Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪಾಕಿಸ್ತಾನದಲ್ಲಿ 4.0 ತೀವ್ರತೆಯ ಭೂಕಂಪ | Earthquake

28/07/2025 8:56 AM

ಈಸಿಜೆಟ್ ವಿಮಾನದಲ್ಲಿ ಬಾಂಬ್ ಸ್ಫೋಟದ ಬೆದರಿಕೆ, ಟ್ರಂಪ್ ವಿರುದ್ಧ ಘೋಷಣೆ ಕೂಗಿದ ವ್ಯಕ್ತಿ ಬಂಧನ | bomb threat

28/07/2025 8:36 AM

ಗಾಝಾದಲ್ಲಿ ‘ಕದನ ವಿರಾಮ’ ಘೋಷಿಸಿದ ಇಸ್ರೇಲ್ | Israel-Hamas war

28/07/2025 8:17 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ವಿಧಾನಸೌಧ ಮಾರ್ಗದರ್ಶಿ ನಡಿಗೆ ಪ್ರವಾಸಕ್ಕೆ ಸಚಿವ ಹೆಚ್.ಕೆ.ಪಾಟೀಲ್ ಚಾಲನೆ
KARNATAKA

BREAKING: ವಿಧಾನಸೌಧ ಮಾರ್ಗದರ್ಶಿ ನಡಿಗೆ ಪ್ರವಾಸಕ್ಕೆ ಸಚಿವ ಹೆಚ್.ಕೆ.ಪಾಟೀಲ್ ಚಾಲನೆ

By kannadanewsnow0925/05/2025 5:16 PM

ಬೆಂಗಳೂರು: ವಿಧಾನ ಸೌಧವು ನಮ್ಮ ರಾಜ್ಯದ ಪ್ರಜಾಪ್ರಭುತ್ವದ ಜೀವಂತ ಕಥೆಯಾಗಿದ್ದು, ಇದನ್ನು ಸಾರ್ವಜನಿಕರಿಗೆ ತೆರೆದಿರುವುದು ಪಾರದರ್ಶಕತೆ, ಪರಂಪರೆ ಮತ್ತು ನಾಗರಿಕ ಹೆಮ್ಮೆಯ ಕಾರ್ಯಕ್ರಮವಾಗಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವ ಎಚ್.ಕೆ.ಪಾಟೀಲ ಅವರು ತಿಳಿಸಿದರು.

ಅವರು ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಪ್ರವಾಸೋದ್ಯಮ ಇಲಾಖೆ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಹಾಗೂ ಕರ್ನಾಟಕ ವಿಧಾನ ಸಭೆಯ ಸಚಿವಾಲಯದ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾದ ಮಾರ್ಗದರ್ಶಿ ನಡಿಗೆ ಪ್ರವಾಸ (Walking Guided Tour) ಕಾರ್ಯಕ್ರಮಕ್ಕೆ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ವಿಧಾನ ಸೌಧವು ಇನ್ನು ಮುಂದೆ ಸಾರ್ವಜನಿಕರಿಗೂ ಮುಕ್ತವಾಗಲಿದೆ. ಕಲಾಕೌಶಲ್ಯದ ವಿರಳ ದಾಖಲೆಯಾಗಿ ಇತಿಹಾಸದಲ್ಲಿ ದಾಖಲಾಗಿರುವ ಆಡಳಿತಸೌಧವನ್ನು ದೂರದಿಂದಲೇ ನೋಡಿ ಫೊಟೋ ತೆಗೆದು ಸಂತಸ ಪಡುತ್ತಿದ್ದ ಜನರಿಗೆ ಈಗ ಇದನ್ನ ಹತ್ತಿರದಿಂದ ನೋಡುವ ಸದವಕಾಶ ಲಭ್ಯವಿದೆ ಎಂದರು.

ಇದು ಕೇವಲ ಕಟ್ಟಡವಲ್ಲ. ಜಗತ್ತಿನ ಅತ್ಯಂತ ಸುಂದರವಾದ ಕಟ್ಟಡ, ವಿದ್ಯಾರ್ಥಿಗಳಿಗೆ, ಆಸಕ್ತರಿಗೆ ಇದರ ದರ್ಶನ ಮಾಡಿಸುವ ದೃಷ್ಟಿಯಿಂದ ಅವಕಾಶವನ್ನು ಕಲ್ಪಸಿಕೊಡಲಾಗುತ್ತಿದೆ. ಇಲ್ಲಿಯವರಿಗೆ ಕೇವಲ ಆಡಳಿತ ಕಾರ್ಯಗಳಿಗಷ್ಟೇ ಸೀಮಿತವಾಗಿದ್ದ ವಿಧಾನಸೌಧವು ಇನ್ನು ಮುಂದೆ ಪ್ರವಾಸಿ, ಪ್ರೇಕ್ಷಣೀಯ ಸ್ಥಳದ ಸಾಲಿಗೆ ಸೇರ್ಪಡೆಯಾಗಲಿದೆ. ಜೂನ್ 1ರಿಂದ ಸೀಮಿತ ದಿನಗಳಲ್ಲಿ ವಿಧಾನಸೌಧವು ಸಾರ್ವಜನಿಕ ವೀಕ್ಷಣೆಗೆ ಲಭ್ಯವಾಗಲಿದೆ ಎಂದು ತಿಳಿಸಿದರು.

ವಿಧಾನಸೌಧ ಪ್ರವಾಸ ಕಾರ್ಯಕ್ರಮವು ಮನೋರಂಜನೆಯ ಪ್ರವಾಸವಾಗಬಾರದು, ಶೈಕ್ಷಣಿಕ ಅಧ್ಯಯನದ ಪ್ರವಾಸವಾಗಬೇಕು. ಪ್ರಜಾಪ್ರಭುತ್ವದ ಮಹತ್ವವನ್ನು ಸಾರ್ವಜನಿಕರು ತಿಳಿದುಕೊಳ್ಳುವಂತಾಗಬೇಕು. ವಿದ್ಯಾರ್ಥಿಗಳು ಮುಂದೆ ರಾಜಕೀಯ ಕ್ಷೇತ್ರಕ್ಕೂ ಬರಬೇಕು, ಉತ್ತಮ ರಾಜಕೀಯ ಪಟುಗಳಾಗಲು ಶಕ್ತಿಸೌಧ ಸ್ಪೂರ್ತಿ ನೀಡುವಂತಾಗಲಿದೆ ಎಂದು ಹೇಳಿದರು.

ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಮಾತನಾಡಿ ವಿಧಾನಸೌಧದ ಕಟ್ಟಡದಲ್ಲಿ ಓಡಾಡಿದ್ರೆ ಅನೇಕ ಪಾರಂಪರಿಕ ಕಟ್ಟಡಗಳು ಕಣ್ಣಿಗೆ ಕಟ್ಟುವಂತೆ ಮಾಡಲಿದೆ. 75 ವರ್ಷಗಳ ಕಾಲ ವಿಧಾನಸೌಧದ ಒಳಗೆ ಯಾರನ್ನೂ ಬಿಟ್ಟಿರಲಿಲ್ಲ. ಸಾರ್ವಜನಿಕರು ಪಾಸ್ ಪಡೆದುಕೊಂಡು ಬರಬೇಕಿತ್ತು. ಆದರೆ ಈಗ ಕರ್ನಾಟಕ ಮಾತ್ರವಲ್ಲ ದೇಶದ ಜನತೆಗೆ ತೋರಿಸುವ ಕೆಲಸ ಮಾಡಿದ್ದೇವೆ ಎಂದರು.

ಮಾರ್ಗದರ್ಶಿ ಪ್ರವಾಸದ ಮೂಲಕ ವಿದ್ಯಾರ್ಥಿಗಳಿಗೆ ನಮ್ಮ ನಾಡಿನ ಇತಿಹಾಸ ಅರ್ಥಮಾಡಿಸುವ ಕೆಲಸವಾಗಲಿದೆ. ವಿದ್ಯಾರ್ಥಿಗಳು ಹಾಗೂ ಯುವ ಸಮುದಾಯದವರು ದೇಶದ ಇತಿಹಾಸವನ್ನು ಅರ್ಥ ಮಾಡಿಕೊಳ್ಳಬೇಕು. ವಿಧಾನಸೌಧ ನಮ್ಮದು ಎಂಬ ಭಾವನೆಯನ್ನು ನಮ್ಮ ರಾಜ್ಯದ ಜನರಲ್ಲಿ ಮೂಡುವಂತೆ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದು ತಿಳಿಸಿದರು.

ವಿಧಾನ ಸೌಧ, ಬೆಂಗಳೂರಿನ ಪ್ರಮುಖ ಐತಿಹಾಸಿಕ ಮತ್ತು ಆಡಳಿತದ ಸಂಕೇತವಾಗಿದ್ದು. ಮಾರ್ಗದರ್ಶಿ ಪ್ರವಾಸಿ ನಡಿಗೆಯು ಈ ಕಟ್ಟಡದ ಐತಿಹಾಸಿಕದ ಮಹತ್ವ, ಶಿಲ್ಪಕಲೆಯ ವೈಭವ ಮತ್ತು ಅದರ ಪ್ರಮುಖ ಭಾಗಗಳನ್ನು ಪರಿಚಯಿಸುತ್ತದೆ. ಸಾರ್ವಜನಿಕರು ಇದರ ವೀಕ್ಷಣೆ ಮಾಡಬಹುದಾಗಿದೆ. ನುರಿತ ಗೈಡ್‌ಗಳು ವಿಧಾನಸೌಧ ಆವರಣದ ಕುರಿತು ಸಮಗ್ರ ಪರಿಚಯ ಸಹಿತ ಮಾಹಿತಿಯನ್ನು ಪ್ರವಾಸಿಗರಿಗೆ ಒದಗಿಸಲಿದ್ದಾರೆ ಎಂದು ತಿಳಿಸಿದರು.

