Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಡಿ.ಕೆ ಶಿವಕುಮಾರ್ ಸಂಪುಟದಲ್ಲಿ ಸಚಿವರಾಗಿ ಡಾ.ಜಿ ಪರಮೇಶ್ವರ್, ವಿ.ಮುನಿಯಪ್ಪ ಪ್ರಮಾಣವಚನ ಸ್ವೀಕಾರ

BREAKING: ಕರ್ನಾಟಕದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ | DK Shivakumar CM Oath

BIG BREAKING: ಅಜ್ಜಯ್ಯನ ಹೆಸರಿನಲ್ಲಿ ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಚಿವ ಜಮೀರ್ ರಾಜೀನಾಮೆಗೆ, ವಸತಿ ಹಂಚಿಕೆ ಹಗರಣದ ನ್ಯಾಯಾಂಗ ತನಿಖೆಗೆ ಸಿ.ಟಿ ರವಿ ಒತ್ತಾಯ
KARNATAKA

ಸಚಿವ ಜಮೀರ್ ರಾಜೀನಾಮೆಗೆ, ವಸತಿ ಹಂಚಿಕೆ ಹಗರಣದ ನ್ಯಾಯಾಂಗ ತನಿಖೆಗೆ ಸಿ.ಟಿ ರವಿ ಒತ್ತಾಯ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಭ್ರಷ್ಟಾಚಾರ ಬಿಟ್ಟು ಕಾಂಗ್ರೆಸ್ ಇಲ್ಲ; ಕಾಂಗ್ರೆಸ್ ಬಿಟ್ಟು ಭ್ರಷ್ಟಾಚಾರ ಇಲ್ಲ. ಕಾಂಗ್ರೆಸ್ ಮತ್ತು ಭ್ರಷ್ಟಾಚಾರ ಒಂದು ನಾಣ್ಯದ ಎರಡು ಮುಖಗಳು ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಆರೋಪಿಸಿದ್ದಾರೆ.

ನಗರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅಂಗೈ ಹುಣ್ಣಿಗೆ ಕನ್ನಡಿ ಹಿಡಿಯುವ ಅವಶ್ಯಕತೆ ಇಲ್ಲವೋ ಹಾಗೆ ಕಾಂಗ್ರೆಸ್ ಭ್ರಷ್ಟಾಚಾರ ನೋಡುವುದಕ್ಕೆ ನಾವು ಸ್ಕ್ಯಾನ್ ಮಾಡುವ ಅವಶ್ಯಕತೆ ಇಲ್ಲ; ಕಣ್ಣಿಗೆ ಕಾಣುತ್ತದೆ ಎಂದು ನುಡಿದರು.

ಕಾಂಗ್ರೆಸ್ ಶಾಸಕರಾದ ಬಿ.ಆರ್ ಪಾಟೀಲ್ ಅವರ ಹೇಳಿಕೆಯಲ್ಲದೆ ಎಲ್ಲ ವಿಷಯವು ಕಣ್ಣಿಗೆ ಕಾಣುತ್ತದೆ. ಮೋಹನ್ ದಾಸ್ ಪೈ ರವರು ಹೇಳಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಬಿಲ್ಡರ್ಸ್‍ಗಳ ಕಷ್ಟ ಏನು ಎನ್ನುವುದನ್ನು ಅವರಿಗೆ ಆದ ಅನುಭವದ ಆಧಾರದಲ್ಲಿ ವ್ಯಕ್ತಪಡಿಸಿದರು. ಇವತ್ತು ಪ್ಲಾನ್ ಮಂಜೂರು ಮಾಡಬೇಕಾದರೆ ಒಂದು ಅಡಿಗೆ 100 ರೂ ಕೊಡಬೇಕು, ಭೂ ಬದಲಾವಣೆ ಮಾಡಬೇಕಾದರೆ 25 ಲಕ್ಷ ರೂ ಅನ್ನು ಒಂದು ಎಕರೆ ಜಮೀನಿಗೆ ಕೊಡಬೇಕು. ಕಾಂಗ್ರೆಸ್ ಸರ್ಕಾರ ಎಲ್ಲದರಲ್ಲೂ ಲಂಚ ಪಡೆಯುತ್ತಿದೆ ಎಂದು ಆರೋಪಿಸಿದರು.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಲಂಚ ಕೊಟ್ಟರೆ ಮಾತ್ರ ಮೊದಲು ಅನುದಾನ ಸಿಗುತ್ತದೆ. ಇದು ಕೇವಲ ಅಡ್ವಾನ್ಸ್; ಬಿಲ್ಲು ಮಾಡಿಸಿಕೊಳ್ಳಲು ಪ್ರತ್ಯೇಕ, ಎನ್‍ಓಸಿ ತೆಗೆದುಕೊಳ್ಳುವುದಕ್ಕೆ ಪ್ರತ್ಯೇಕ, ಕಾಮಗಾರಿ ತೆಗೆದುಕೊಳ್ಳಲು ಲಂಚ ಕೊಡಬೇಕು. ಯಾವ ಇಲಾಖೆಯಲ್ಲೂ ಭ್ರಷ್ಟಾಚಾರ ಬಿಟ್ಟಿಲ್ಲ. ರಕ್ತ ಹೀರುತ್ತಿದ್ದಾರೆ, ಜಿಗಣೆಯಾದರೆ ರಕ್ತವನ್ನು ಹೀರಿ ಬಿಡುತ್ತದೆ. ಆದರೆ ಇವರು ಹೀರುತ್ತಲೇ ಇದ್ದಾರೆ ಎಂದು ಟೀಕಿಸಿದರು.

