ಸುಭಾಷಿತ :

Monday, February 24 , 2020 1:30 AM

ನಾನೊಬ್ಬ ಮಂತ್ರಿಯಷ್ಟೇ, ಸಂಪುಟ ವಿಸ್ತರಣೆ ಬಗ್ಗೆ ನನಗೇನೂ ಗೊತ್ತಿಲ್ಲ : ಜಗದೀಶ್ ಶೆಟ್ಟರ್


Sunday, January 26th, 2020 6:27 pm

ಬೆಳಗಾವಿ : ಸಂಪುಟ ವಿಸ್ತರಣೆ ಮಾಡುವುದು ಸಿಎಂ ಅವರ ಪರಮಾಧಿಕಾರ. ಕ್ಯಾಬಿನೆಟ್ ವಿಸ್ತರಣೆಯೋ ಅಥವಾ ಪುನರ್ ರಚನೆಯೋ ನನಗೇನೂ ಗೊತ್ತಿಲ್ಲ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟದಲ್ಲಿ ನಾನೊಬ್ಬ ಮಂತ್ರಿಯಷ್ಟೇ. ಮುಖ್ಯಮಂತ್ರಿ ಕೈಗೊಳ್ಳುವ ನಿರ್ಧಾರಕ್ಕೆ ನಾನು ಬದ್ದನಾಗಿರುತ್ತೇನೆ. ಯಾವಾಗ ಸಂಪುಟ ವಿಸ್ತರಣೆ ಆಗುತ್ತದೆಯೋ ಯಾರನ್ನು ತೆಗೆದುಕೊಳ್ಳುತ್ತಾರೋ ಅಥವಾ ಸಂಪುಟದಿಂದ ಯಾರನ್ನು ಕೈಬಿಡುತ್ತಾರೋ ಗೊತ್ತಿಲ್ಲ ಎಂದು ಹೇಳಿದರು.

ಇದೇ ವೇಳೆ, ದಾವೋಸ್ ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆ ಕಾರ್ಯಕ್ರಮದ ಬಗ್ಗೆ ಪ್ರಸ್ತಾಪಿಸಿದ ಜಗದೀಶ್ ಶೆಟ್ಟರ್, ಹಲವು ಕೈಗಾರಿಕೋದ್ಯಮಿಗಳಿಂದ ದೊಡ್ಡ ಮಟ್ಟದ ಪ್ರತಿಕ್ರಿಯೆ ದೊರೆತಿದೆ. ಮೂರೇ ದಿನಗಳಲ್ಲಿ ನಲವತ್ತಕ್ಕೂ ಹೆಚ್ಚು ಕೈಗಾರಿಕೋದ್ಯಮಿಗಳನ್ನು ಭೇಟಿ ಮಾಡಿದ್ದು, ಅವರು ರಾಜ್ಯದಲ್ಲಿ ಹೂಡಿಕೆ ಮಾಡಲು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆಂದು ವಿವರಿಸಿದರು…

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions