ಗದಗ: ಈಗಾಗಲೇ ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯ ಬದಲಾವಣೆ ಆಗುವಂತ ಸುದ್ದಿ ಹರಿದಾಡುತ್ತಿದೆ. ಒಂದೆಡೆ ಡಿ.ಕೆ ಶಿವಕುಮಾರ್ ಸಿಎಂ ಆಗ್ತಾರೆ ಅಂತ ಸ್ವಾಮೀಜಿಗಳು ಭವಿಷ್ಯ ನುಡಿದ್ರೆ, ಮತ್ತೊಂದೆಡೆ ಇಮ್ಮಡಿ ಸಿದ್ಧರಾಮೇಶ್ವರ ಶ್ರೀಗಳು ಸಚಿವ ಹೆಚ್.ಕೆ ಪಾಟೀಲ್ ಮುಖ್ಯಮಂತ್ರಿ ಆಗಲಿದ್ದಾರೆ ಅಂತ ಭವಿಷ್ಯ ನುಡಿದ್ದಾರೆ.
ಇಂದು ನಗರದಲ್ಲಿ ನಡೆದಂತ ಸಿದ್ಧರಾಮೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದಂತ ಬೋವಿ ಗುರುಪೀಠ ಮಠದ ಇಮ್ಮಡಿ ಸಿದ್ಧರಾಮೇಶ್ವರ ಶ್ರೀಗಳು, ಸಚಿವ ಹೆಚ್.ಕೆ ಪಾಟೀಲ್ ಅವರಿಗೆ ಸಿಎಂ ಆಗುವ ಯೋಗವಿತ್ತು. ಅಲ್ಲದೇ ಈ ಹಿಂದೆಯೇ 2, 3 ಬಾರಿ ಆಗುತ್ತಿದ್ದರು. ಆದರೇ ಅದು ಸಾಧ್ಯವಾಗಲಿಲ್ಲ ಎಂದರು.
ಎಸ್ ಎಂ ಕೃಷ್ಣ ಬಳಿಕ ಸಿಎಂ ಸ್ಥಾನಕ್ಕೆ ಹೆಚ್.ಕೆ ಪಾಟೀಲ್ ಅವರ ಹೆಸರು ಮುಂಚೂಣಿಯಲ್ಲಿ ಕೇಳಿ ಬಂದಿತ್ತು. ಈಗ ತಡವಾಗಿಯಾದರೂ ಸಚಿವ ಹೆಚ್.ಕೆ ಪಾಟೀಲ್ ಅವರಿಗೆ ಸಿಎ ಆಗುವ ಯೋಗ ಕೂಡಿ ಬರಲಿದೆ ಅಂತ ಸಿದ್ಧರಾಮೇಶ್ವರ ಶ್ರೀಗಳು ಭವಿಷ್ಯವನ್ನು ನುಡಿದಿದ್ದಾರೆ.
BREAKING: ರಾಜ್ಯದಲ್ಲಿ ಮತ್ತೊಂದು ಕೀಚಕ ಕೃತ್ಯ: 8 ವರ್ಷದ ಬಾಲಕಿಯ ಮೇಲೆ ಮೂವರಿಂದ ಗ್ಯಾಂಗ್ ರೇಪ್
SHOCKING : ಈ `ಎಣ್ಣೆ’ ಸೇವನೆಯಿಂದ ಮಧುಮೇಹ, ಕ್ಯಾನ್ಸರ್, ಹೃದಯಾಘಾತದ ಅಪಾಯ ಹೆಚ್ಚಳ.!