ರಾಜಕೀಯ ಅಕಾಡೆಮಿ ತೆರೆಯಲು ಚಿಂತಿಸಲಾಗುತ್ತಿದೆ, ರಾಜಕೀಯ ಕಾಲೇಜು ಆರಂಭಿಸಿ ತರಬೇತಿ ನೀಡುವ ಬಗ್ಗೆ ಕಾನೂನಾತ್ಮಕವಾಗಿ ಚರ್ಚಿಸಿ ಅನುಷ್ಟಾನದ ಬಗ್ಗೆ ನಿರ್ಧಾರ ಮಾಡಲಾಗುವುದು ಎಂದರು.

ವಿಧಾನ ಪರಿಷತ್ತಿನ ಸಭಾಧ್ಯಕ್ಷರಾದ ಬಸವರಾಜ ಎಸ್ ಹೊರಟ್ಟಿ ಮಾತನಾಡಿ ಸಾರ್ವಜನಿಕರಿಗೆ ವಿಧಾನಸೌಧ ವೀಕ್ಷಣೆಗೆ ಅವಕಾಶ ಕಲ್ಪಿಸಿರುವುದು ಒಳ್ಳೆಯ ಬೆಳವಣಿಗೆ. ಶಕ್ತಿ ಸೌಧದ ಬಗ್ಗೆ ಜನರಿಗೆ ಸೂಕ್ತ ಮಾಹಿತಿ ನೀಡುವ ಕೆಲಸವಾಗಲಿದೆ ಎಂದು ಹೇಳಿದರು.

ವಿಧಾನಸೌಧ ಮಾರ್ಗದರ್ಶಿ ನಡಿಗೆ ಪ್ರವಾಸದ ವಿಶೇಷತೆಗಳು:

ಪ್ರತೀ ಭಾನುವಾರ ಹಾಗೂ ಎರಡನೇ ಮತ್ತು ನಾಲ್ಕನೇ ಶನಿವಾರ ವಿಧಾನಸೌಧ ಪ್ರವಾಸ ನಡಿಗೆ ಇರಲಿದೆ. ಇದಕ್ಕಾಗಿ ಆನ್‌ಲೈನ್ ನಲ್ಲಿ ಮುಂಚಿತವಾಗಿ ಟಿಕೆಟ್ ಮಾಡಿಕೊಳ್ಳಬೇಕು. ಜೂನ್ 1 ರಿಂದ ಅಧಿಕೃತ ವಿಧಾನಸೌಧ ಪ್ರವಾಸ ಆರಂಭವಾಗಲಿದೆ. ಪ್ರಾರಂಭಿಕ ದರವು 16 ವರ್ಷ ಮೇಲ್ಪಟ್ಟವರಿಗೆ 50 ರೂಪಾಯಿ ದರ ನಿಗಧಿಯಾಗಿದ್ದು. 15 ವರ್ಷ ವಯಸ್ಸಿಗಿಂತ ಕಡಿಮೆ ಇರುವ ಮಕ್ಕಳಿಗೆ ಉಚಿತ. ಟಿಕೆಟ್‌ಗಳನ್ನು https://kstdc.co/activities ವೆಬ್‌ಸೈಟ್ ನಲ್ಲಿ ಬುಕ್ ಮಾಡಿಕೊಳ್ಳಬೇಕು. ಪ್ರತಿ ಎರಡನೇ ಮತ್ತು ನಾಲ್ಕನೇ ಶನಿವಾರಗಳು ಹಾಗೂ ಎಲ್ಲಾ ಭಾನುವಾರಗಳು ವೀಕ್ಷಿಸಬಹುದು. ಪ್ರವಾಸವು ಬೆಳಗ್ಗೆ 8 ರಿಂದ ಸಂಜೆ 5 ಗಂಟೆವರೆಗೆ ಇರಲಿದೆ.

