Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಯಾವುದೇ ಅಸಮಾಧಾನ ಇಲ್ಲ, ಈ ಕುರಿತ ವರದಿ ಆಧಾರರಹಿತ: ಸಚಿವ ಕೆ.ಜೆ ಜಾರ್ಜ್

ಸೇನಾ ಕ್ಯಾಪ್ಟನ್ ಪ್ರೇಯಸಿಗೆ ಮಾಡಿದ ಪ್ರಪೋಸ್ ಪುಲ್ ವೈರಲ್; ನೆಟ್ಟಿಗರ ಕಾಮೆಂಟ್ ಸುರಿಮಳೆ

​ನಾರ್ವೆ ಚೆಸ್: ಗುಕೇಶ್ ವಿರುದ್ಧ ರೋಚಕ ಜಯ ಸಾಧಿಸಿದ ಪ್ರಜ್ಞಾನಂದ; ಪ್ರಶಸ್ತಿ ರೇಸ್‌ನಲ್ಲಿ ಮುನ್ನಡೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅಪಾಯಕಾರಿ ವೃಕ್ಷ, ಕೊಂಬೆ ತೆರವಿಗೆ ಸಚಿವ ಈಶ್ವರ ಖಂಡ್ರೆ ಸೂಚನೆ
KARNATAKA

ಅಪಾಯಕಾರಿ ವೃಕ್ಷ, ಕೊಂಬೆ ತೆರವಿಗೆ ಸಚಿವ ಈಶ್ವರ ಖಂಡ್ರೆ ಸೂಚನೆ

By ವಸಂತ ಬಿ ಈಶ್ವರಗೆರೆ

ಬೆಂಗಳೂರು : ಗಾಳಿ, ಮಳೆಗೆ ಮರ ಹಾಗೂ ಕೊಂಬೆಗಳು ಬಿದ್ದು ಪ್ರಾಣಹಾನಿ, ಆಸ್ತಿ ಹಾನಿ ಆಗುತ್ತಿದ್ದು, ಮಳೆಗಾಲಕ್ಕೆ ಮೊದಲೇ ಅಪಾಯಕಾರಿ ವೃಕ್ಷ ಗುರುತಿಸಿ ಕೊಂಬೆಗಳನ್ನು ಕತ್ತರಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅರಣ್ಯಾಧಿಕಾರಿಗಳಿಗೆ ಸೂಚಿಸಿದ್ದಾರೆ.

ಬೆಂಗಳೂರಿನ ಕಂಟೋನ್ಮೆಂಟ್ ಬಳಿ ಇಂದು ರಸ್ತೆ ಬದಿಯ ಮರದ ಸುತ್ತಲೂ ಹಾಕಲಾಗಿದ್ದ ಕಾಂಕ್ರೀಟ್ ತೆರವು ಮಾಡುವ ಮೂಲಕ ವೃಕ್ಷಗಳ ಸಂರಕ್ಷಣಾ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮರದ ಕೊಂಬೆ ಬಿದ್ದು ಗಾಯಗೊಂಡಿದ್ದ 29 ವರ್ಷದ ಅಕ್ಷಯ್ ಮೃತಪಟ್ಟಿರುವ ಬಗ್ಗೆ ತೀವ್ರ ಶೋಕ ವ್ಯಕ್ತಪಡಿಸಿದರು.

ಮಳೆ, ಗಾಳಿಗೆ ಟೊಳ್ಳು ಮರಗಳು ಮತ್ತು ಬೇರು ಕಚ್ಚದ ಮರಗಳು ಧರಾಶಾಯಿ ಆಗುತ್ತವೆ. ಇದಕ್ಕೆ ಕಾರಣ ಬೇರಿಗೆ ನೀರು ಇಳಿಯದಂತೆ ಹಾಕಲಾಗಿರುವ ಕಾಂಕ್ರೀಟ್, ಕಲ್ಲಿನ ಚಪ್ಪಡಿ, ಟೈಲ್ಸ್ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಈ ಬಗ್ಗೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣವೂ ತೀರ್ಪು ನೀಡಿದ್ದು, ಸರ್ಕಾರ ಈ ಸಂಬಂಧ ಅಧಿಕೃತ ಆದೇಶವನ್ನೇ ಹೊರಡಿಸಿದೆ ಎಂದರು.