ಕಾಂಗ್ರೆಸ್ಸಿನ ಹಲವಾರು ಶಾಸಕರು ನಮ್ಮ ಕ್ಷೇತ್ರದಲ್ಲಿ ಕಲ್ಲು ಇಡಲು ಆಗುತ್ತಿಲ್ಲ, ಚರಂಡಿ ಮಾಡಲು ಆಗುತ್ತಿಲ್ಲ ಎಂದು ತಮ್ಮ ಅಳಲನ್ನು ತೋಡಿಕೊಳ್ಳುತ್ತಿದ್ದಾರೆ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ಬಹುತೇಕ ಶಾಸಕರ ಒಳ ಸಂಕಟವಿದು. ಕೆಲವರು ಬಾಯಿ ಬಿಟ್ಟು ಹೇಳುತ್ತಾರೆ; ಕೆಲವರು ಬಾಯಿಬಿಟ್ಟು ಹೇಳುವುದಿಲ್ಲ ಇದು ಒಳ ಸಂಕಟ. ಇಂತಹ ಬಹುತೇಕ ಶಾಸಕರು ಇದ್ದಾರೆ. ಆಡಳಿತ ಪಕ್ಷದ ಶಾಸಕರ ಈ ಪರಿಪಾಠ ಆದರೆ ಇನ್ನು ವಿಪಕ್ಷ ಶಾಸಕರ ಗತಿ ಏನು ಆಗಬೇಕೆಂದು ಯೋಚನೆ ಮಾಡಿ ಎಂದು ಹೇಳಿದರು.

ಆಡಳಿತ ಪಕ್ಷದ ಶಾಸಕರೇ ಈ ಪರಿ ಪರಿತಾಪ ಪಡುತ್ತಿದ್ದಾರೆ. ಇನ್ನು ವಿಪಕ್ಷ ಶಾಸಕರ ಗೋಳು ಇದೆ. ಆದರೆ ಅವರ ಗೋಳು ಹೇಳಿಕೊಂಡರೆ ಪ್ರಯೋಜನವಿಲ್ಲ. ಗೋರ್ಕಲ್ಲ ಮೇಲೆ ಮಳೆ ಸುರಿದಂತೆ- ಸರ್ವಜ್ಞ ಎಂಬಂತೆ ಆಗಿದೆ ಎಂದು ಟೀಕಿಸಿದರು.

ಇದರ ಮೇಲೆ ಮುಖ್ಯಮಂತ್ರಿಗಳು ಬಿ.ಆರ್. ಪಾಟೀಲ್ ಕರೆದು ಮಾತನಾಡುತ್ತೇನೆ; ಹೆಚ್.ಕೆ ಪಾಟೀಲ್ ಅವರನ್ನು ಕರೆದು ಮಾತನಾಡುತ್ತೇನೆ; ರಾಜು ಕಾಗೆ ಅವರನ್ನು ಕರೆದು ಮಾತನಾಡುತ್ತೇನೆ ಎಂದು ಹೇಳುತ್ತಾರೆ. ಅಂದರೆ ಅವರೆಲ್ಲರು ಪ್ರೀತಿಯಿಂದ ನಿರಾಶೆಯಾದವರೇ ಎಂದು ತಿಳಿಸಿದರು.

ಇದು ಭ್ರಷ್ಟಾಚಾರದ ಪ್ರಶ್ನೆ, ಬಡವರಿಗೆ ಕೊಡುವ ಮನೆಯಲ್ಲಿ ಲೂಟಿ ಹೊಡೆದಿದ್ದಾರೆ. ಅವರೆಲ್ಲರನ್ನು ಕರೆದು ಮಾತನಾಡಿ ಭ್ರಷ್ಟಾಚಾರ ಮುಚ್ಚುಹಾಕುವುದಲ್ಲ. ನಿಮಗೆ ಪ್ರಾಮಾಣಿಕತೆ ಇದ್ದರೆ; ಬಡವರಿಗೆ ಅನ್ಯಾಯವಾಗಬಾರದು ಎಂದರೆ ನಿಮ್ಮ ಗೃಹ ಮಂತ್ರಿಯಾದ ಜಮೀರ್ ಅಹಮದ್ ಅವರ ರಾಜೀನಾಮೆ ತೆಗೆದುಕೊಂಡು, ಸ್ವತಂತ್ರ ನ್ಯಾಯಾಧೀಶರ ನ್ಯಾಯಾಂಗ ಸಮಿತಿ ನೇಮಿಸಿ ತನಿಖೆ ನಡೆಸಲು ಆಗ್ರಹಿಸಿದರು.

ರಾಜ್ಯ ಸರ್ಕಾರದಿಂದ ವೈದ್ಯಕೀಯ ಉಪಕರಣಗಳ ಮೇಲ್ವಿಚಾರಣೆ, ನಿರ್ವಹಣೆಗೆ ‘ಇ-ಉಪಕರಣ ತಂತ್ರಾಂಶ’ ಅನುಷ್ಠಾನ

ದೊಡ್ಡರಂಗೇಗೌಡ ಆರೋಗ್ಯ ವಿಚಾರಿಸಿದ ಸಚಿವ ಶಿವರಾಜ ತಂಗಡಗಿ: ವೈದ್ಯಕೀಯ ವೆಚ್ಚ ಸರ್ಕಾರವೇ ಭರಿಸುವುದಾಗಿ ಘೋಷಣೆ

Share. Facebook Twitter LinkedIn WhatsApp Email

Related Posts

BREAKING: ಡಿ.ಕೆ ಶಿವಕುಮಾರ್ ಸಂಪುಟದಲ್ಲಿ ಸಚಿವರಾಗಿ ಡಾ.ಜಿ ಪರಮೇಶ್ವರ್, ವಿ.ಮುನಿಯಪ್ಪ ಪ್ರಮಾಣವಚನ ಸ್ವೀಕಾರ

1 Min Read

BREAKING: ಕರ್ನಾಟಕದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ | DK Shivakumar CM Oath

3 Mins Read

BIG BREAKING: ಅಜ್ಜಯ್ಯನ ಹೆಸರಿನಲ್ಲಿ ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

3 Mins Read
Recent News

BREAKING: ಡಿ.ಕೆ ಶಿವಕುಮಾರ್ ಸಂಪುಟದಲ್ಲಿ ಸಚಿವರಾಗಿ ಡಾ.ಜಿ ಪರಮೇಶ್ವರ್, ವಿ.ಮುನಿಯಪ್ಪ ಪ್ರಮಾಣವಚನ ಸ್ವೀಕಾರ

BREAKING: ಕರ್ನಾಟಕದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ | DK Shivakumar CM Oath

BIG BREAKING: ಅಜ್ಜಯ್ಯನ ಹೆಸರಿನಲ್ಲಿ ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

dks take oath

BIG BREAKING : ಸಂವಿಧಾನ ಹಿಡಿದುಕೊಂಡು ಮುಖ್ಯಮಂತ್ರಿ ಯಾಗಿ ಪ್ರಮಾಣ ವಚನ ಸ್ವೀಕರ ಮಾಡಿದ ಡಿಕೆ ಶಿವಕುಮಾರ್

State News
KARNATAKA

BREAKING: ಡಿ.ಕೆ ಶಿವಕುಮಾರ್ ಸಂಪುಟದಲ್ಲಿ ಸಚಿವರಾಗಿ ಡಾ.ಜಿ ಪರಮೇಶ್ವರ್, ವಿ.ಮುನಿಯಪ್ಪ ಪ್ರಮಾಣವಚನ ಸ್ವೀಕಾರ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ ಬಳಿಕ, ಡಾ.ಜಿ ಪರಮೇಶ್ವರ್ ಅವರು ಅಂಬೇಡ್ಕರ್ ಹೆಸರಿನಲ್ಲಿ,…

BREAKING: ಕರ್ನಾಟಕದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ | DK Shivakumar CM Oath

BIG BREAKING: ಅಜ್ಜಯ್ಯನ ಹೆಸರಿನಲ್ಲಿ ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

dks take oath

BIG BREAKING : ಸಂವಿಧಾನ ಹಿಡಿದುಕೊಂಡು ಮುಖ್ಯಮಂತ್ರಿ ಯಾಗಿ ಪ್ರಮಾಣ ವಚನ ಸ್ವೀಕರ ಮಾಡಿದ ಡಿಕೆ ಶಿವಕುಮಾರ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.