ಬೆಂಗಳೂರು : ಸಚಿವ ದಿನೇಶ್ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ನಿನ್ನೆ ಬೆಂಗಳೂರಿನ ಶೇಷಾದ್ರಿಪುರಂ ಠಾಣೆಯಲ್ಲಿ ಕಾಂಗ್ರೆಸ್ ದೂರು ನೀಡಿತು ಇದೀಗ ಸಚಿವ ದಿನ ಸಿಂಧೂರ ಅವರ ಪತ್ನಿ ಟಬು ರಾವ್ ಅವರು ಬೆಂಗಳೂರಿನ ಸಂಜಯ್ ನಗರ ಠಾಣೆಯಲ್ಲಿ ಶಾಸಕ ಯಾತನೆ ವಿರುದ್ಧ ಮತ್ತೊಂದು ದೂರು ದಾಖಲಿಸಿದ್ದಾರೆ.
ದಿನೇಶ್ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ ಎಂಬ ಶಾಸಕ ಯತ್ನಾಳ್ ಹೇಳಿಕೆಯನ್ನು ಖಂಡಿಸಿ ಟಬು ರಾವ್ ಅವರು ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಶಾಸಕ ಬಸನಗೌಡ ಪಾಟೀಲ ವಿರುದ್ಧ ಸಚಿವ ದಿನೇಶ್ ಗುಂಡೂರಾವ್ ಪತ್ನಿ ಟಬು ರಾವ್ ದೂರು ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.
ಕಾಂಗ್ರೆಸ್ ನಿಂದ ದೂರು ಸಲ್ಲಿಕೆ
ಸಚಿವ ದಿನೇಶ್ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ವಿರುದ್ಧ ಇದೀಗ ದೂರು ದಾಖಲಾಗಿದೆ. ಹೌದು ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಯತ್ನಾಳ್ ವಿರುದ್ಧ ದೂರು ದಾಖಲಾಗಿದೆ.
ಸಚಿವ ದಿನೇಶ್ ಗುಂಡೂರಾವ್ ಕುಟುಂಬಸ್ಥರನ್ನು ಬಸನಗೌಡ ಪಾಟೀಲ್ ಯತ್ನಾಳ್ ಅವರು ಅವಮಾನಿಸಿದ್ದಾರೆ. ಕೋಮು ಸೌಹಾರ್ದತೆ ಹಾಳು ಮಾಡಲು ಯತ್ನಾಳ್ ಅವರು ಹೀಗೆ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದೊಂದು ದೇಶ ವಿರುದ್ಧ ಹೇಳಿಕೆ ಎಂದು ಶೇಷಾದ್ರಿಪುರಂ ಠಾಣೆಯಲ್ಲಿ ದೂರು ದಾಖಲಾಗಿದೆ.
ರಾಮೇಶ್ವರಂ ಕೆಫೆಗೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತನನ್ನು ಇತ್ತೀಚಿಗೆ NIA ವಶಪಡಿಸಿಕೊಂಡು ವಿಚಾರಣೆ ನಡೆಸಿತ್ತು.ಈ ವಿಷಯದ ಕುರಿತಾಗಿ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಅವರು ಸಚಿವ ದಿನೇಶ್ ಗುಂಡೂರಾವ್ ಅವರ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಇದೀಗ ಕಾಂಗ್ರೆಸ್ ವಿರೋಧಿಸಿ ಬೆಂಗಳೂರಿನ ಶೇಷಾದ್ರಿಪುರಂ ಠಾಣೆಯಲ್ಲಿ ಯತ್ನಾಳ್ ವಿರುದ್ಧ ದಾಖಲಿಸಿದೆ.