Wtch Video: ಹಿಮಾಚಲ ಪ್ರದೇಶದ ಮೇಘ ಸ್ಫೋಟ: ಪ್ರವಾಹದಲ್ಲಿ ಕೊಚ್ಚಿ ಹೋದ 5-6 ವಾಹನಗಳು | Himachal Pradesh Cloud Burst

BIG NEWS : ರಾಜ್ಯದಲ್ಲಿ ಮೇ.29ರಿಂದ ಶಾಲೆಗಳು ಪುನಾರಂಭ : ಮೊದಲ ದಿನವೇ ವಿದ್ಯಾರ್ಥಿಗಳಿಗೆ ಪುಸ್ತಕ, ಸಮವಸ್ತ್ರ ವಿತರಣೆ.!

Share. Facebook Twitter LinkedIn WhatsApp Email

Related Posts

4 ದಿನದ ಅಂತರದಲ್ಲಿ ಕಾಡಾನೆಗೆ ಇಬ್ಬರು ಬಲಿ ಹಿನ್ನಲೆ: ನಾಳೆ ಬಾಳೆಹೊನ್ನೂರು, ಖಾಂಡ್ಯ ಹೋಬಳಿ ಬಂದ್ ಗೆ ಕರೆ

27/07/2025 10:08 PM1 Min Read

BREAKING: ರಾಜ್ಯದಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ

27/07/2025 9:10 PM1 Min Read

ಸಾಗರ ಗ್ರಾಮಾಂತರ ಮಂಡಲದ ಬಿಜೆಪಿ ಅಧ್ಯಕ್ಷರಾಗಿ ‘ದೇವೇಂದ್ರಪ್ಪ ಯಲಕುಂದ್ಲಿ’ ಪುನರಾಯ್ಕೆ

27/07/2025 8:56 PM1 Min Read
Recent News

ಪಾಕಿಸ್ತಾನದಲ್ಲಿ 4.0 ತೀವ್ರತೆಯ ಭೂಕಂಪ | Earthquake

28/07/2025 8:56 AM

ಈಸಿಜೆಟ್ ವಿಮಾನದಲ್ಲಿ ಬಾಂಬ್ ಸ್ಫೋಟದ ಬೆದರಿಕೆ, ಟ್ರಂಪ್ ವಿರುದ್ಧ ಘೋಷಣೆ ಕೂಗಿದ ವ್ಯಕ್ತಿ ಬಂಧನ | bomb threat

28/07/2025 8:36 AM

ಗಾಝಾದಲ್ಲಿ ‘ಕದನ ವಿರಾಮ’ ಘೋಷಿಸಿದ ಇಸ್ರೇಲ್ | Israel-Hamas war

28/07/2025 8:17 AM

BREAKING: ಉತ್ತರಪ್ರದೇಶದಲ್ಲಿ ವಿದ್ಯುತ್ ಆಘಾತದಿಂದ ಕಾಲ್ತುಳಿತ: ಇಬ್ಬರು ಸಾವು, 40ಕ್ಕೂ ಹೆಚ್ಚು ಮಂದಿಗೆ ಗಾಯ

28/07/2025 8:12 AM
State News
KARNATAKA

4 ದಿನದ ಅಂತರದಲ್ಲಿ ಕಾಡಾನೆಗೆ ಇಬ್ಬರು ಬಲಿ ಹಿನ್ನಲೆ: ನಾಳೆ ಬಾಳೆಹೊನ್ನೂರು, ಖಾಂಡ್ಯ ಹೋಬಳಿ ಬಂದ್ ಗೆ ಕರೆ

By kannadanewsnow0927/07/2025 10:08 PM KARNATAKA 1 Min Read

ಚಿಕ್ಕಮಗಳೂರು: ಜಿಲ್ಲೆಯಲ್ಲಿ ನಾಲ್ಕು ದಿನದ ಅಂತರದಲ್ಲಿ ಕಾಡಾನೆಗೆ ಇಬ್ಬರು ಬಲಿಯಾಗಿದ್ದಾರೆ. ಇಂತಹ ಕಾಡಾನೆ ಸೆರೆಹಿಡಿಯಲು ವಿಫಲವಾದಂತ ಅರಣ್ಯ ಇಲಾಖೆ ವಿರುದ್ಧ…

BREAKING: ರಾಜ್ಯದಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ

27/07/2025 9:10 PM

ಸಾಗರ ಗ್ರಾಮಾಂತರ ಮಂಡಲದ ಬಿಜೆಪಿ ಅಧ್ಯಕ್ಷರಾಗಿ ‘ದೇವೇಂದ್ರಪ್ಪ ಯಲಕುಂದ್ಲಿ’ ಪುನರಾಯ್ಕೆ

27/07/2025 8:56 PM

ಕ್ರಿಯಾಶೀಲ ಪತ್ರಕರ್ತರು ಸಮಾಜದ ಆಸ್ತಿ: ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು

27/07/2025 8:52 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.