ನಿನ್ನೆ ಬಿಬಿಎಂಪಿ ವಿಶೇಷ ಆಯುಕ್ತರು ಮರದ ಸುತ್ತ ಇರುವ ಕಾಂಕ್ರೀಟ್ ತೆರವಿಗೆ ಆದೇಶ ಮಾಡಿದ್ದು, ಇನ್ನು ಮುಂದೆ ರಸ್ತೆ ಬದಿ ಸಸಿ ನೆಡುವಾಗ ಒಂದು ಮೀಟರ್ ಸುತ್ತಳತೆಯಲ್ಲಿ ಮಣ್ಣು ಇರುವುದನ್ನು ಖಾತ್ರಿ ಪಡಿಸಿಕೊಳ್ಳಬೇಕು ಎಂದು ಹೇಳಿದರು.

ಬಿಬಿಎಂಪಿ ಮತ್ತು ರಾಜ್ಯದ ಎಲ್ಲ ನಗರಗಳ ಸ್ಥಳೀಯ ಸಂಸ್ಥೆಗಳು ಮತ್ತು ಹೆದ್ದಾರಿ ಪ್ರಾಧಿಕಾರ, ತೋಟಗಾರಿಕೆ ಇಲಾಖೆ ಹಾಗೂ ಅರಣ್ಯ ಇಲಾಖೆಯ ಸಾಮಾಜಿಕ ಅರಣ್ಯ ವಿಭಾಗ ತಾನು ಈಗಾಗಲೇ ನೆಟ್ಟಿರುವ ಗಿಡ ಮರಗಳ ಸುತ್ತ ಇರುವ ಕಾಂಕ್ರೀಟ್, ಡಾಂಬರು ತೆರವಿಗೆ ಕ್ರಮ ವಹಿಸಬೇಕು ಎಂದರು.

ವೃಕ್ಷ ಪ್ರಾಧಿಕಾರ (ಟ್ರಿ ಅಥಾರಿಟಿ) ಸಭೆಗಳನ್ನು ನಿಯಮಿತವಾಗಿ ನಡೆಸಿ, ಅಪಾಯಕಾರಿ ಮರಗಳನ್ನು ಗುರುತಿಸಿ, ಅವುಗಳ ರೆಂಬೆ, ಕೊಂಬೆ ತೆರವಿಗೆ ತ್ವರಿತವಾಗಿ ಕ್ರಮ ಕೈಗೊಳ್ಳಬೇಕು ಎಂದೂ ಸಚಿವರು ಸೂಚಿಸಿದರು.

ಒಬ್ಬ ಮನುಷ್ಯ ನೆಮ್ಮದಿಯಿಂದ ಉಸಿರಾಡಲು 7 ಮರ ಇರಬೇಕು ಎಂದು ತಜ್ಞರು ಹೇಳುತ್ತಾರೆ. ಆದರೆ ಇಂದು ಬೆಂಗಳೂರು ಕಾಂಕ್ರೀಟ್ ಕಾಡಾಗಿದ್ದು, ಇಲ್ಲಿ 7 ಜನರಿಗೆ 1 ಮರವೂ ಇಲ್ಲದ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಪ್ರತಿಯೊಬ್ಬರೂ ವೃಕ್ಷ ಸಂರಕ್ಷಣೆ ಮತ್ತು ಸಂವರ್ಧನೆಗೆ ಮುಂದಾಗಬೇಕು ಎಂದರು.

ಪ್ರತಿಯೊಬ್ಬರಿಗೂ ಆಮ್ಲ ಜನಕ ಬೇಕು, ಆದರೆ ತಮ್ಮ ಮನೆಯ ಮುಂದೆ ಗಿಡ ಇರಬಾರದು. ಇದರ ಎಲೆ ಉದುರಿದರೆ ಮನೆ ಮುಂದೆ ಕಸ ಆಗುತ್ತದೆ ಎನ್ನುತ್ತಾರೆ. ಇನ್ನು ಮನೆಯ ಸೌಂದರ್ಯಕ್ಕೆ ಅಥವಾ ಅಂಗಡಿಗಳ ಫಲಕ ಕಾಣುವುದಿಲ್ಲ ಎಂದು ಮರ ಕಡಿಯುವ ಪ್ರವೃತ್ತಿ ಹೆಚ್ಚುತ್ತಿದೆ ಎಂದು ವಿಷಾದಿಸಿದ ಅವರು, ಮನೆಗಳ ಮುಂದೆ ಇರುವ ಗಿಡಗಳ ಸುತ್ತ ಕಾಂಕ್ರೀಟ್ ಹಾಕದಂತೆ, ಮರಗಳನ್ನು ಅಕ್ರಮವಾಗಿ ಕಡಿಯದಂತೆ ಮನವಿ ಮಾಡಿದರು.

ಬೆಂಗಳೂರು ಬೃಹದಾಕಾರವಾಗಿ ಬೆಳೆದಿದೆ. ಒಂದು ಕಾಲದಲ್ಲಿ ನಿವೃತ್ತರ ಸ್ವರ್ಗ, ಉದ್ಯಾನ ನಗರ ಎಂದು ಖ್ಯಾತವಾಗಿತ್ತು. ಆದರೆ ಇಂದು ಎಲ್ಲಿ ನೋಡಿದರೂ ಮುಗಿಲೆತ್ತರ ಕಟ್ಟಡಗಳೇ ಕಾಣುತ್ತವೆ. ನಾವು ಹಸಿರು ಸಂರಕ್ಷಣೆಗೆ ಕ್ರಮ ವಹಿಸಲೇಬೇಕು. ಇದು ನಮ್ಮೆಲ್ಲರ ಹೊಣೆ. ವೃಕ್ಷ ಅಂದರೆ ಮರ ಯಾರು ವೃಕ್ಷವನ್ನು ಸಂರಕ್ಷಿಸುತ್ತಾರೋ, ವೃಕ್ಷ ಅವರನ್ನು ರಕ್ಷಿಸುತ್ತದೆ. ವೃಕ್ಷೋ… ರಕ್ಷತಿ ರಕ್ಷಿತಃ ಎಂದು ಹೇಳಬಹುದು. ನಾನು ಅರಣ್ಯ ಸಚಿವನಾಗಿ ರಾಜ್ಯದ ಹಸಿರು ಹೊದಿಕೆ ಹೆಚ್ಚಿಸಲು ಮತ್ತು ವೃಕ್ಷ ಸಂರಕ್ಷಣೆಗೆ ಕ್ರಮ ಕೈಗೊಂಡಿದ್ದೇನೆ ಎಂದರು.

4000 ಕೋಟಿ ರೂ. ಮೌಲ್ಯದ ಅರಣ್ಯ ಒತ್ತುವರಿ ತೆರವು:

ಬೆಂಗಳೂರು ನಗರ ಜಿಲ್ಲೆಯಲ್ಲಿ ಸುಮಾರು 2041 ಎಕರೆ ಅರಣ್ಯ ಭೂಮಿ ಒತ್ತುವರಿಯಾಗಿದೆ. ಈ ಪೈಕಿ ಕಳೆದ 2 ವರ್ಷದಲ್ಲಿ ಸುಮಾರು 4000 ಕೋಟಿ ರೂ. ಬೆಲೆ ಬಾಳುವ 128 ಎಕರೆ ಅರಣ್ಯ ಭೂಮಿಯ ಒತ್ತುವರಿಯನ್ನು ತೆರವು ಮಾಡಿಸಲಾಗಿದೆ ಎಂದು ವಿವರಿಸಿದರು.

ಇದೆ ಸಂದರ್ಭದಲ್ಲಿ ಅಪಾಯಕಾರಿ ಮರಗಳ ರೆಂಬೆ, ಕೊಂಬೆಗಳ ತೆರವು ಕಾರ್ಯಾಚರಣೆ ವೀಕ್ಷಿಸಿದರು.

