ಸುಭಾಷಿತ :

Monday, February 24 , 2020 3:07 AM

ಬ್ರೇಕಿಂಗ್ : ಸಚಿವ ಮಾಧುಸ್ವಾಮಿ ‘ಸಚಿವ ಸ್ಥಾನ’ಕ್ಕೆ ರಾಜೀನಾಮೆ.?


Sunday, January 26th, 2020 12:59 pm

ತುಮಕೂರು : ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾಗಿ ಕಾರ್ಯನಿರ್ವಹಿಸುತ್ತಿರುವ ಜೆಸಿ ಮಾಧುಸ್ವಾಮಿ, ಸಚಿವ ಸ್ಥಾನ ತೊರೆಯಲು ಮುಂದಾಗಿದ್ದಾರೆ. ಪಕ್ಷಕ್ಕೆ ಒಳ್ಳೆಯದು ಆಗೋದಾದರೇ, ನಾನು ಖುಷಿಯಿಂದ ಸಚಿವ ಸ್ಥಾನ ಬಿಡಲು ಸಿದ್ಧ. ನಾಯಕರು ಒಪ್ಪೋದಾದ್ರೇ ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಸಚಿವ ಜೆಸಿ ಮಾಧುಸ್ವಾಮಿ ತಿಳಿಸಿದ್ದಾರೆ.

ನಗರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಜೆಸಿ ಮಾಧುಸ್ವಾಮಿ, ಪಕ್ಷದ ಮುಖಂಡರು ಒಪ್ಪುವುದಾದರೇ ನಾನು ಸಚಿವ ಸ್ಥಾನ ತ್ಯಜಿಸಲು ಸಿದ್ದನಿದ್ದೇನೆ. ಪಕ್ಷಕ್ಕೆ ಒಳ್ಳೆಯದು ಆಗೋದಾದ್ರೇ ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ.

ಈ ಹಿನ್ನಲೆಯಲ್ಲಿ ಕಾನೂನು ಮತ್ತು ಸಂಸದೀಯ ಸಚಿವ ಜೆಸಿ ಮಾಧುಸ್ವಾಮಿಯವರು ಸಂಪುಟ ವಿಸ್ತರಣೆಯಾದಲ್ಲಿ, ಸಚಿವ ಸ್ಥಾನದಿಂದ ಕೆಳಗೆ ಇಳಿಯಲಿದ್ದಾರೆ. ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಮೂಲಕ ರಾಜ್ಯ ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ಸಂಪುಟ ವಿಸ್ತರಣೆ ಗರಿಗೆದರಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions