ಬೆಳಗಾವಿ ಸುವರ್ಣಸೌಧ: ಕರ್ನಾಟಕ ಅಗತ್ಯ ವಸ್ತುಗಳ ಸಾರ್ವಜನಿಕ ವಿತರಣಾ ಪದ್ಧತಿ ನಿಯಂತ್ರಣ 2016 ಕಲಂ (6) ರಲ್ಲಿ ಹೊಸ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಅವಕಾಶ ಕಲ್ಪಿಸಲಾಗಿದ್ದು, ಅದರಂತೆ ಅಗತ್ಯಾನುಸಾರ ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿಗೆ ಕ್ರಮ ವಹಿಸಲಾಗುತ್ತಿದೆ. ಸಣ್ಣ ಸಣ್ಣ ಗ್ರಾಮದ ಪಡಿತರ ಚೀಟಿದಾರರಿಗೆ ತೊಂದರೆಯಾಗದಂತೆ ನ್ಯಾಯಬೆಲೆ ಅಂಗಡಿ ವರ್ತಕರಿಗೆ ಗ್ರಾಮಗಳಲ್ಲಿ ಉಪ ಕೇಂದ್ರಗಳನ್ನು ತೆರೆದು ಆಹಾರ ಧಾನ್ಯ ಹಂಚಿಕೆ ಮಾಡಲು ಕ್ರಮ ವಹಿಸಲಾಗುವುದು. ಪಡಿತರ ಚೀಟಿಗಳ ಸಂಖ್ಯಾನುಸಾರ ಅಗತ್ಯವಿದ್ದಲ್ಲಿ ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಕ್ರಮ ವಹಿಸಲಾಗುವುದು ಎಂಬುದಾಗಿ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ತಿಳಿಸಿದ್ದಾರೆ.
ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಶಾಸಕ ಶರಣಗೌಡ ಕಂದಕೂರ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಆಹಾರ ಸಚಿವರಾದ ಕೆ.ಎಚ್.ಮುನಿಯಪ್ಪ ಅವರ ಉತ್ತರಿಸಿದರು.
ಪರಿಶಿಷ್ಟ ಜಾತಿ ಆಥವಾ ಪರಿಶಿಷ್ಟ ಪಂಗಡ ಸಮುದಾಯಗಳ ಜನಸಂಖ್ಯೆಯು 40%ಕ್ಕಿಂತ ಹೆಚ್ಚಿರುವ ನ್ಯಾಯಬೆಲೆ ಅಂಗಡಿ ಪ್ರದೇಶದಲ್ಲಿ ಆದ್ಯತೆಯ ಮೇರೆಗೆ ಹೊಸ ನ್ಯಾಯಬೆಲೆ ಅಂಗಡಿಗಳು ಮತ್ತು ನವೀಕರಿಸಿದ ನ್ಯಾಯಬೆಲೆ ಅಂಗಡಿಗಳನ್ನು ಆ ಸಮುದಾಯದವರಿಗೆ ನೀಡಲು ಅಧಿಸೂಚನೆಯನ್ನು ಹೊರಡಿಸಲಾಗಿದೆ ತಿಳಿಸಿದರು.
ಹೊಸ ನ್ಯಾಯಬೆಲೆ ಅಂಗಡಿಗಳನ್ನು ಮಂಜೂರು ಮಾಡುವ ಸಂದರ್ಭದಲ್ಲಿ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಸಮುದಾಯದ ಸಂಘ ಸಂಸ್ಥೆಗಳಿಗೆ / ಸಮುದಾಯದ ಖಾಸಗಿ ವ್ಯಕ್ತಿಗಳಿಗೆ ಮೀಸಲಾತಿಯನ್ನು ಅನುಸರಿಸಿ ಹೊಸ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಆದ್ಯತೆ ನೀಡುವ ಬಗ್ಗೆ ಜಿಲ್ಲಾ ಮಟ್ಟದ ಸಮಿತಿಯನ್ನು ರಚಿಸಿ ಮಾರ್ಗಸೂಚಿಗಳನ್ನು ಸಹ ಹೊರಡಿಸಲಾಗಿದೆ. ಸರ್ಕಾರದ ಆದೇಶದಂತೆ 75 ವಯಸ್ಸಿನ ಮೇಲ್ಪಟ್ಟ ಒಂಟಿ ಹಿರಿಯ ನಾಗರೀಕರು ಮಾತ್ರ ಇರುವ ಮನೆಗಳಿಗೆ ಅನ್ನ ಸುವಿಧಾ ಯೋಜನೆಯ ಮೂಲಕ ಅರ್ಹ ಫಲಾನುಭವಿಗಳ ಮನೆ ಬಾಗಿಲಿಗೆ ಪಡಿತರ ವಿತರಣೆ ಕಾರ್ಯವನ್ನು ಅನುಷ್ಠಾನಗೊಳಿಸಲಾಗಿರುತ್ತದೆ ಎಂದರು.
ರಾಜ್ಯದ ‘ಪೌರ ಕಾರ್ಮಿಕ’ರಿಗೆ ಗುಡ್ ನ್ಯೂಸ್: ಸರ್ಕಾರದಿಂದಲೇ ‘ವೇತನ ಪಾವತಿ’ಗೆ ಚಿಂತನೆ
BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : ‘ಆರೋಗ್ಯ ಸಂಜೀವಿನಿ ಯೋಜನೆ’ಗೆ ಜಸ್ಟ್ ಈ ರೀತಿ ಅರ್ಜಿ ಸಲ್ಲಿಸಿ.!








