ಬೆಂಗಳೂರು: ರಾಜ್ಯದಲ್ಲಿ ಶಿಕ್ಷಣದ ಗುಣಮಟ್ಟವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಹಾಗೂ ಮುಂಬರುವ 2026–27ನೇ ಸಾಲಿನ ರಾಜ್ಯ ಆಯವ್ಯಯದಲ್ಲಿ ಶಿಕ್ಷಣ ಇಲಾಖೆಗೆ ಅಗತ್ಯವಿರುವ ಅನುದಾನ ಬೇಡಿಕೆಗಳನ್ನು ಸಿದ್ಧಪಡಿಸುವ ನಿಟ್ಟಿನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಮಧು ಬಂಗಾರಪ್ಪ ಅವರ ನೇತೃತ್ವದಲ್ಲಿ ಇಂದು ಮಹತ್ವದ ಪೂರ್ವಭಾವಿ ಸಭೆ ನಡೆಯಿತು.
ಫೆಬ್ರವರಿ ಮೊದಲ ವಾರದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಬಜೆಟ್ ಪೂರ್ವಭಾವಿ ಸಭೆಗೆ ಇಲಾಖೆಯ ಪ್ರಸ್ತಾವನೆಗಳ ಕುರಿತು ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಸುಧೀರ್ಘವಾದ ಸಭೆ ನಡೆಸಲಾಯಿತು.
ಈ ಸಭೆಯಲ್ಲಿ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ರಶ್ಮಿ ಮಹೇಶ್, ಆಯುಕ್ತರಾದ ವಿಕಾಸ್ ಕಿಶೋರ್ ಸುರಳ್ಕರ್, ಯೋಜನಾ ನಿರ್ದೇಶಕಿಯಾದ ವಿದ್ಯಾಕುಮಾರಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರಾದ ಭರತ್ ಎಸ್, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ ಜಿ ಟಿ ನಿಟ್ಟಾಲಿ ಹಾಗೂ ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಆಯುಕ್ತರಾದ ಹೆಚ್. ಬಸವರಾಜೇಂದ್ರ ಅವರು ಇಲಾಖೆಯ ಪ್ರಸ್ತುತ ಸ್ಥಿತಿ–ಗತಿ ಮತ್ತು ಮುಂದಿನ ಆರ್ಥಿಕ ವರ್ಷದ ಅಗತ್ಯತೆಗಳ ಕುರಿತು ಸಚಿವರಿಗೆ ಸಮಗ್ರ ಮಾಹಿತಿ ನೀಡಿದರು.
ಸಭೆಯಲ್ಲಿ ‘ಕರ್ನಾಟಕ ಪಬ್ಲಿಕ್ ಶಾಲೆಗಳ’ (KPS) ಬಲವರ್ಧನೆ ಹಾಗೂ ಹಲವು ಪ್ರಮುಖ ವಿಷಯಗಳ ಕುರಿತು ಸುದೀರ್ಘ ಚರ್ಚೆ ನಡೆಯಿತು.
ಮುಖ್ಯಮಂತ್ರಿಗಳೊಂದಿಗಿನ ಸಭೆಗೆ ಮುನ್ನ ನಡೆದ ಈ ಚರ್ಚೆಗಳು ಇಲಾಖೆಯ ಆದ್ಯತೆಗಳನ್ನು ಸ್ಪಷ್ಟವಾಗಿ ಗುರುತಿಸಲು ಸಹಕಾರಿಯಾಗಿದ್ದು, ಶಿಕ್ಷಣ ಇಲಾಖೆಯ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ ಪ್ರಸ್ತಾವನೆಗಳನ್ನು ಅಂತಿಮಗೊಳಿಸಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಮುಂಬರುವ ಸಭೆಯಲ್ಲಿ ಮಂಡಿಸಲು ತೀರ್ಮಾನಿಸಲಾಯಿತು.
BREAKING: ಮಹಾರಾಷ್ಟ್ರದ ಮೊದಲ ಮಹಿಳಾ ಡಿಸಿಎಂ ಆಗಿ ಸುನೇತ್ರಾ ಪವಾರ್ ಪ್ರಮಾಣವಚನ ಸ್ವೀಕಾರ | Sunetra Pawar
ಬೆಂಗಳೂರಿನ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಈಗ ಮೆಟ್ರೋ ರೈಲಿನಲ್ಲಿ ಈ ಎಲ್ಲವೂ ನಿಷೇಧ, ತಪ್ಪಿದ್ರೆ ಕೇಸ್, ದಂಡ ಫಿಕ್ಸ್








