳಗಿಸಿ, ಯೋಜನೆಗೆ ಮರುಚಾಲನೆ ನೀಡುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು. ರಾಜ್ಯದ ಸರ್ಕಾರಿ, ಅನುದಾನಿತ ಶಾಲಾ ಕಾಲೇಜುಗಳಲ್ಲಿಯ ಸುಮಾರು 19 ಲಕ್ಷ ಹೆಣ್ಣುಮಕ್ಕಳಿಗೆ ಉಚಿತವಾಗಿ ಸ್ಯಾನಿಟರಿ ನ್ಯಾಪ್‌ಕಿನ್ ಗಳ ವಿತರಣೆ ಬುಧವಾರದಿಂದ … Continue reading ‘ಶುಚಿ ಯೋಜನೆ’ಗೆ ಮರುಚಾಲನೆ: ಇನ್ಮುಂದೆ ವಿದ್ಯಾರ್ಥಿನಿಯರಿಗೆ ‘ಉಚಿತ ಸ್ಯಾನಿಟರಿ‌ ಪ್ಯಾಡ್’ ವಿತರಣೆ