Share. Facebook Twitter LinkedIn WhatsApp Email

Related Posts

ಯಾವುದೇ ಅಸಮಾಧಾನ ಇಲ್ಲ, ಈ ಕುರಿತ ವರದಿ ಆಧಾರರಹಿತ: ಸಚಿವ ಕೆ.ಜೆ ಜಾರ್ಜ್

1 Min Read

BREAKING: ಕಲಬುರ್ಗಿಯಲ್ಲಿ ಪ್ರೀತಿ ನಿರಾಕರಣೆಯ ಭೀತಿಯಲ್ಲಿ ರೈಲಿಗೆ ತಲೆಕೊಟ್ಟು ಪ್ರೇಮಿಗಳು ಆತ್ಮಹತ್ಯೆ!

1 Min Read

BREAKING: ವಿಧಾನ ಪರಿಷತ್ ಚುನಾವಣೆಗೆ 5ನೇ ಅಭ್ಯರ್ಥಿ ಕಣಕ್ಕೆ ಇಳಿಸಿದ ಕಾಂಗ್ರೆಸ್

1 Min Read
Recent News

ಯಾವುದೇ ಅಸಮಾಧಾನ ಇಲ್ಲ, ಈ ಕುರಿತ ವರದಿ ಆಧಾರರಹಿತ: ಸಚಿವ ಕೆ.ಜೆ ಜಾರ್ಜ್

ಸೇನಾ ಕ್ಯಾಪ್ಟನ್ ಪ್ರೇಯಸಿಗೆ ಮಾಡಿದ ಪ್ರಪೋಸ್ ಪುಲ್ ವೈರಲ್; ನೆಟ್ಟಿಗರ ಕಾಮೆಂಟ್ ಸುರಿಮಳೆ

​ನಾರ್ವೆ ಚೆಸ್: ಗುಕೇಶ್ ವಿರುದ್ಧ ರೋಚಕ ಜಯ ಸಾಧಿಸಿದ ಪ್ರಜ್ಞಾನಂದ; ಪ್ರಶಸ್ತಿ ರೇಸ್‌ನಲ್ಲಿ ಮುನ್ನಡೆ!

BREAKING: ಕಲಬುರ್ಗಿಯಲ್ಲಿ ಪ್ರೀತಿ ನಿರಾಕರಣೆಯ ಭೀತಿಯಲ್ಲಿ ರೈಲಿಗೆ ತಲೆಕೊಟ್ಟು ಪ್ರೇಮಿಗಳು ಆತ್ಮಹತ್ಯೆ!

State News
KARNATAKA

ಯಾವುದೇ ಅಸಮಾಧಾನ ಇಲ್ಲ, ಈ ಕುರಿತ ವರದಿ ಆಧಾರರಹಿತ: ಸಚಿವ ಕೆ.ಜೆ ಜಾರ್ಜ್

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು : ಇಂಧನ ಇಲಾಖೆಯಲ್ಲಿ ಹಿರಿಯ ಅಧಿಕಾರಿಗಳ ನೇಮಕ ಹಾಗೂ ಖಾತೆ ಹಂಚಿಕೆ ಕುರಿತು ಅಸಮಾಧಾನ ಇಲ್ಲ ಎಂದಿರುವ ಇಂಧನ…

BREAKING: ಕಲಬುರ್ಗಿಯಲ್ಲಿ ಪ್ರೀತಿ ನಿರಾಕರಣೆಯ ಭೀತಿಯಲ್ಲಿ ರೈಲಿಗೆ ತಲೆಕೊಟ್ಟು ಪ್ರೇಮಿಗಳು ಆತ್ಮಹತ್ಯೆ!

BREAKING: ವಿಧಾನ ಪರಿಷತ್ ಚುನಾವಣೆಗೆ 5ನೇ ಅಭ್ಯರ್ಥಿ ಕಣಕ್ಕೆ ಇಳಿಸಿದ ಕಾಂಗ್ರೆಸ್

BREAKING: ಧಾರವಾಡ ವಿವಿಯಲ್ಲಿ ಸಂಶೋಧನಾ ವಿದ್ಯಾರ್ಥಿಗೆ ಪ್ರಾಧ್ಯಾಪಕನಿಂದಲೇ ಕಿರುಕುಳ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.