ಬೆಂಗಳೂರು: ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಅವರ ಕುರಿತು ವಸತಿ ಸಚಿವ ಜಮೀರ್ ಅಹಮದ್ ಅವರು ನೀಡಿರುವ ಹೇಳಿಕೆ ನಾಗರೀಕ ಸಮಾಜ ಒಪ್ಪುವಂಥದ್ದಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಲ್ಲರಿಗೂ ಒಂದು ಗೌರವ ಇದ್ದೇ ಇರುತ್ತದೆ. ಶ್ರೀಮಂತ ಇರಲಿ, ಬಡವ ಇರಲಿ, ಎಲ್ಲರಿಗೂ ಅವರದ್ದೇ ಆದ ಗೌರವ ಇರುತ್ತದೆ. ಹಾಗಾಗಿ ಯಾರೂ ಯಾರನ್ನೂ ಕೊಂಡುಕಳ್ಳಲು ಆಗುವುದಿಲ್ಲ.
ಇದರ ಅರಿವು ಇರುವವರು ಯಾರೂ ಹೀಗೆ ಮಾತನಾಡುವುದಿಲ್ಲ ಎಂದು ಹೇಳಿದರು.
ಹಿಂದಿನ ಬಿಜೆಪಿ ಸರ್ಕಾರದ ವಿರುದ್ದ ಕಾಂಗ್ರೆಸ್ ಮಾಡಿದ್ದ 40% ಆರೋಪ ಸುಳ್ಳು ಎಂದು ಲೋಕಾಯುಕ್ತ ವರದಿಯಲಿ ಉಲ್ಲೇಖ ಮಾಡಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಾನು ವಿಚಾರದ ಬಗ್ಗೆ ಈಗ ಮಾತನಾಡುವುದಿಲ್ಲ. ಈಗಾಗಲೇ ನಮ್ಮ ರಾಜ್ಯಾಧ್ಯಕ್ಷರು, ವಿಪಕ್ಷ ನಾಯಕರು ಮಾತನಾಡಿದ್ದಾರೆ. ಉಪಚುನಾವಣೆ ಫಲಿತಾಂಶ ಬಂದ ನಂತರ ನಾನು ಮಾತನಾಡುತ್ತೇನೆ, ಅಲ್ಲೀವರೆಗೂ ನಾನು ಮಾತನಾಡುವುದಿಲ್ಲ. 40% ಆರೋಪದ ಬಗ್ಗೆ ಯಾವುದು ಸತ್ಯ ಯಾವುದು ಅಸತ್ಯ ಅನ್ನುವ ಬಗ್ಗೆ ನವೆಂಬರ್ 23 ರ ನಂತರ ನಾನು ಮಾತನಾಡುತ್ತೇನೆ ಎಂದರು.
ಹಿಂದಿನ ಬಿಜೆಪಿ ಸರ್ಕಾರದ ವಿರುದ್ದ ಕಾಂಗ್ರೆಸ್ ಸರ್ಕಾರ ತನಿಖೆಗೆ ಮುಂದಾಗಿರುವ ಕುರಿತು ಕೇಳಿದ ಪ್ರಶ್ನೆಗೆ ಎಲ್ಲ ಪ್ರಶ್ನೆಗಳಿಗೂ ಉಪ ಚುನಾವಣಾ ಫಲಿತಾಂಶ ಬಂದ ನಂತರವೇ ಮಾತನಾಡುತ್ತೇನೆ ಎಂದು ಹೇಳಿದರು.
‘ಒಂದೇ ದಿನದಲ್ಲಿ 5 ಲಕ್ಷ ನಾಗರಿಕರು ಪ್ರಯಾಣ’ : ಇತಿಹಾಸ ನಿರ್ಮಿಸಿದ ‘ಭಾರತೀಯ ವಾಯುಯಾನ’
BREAKING : ಯಾವುದೇ ಕಾರ್ಡ್ ಗಳನ್ನು ರದ್ದು ಮಾಡುತ್ತಿಲ್ಲ : ಸ್ಪಷ್ಟನೆ ನೀಡಿದ ಆಹಾರ ಸಚಿವ ಕೆ.ಎಚ್ ಮುನಿಯಪ್ಪ