ಉತ್ತರ ಕನ್ನಡ : ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಸಿದ್ಧವಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯೆ ನೀಡಿದ್ದಾರೆ.
ಉತ್ತರ ಕನ್ನಡ ಶಾಸಕರ ಜತೆ ಆರೋಗ್ಯ ಡಾ. ಸಚಿವ ಸುಧಾಕರ್ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಜಿಲ್ಲಾ ಮಂತ್ರಿ ಕೋಟಾ ಶ್ರೀನಿವಾಸ್ ಪೂಜಾರಿ ಸಹ ಭಾಗಿಯಾಗಿದ್ದಾರೆ. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಸಿದ್ಧವಾಗಿದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ಬಳಿಕ ಸುದ್ದಿಗಾರರೊಂದಿಗೆ ಸಚಿವ ಸುಧಾಕರ್ ಅವರು, ಉತ್ತರ ಕನ್ನಡ ಜಿಲ್ಲೆಯಲ್ಲಿ ಸುಸಜ್ಜಿತ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುತ್ತೇವೆ. ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾದ ಕುರಿತು ಆರ್ಥಿಕ ಇಲಾಖೆಗೆ ಕಡತ ಹೋಗಿದೆ. ಆಸ್ಪತ್ರೆ ನಿರ್ಮಾಣ ಸ್ಥಳದ ಬಗ್ಗೆ ಇನ್ನೂ ಅಂತಿಮವಾಗಿಲ್ಲ. ಅಧಿವೇಶನದ ಬಳಿಕ ಪ್ರವಾಸ ಮಾಡಿ ಪೈನಲ್ ಮಾಡುತ್ತೇವೆ. ಸೂಕ್ತವಾದ ಸ್ಥಳದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡುತ್ತೇವೆ ಎಂದು ಹೇಳಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಒತ್ತಾಯಿಸಿ ಕಳೆದ ಮೂರು ವರ್ಷಗಳಿಂದ ಹೋರಾಟ, ಪ್ರತಿಭಟನೆಗಳು ತೀವ್ರಗೊಳಿಸಿದ್ದೇವೆ .ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಆಸ್ಪತ್ರೆ ನಿರ್ಮಾಣಕ್ಕೆ ಮುಂದಾಗಿದೆ.