ಹಾಸನ: ಹಾಸನಾಂಬೆ ದೇವಿಯ ದರ್ಶನಕ್ಕೆ ಜನಸಾಗರವೇ ಹರಿದು ಬರುತ್ತಿದೆ. ಈ ವೇಳೆಯಲ್ಲಿ ಭಕ್ತರಿಗೆ ಕಂದಾಯ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಈ ಕೆಳಕಂಡಂತೆ ಮಹತ್ವದ ಅಪ್ ಡೇಟ್ ನೀಡಿದ್ದಾರೆ.
ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗೆಡಮ ಮಾಡಿರುವಂತ ಅವರು, ದರ್ಶನ ಬಹಳ ಸರಾಗವಾಗಿ ನಡೆಯುತ್ತಿದೆ. ನಿನ್ನೆ ಸುಮಾರು 2 ಲಕ್ಷ ಜನರು ದರ್ಶನ ಪಡೆದಿದ್ದಾರೆ. ಪ್ರಸ್ತುತ ವರ್ಷ ಇಲ್ಲಿಯವರೆಗೆ 23,00,000 ಜನರು ದರ್ಶನ ಪಡೆದಿದ್ದಾರೆ. ಕಳೆದ ವರ್ಷದ ಒಟ್ಟಾರೆ 17,46,000 ಜನ ದರ್ಶನ ಪಡೆದಿದ್ದರು ಎಂದಿದ್ದಾರೆ.
ಈ ವರ್ಷ ₹ 300/1000 ಟಿಕೆಟ್ ಸಾಲಿನಲ್ಲಿ 3,40,260 ಜನರು ದರ್ಶನ ಪಡೆದಿದ್ದಾರೆ. ಕಳೆದ ವರ್ಷ ಈ ಸಾಲಿನಲ್ಲಿ ಒಟ್ಟಾರೆ 1,29,956 ಜನ ದರ್ಶನ ಪಡೆದಿದ್ದರು. ಇಂದು ಮತ್ತು ನಾಳೆ ದರ್ಶನ ಲಭ್ಯವಿದೆ. ಇಂದು ಮಧ್ಯಾಹ್ನ 2 ರಿಂದ 3.30 ರವರೆಗೆ ನೈವೇದ್ಯ ಇರುವುದರಿಂದ ಭಕ್ತರಿಗೆ ದರ್ಶನಕ್ಕೆ ಅವಕಾಶ ಇರುವುದಿಲ್ಲ ಎಂಬುದಾಗಿ ಮಹತ್ವದ ಮಾಹಿತಿ ನೀಡಿದ್ದಾರೆ.
ಇಂದು ಕ್ಯೂ ಲೈನ್‌ಗಳ ಪ್ರವೇಶ ದ್ವಾರಗಳು ರಾತ್ರಿ 9 ಗಂಟೆಗೆ ಮುಚ್ಚಲ್ಪಡುತ್ತವೆ ಮತ್ತು ದರ್ಶನ ಮಧ್ಯರಾತ್ರಿ 12 ಗಂಟೆಗೆ ನಿಲ್ಲುತ್ತದೆ. ಬುಧವಾರ – ದರ್ಶನ ಬೆಳಿಗ್ಗೆ 5 ರಿಂದ ಪ್ರಾರಂಭವಾಗಿ ಸಂಜೆ 7 ಗಂಟೆಯವರೆಗೆ ನಿರಂತರವಾಗಿ ಮುಂದುವರಿಯುತ್ತದೆ. ಸಾರ್ವಜನಿಕ ದರ್ಶನ ಸಂಜೆ 7 ಗಂಟೆಗೆ ಮುಗಿಯುತ್ತದೆ. ಅದರ ನಂತರ ಸಾರ್ವಜನಿಕ ದರ್ಶನವಿಲ್ಲ. ಗುರುವಾರ – ಸಾರ್ವಜನಿಕರಿಗೆ ಅವಕಾಶವಿಲ್ಲ ಎಂಬುದಾಗಿ ತಿಳಿಸಿದ್ದಾರೆ.
ಸಾಲ ಲಕ್ಷ ಇರಲಿ ಕೋಟಿ ಇರಲಿ ಎಲೆ ಲವಂಗ ಏಲಕ್ಕಿ ಪ್ರಯೋಗ ಮಾಡಿ ! ಸಾಲ ತೀರೋದು ಗ್ಯಾರಂಟಿ